For Quick Alerts
ALLOW NOTIFICATIONS  
For Daily Alerts
 

ವಿರಾಟ್ ಕೊಹ್ಲಿ 100ನೇ ಟೆಸ್ಟ್: ಕಡೆಗೂ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟ ಬಿಸಿಸಿಐ!

India vs Sri lanka: BCCI decide to allow 50 percent crowd for Virat Kohlis 100th Test

ಭಾರತ ಹಾಗೂ ಶ್ರೀಲಂಕಾ ವಿರುದ್ಧಧ ಟೆಸ್ಟ್ ಸರಣಿಯ ಮೊದಲ ಪಂದ್ಯ ಮೊಹಾಲಿಯಲ್ಲಿ ನಡೆಯಲಿದ್ದು ಈ ಪಂದ್ಯ ವಿರಾಟ್ ಕೊಹ್ಲಿಯ ನೂರನೇ ಟೆಸ್ಟ್ ಪಂದ್ಯವಾಗಿದೆ. ಆದರೆ ಕೊರೊನಾವೈರಸ್ ಕಾರಣದಿಂದಾಗಿ ಈ ಪಂದ್ಯಕ್ಕೆ ಅಭಿಮಾನಿಗಳಿಗೆ ಅವಕಾಶವನ್ನು ನೀಡದಿರಲು ಬಿಸಿಸಿಐ ನಿರ್ಧರಿಸಿತ್ತು. ಆದರೆ ವಿರಾಟ್ ಕೊಹ್ಲಿ ವೃತ್ತಿ ಜೀವನದಲ್ಲಿ ಮೈಲುಗಲ್ಲಾಗಿರುವ ಈ ಪಂದ್ಯಕ್ಕೆ ಪ್ರೇಕ್ಷಕರಿಗೆ ಅವಕಾಶವಿಲ್ಲದಿರುವುದು ಅಭಿಮಾನಿಗಳ ನಿರಾಸೆಗೆ ಕಾರಣವಾಗಿತ್ತು. ಹೀಗಾಗಿ ಅಭಿಮಾನಿಗಳು ಅವಕಾಶ ಕಲ್ಪಿಸಲು ಪಟ್ಟು ಹಿಡಿದಿದ್ದರು.

ಇದೀಗ ಕಡೆಗೂ ಅಭಿಮಾನಿಗಳ ಒತ್ತಾಯಕ್ಕೆ ಬಿಸಿಸಿಐ ಮಣಿದಿದ್ದು ಮೊಹಾಲಿ ಪಂದ್ಯದಲ್ಲಿ ಪ್ರೇಕ್ಷಕರಿಗೆ ಅವಕಾಶ ನೀಡಲು ಬಿಸಿಸಿಐ ನಿರ್ಧಾರ ತೆಗೆದುಕೊಂಡಿದೆ. ಕ್ರೀಡಾಂಗಣದ ಸಾಮರ್ಥ್ಯದ ಶೇಕಡಾ 50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಬಿಸಿಸಿಐ ನಿರ್ಧಾರ ಮಾಡಿದೆ.

ಈ ವಿಚಾರವಾಗಿ ಬಿಸಿಸಿಐ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್‌ಗೆ 50 ಶೇಕಡಾದಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ಹೀಗಾಗಿ ವಿರಾಟ್ ಕೊಹ್ಲಿ ಟೆಸ್ಟ್ ವೃತ್ತಿ ಜೀವನದ 100ನೇ ಪಂದ್ಯಕ್ಕೆ ಸಾಕ್ಷಿಯಾಗಲಿರುವ ಪ್ರೇಕ್ಷಕರಿಗೆ ಯಾವಾಗ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ ಎಂಬುದು ಖಚಿತವಾಗಿಲ್ಲ. ಟಿಕೆಟ್ ಮುದ್ರಣಕ್ಕೆ ಸಮಯಾವಕಾಶ ಕಡಿಮೆ ಇರುವ ಕಾರಣ ಆನ್‌ಲೈನ್‌ನಲ್ಲಿಯೇ ಟಿಕೆಟ್ ಮಾರಾಟ ಮಾಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಭಾರತ ಹಾಗೂ ಶ್ರೀಲಂಕಾ ನಡುವಿನ ಮೊದಲ ಪಂದ್ಯ ಮಾರ್ಚ್ 4 ಶುಕ್ರವಾರದಂದು ಆರಂಭವಾಗಲಿದೆ.

ಇನ್ನು ಪ್ರೇಕ್ಷಕರಿಗೆ ಅವಕಾಶ ನಿಡುತ್ತಿರುವ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅಧಿಕರತ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ವಿರಾಟ್ ಕೊಹ್ಲಿಯ 100ನೇ ಟೆಸ್ಟ್ ಪಂದ್ಯವನ್ನು ಪ್ರೇಕ್ಷಕರ ಉಪಸ್ಥಿತಿಯಲ್ಲಿ ನಡೆಸಲು ಎದುರು ನೋಡುತ್ತಿದ್ದೇವೆ ಎಂದಿದ್ದಾರೆ. "ಭಾರತ ಹಾಗೂ ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಶನ್‌ನ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ಇದನ್ನು ಮುಚ್ಚಿನ ಬಾಗಿಲಿನಲ್ಲಿ ನಡೆಸಲಾಗುವುದಿಲ್ಲ" ಎಂದಿದ್ದಾರೆ.

"ಪ್ರೇಕ್ಷಕರಿಗೆ ಮೈದಾನದೊಳಕ್ಕೆ ಅನುಮತಿ ನೀಡುವ ನಿರ್ಧಾರವನ್ನು ರಾಜ್ಯ ಕ್ರಿಕೆಟ್ ಸಂಸ್ಥೆಗಳು ತೆಗೆದುಕೊಳ್ಳುತ್ತವೆ. ಈ ವಿಚಾರ ಪ್ರಸ್ತುತ ಸಂದರ್ಭಗಳಲ್ಲಿ ವಿವಿಧ ಅಂಶಗಳನ್ನು ಆಧರಿಸಿ ತೆಗೆದುಕೊಳ್ಳಲಾಗುತ್ತದೆ. ನಾನು ಪಿಸಿಎ ಪದಾಧಿಕಾರಿಗಳೊಂದಿಗೆ ಮಾತನಾಡಿದ್ದು ವಿರಾಟ್ ಕೊಹ್ಲಿ ತಮ್ಮ 100 ನೇ ಟೆಸ್ಟ್ ಪಂದ್ಯವನ್ನು ಆಡುವ ಐತಿಹಾಸಿಕ ಕ್ಷಣವನ್ನು ಕ್ರಿಕೆಟ್ ಅಭಿಮಾನಿಗಳು ವೀಕ್ಷಿಸಲು ಸಾಧ್ಯವಾಗುತ್ತದೆ ಎಂದು ಅವರು ಖಚಿತಪಡಿಸಿದ್ದಾರೆ" ಎಂದು ಜಯ್ ಶಾ ತಿಳಿಸಿದ್ದಾರೆ.

ನಾನು ನಿಜವಾಗಿಯೂ ವಿರಾಟ್ ಕೊಹ್ಲಿ ಅವರ 100ನೇ ಟೆಸ್ಟ್‌ ಪಂದ್ಯವನ್ನು ಕಣ್ತುಂಬಿಕೊಳ್ಳಲು ಎದುರು ನೋಡುತ್ತಿದ್ದೇನೆ. ನಮ್ಮ ಚಾಂಪಿಯನ್ ಕ್ರಿಕೆಟಿಗನಿಗೆ ಈ ಸಂದರ್ಭದಲ್ಲಿ ನಾನು ಶುಭ ಹಾರೈಸುತ್ತೇನೆ. ಇದು ಅಭಿಮಾನಿಗಳಿಗೆ ಆನಂದಿಸುವ ಸಂದರ್ಭವಾಗಿದೆ. ವಿರಾಟ್ ಕೊಹ್ಲಿ ಮುಂದಿನ ಹಲವು ಪಂದ್ಯಗಳಲ್ಲಿ ದೇಶವನ್ನು ಪ್ರತಿನಿಧಿಸುತ್ತಾ ಉತ್ತಮ ಪ್ರದರ್ಶನ ನೀಡುವುದನ್ನು ಮುಂದುವರಿಸಲಿ" ಎಂದು ಜಯ್ ಶಾ ವಿರಾಟ್ ಕೊಹ್ಲಿಗೆ ಶುಭಹಾರೈಸಿದ್ದಾರೆ.

ಇನ್ನು ವಿರಾಟ್ ಕೊಹ್ಲಿ ಆಡುತ್ತಿರುವ 100ನೇ ಟೆಸ್ಟ್ ಪಂದ್ಯದಲ್ಲಿ ಅಭಿಮಾನಿಗಳಿಗೆ ಅವಕಾಶ ನೀಡದಿರುವ ಬಗ್ಗೆ ವಿರಾಟ್ ಕೊಹ್ಲಿ ಅಭಿಮಾನಿಗಳು ಸಾಕಷ್ಟು ಬೇಸರವನ್ನು ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿಯೂ ಈ ಬಗ್ಗೆ ಅಭಿಯಾನಗಳು ಆರಂಭವಾಗಿತ್ತು. ಮತ್ತೊಂದೆಡೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ಈ ವಿಚಾರವಾಗಿ ಬೇಸರವನ್ನು ವ್ಯಕ್ತಪಡಿಸಿದ್ದರು. ಈ ಎಲ್ಲಾ ಹಿನ್ನೆಲೆಯಲ್ಲಿ ಬಿಸಿಸಿಐ ಈ ಮಹತ್ವದ ಪಂದ್ಯದಲ್ಲಿ ಪ್ರೇಕ್ಷಕರು ಭಾಗಿಯಾಗಲು ಅವಕಾಶವನ್ನು ನೀಡಲು ಮುಂದಾಗಿದೆ.

Story first published: Wednesday, March 2, 2022, 10:02 [IST]
Other articles published on Mar 2, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+