For Quick Alerts
ALLOW NOTIFICATIONS  
For Daily Alerts
 

W 0 W W 4 W: ಸಿರಾಜ್ ವಿಶ್ವದಾಖಲೆಯ ದಾಳಿಗೆ ಕ್ರಿಕೆಟ್‌ಲೋಕ ದಂಗು: ಹೀನಾಯ ಸ್ಥಿತಿಯಲ್ಲಿ ಶ್ರೀಲಂಕಾ

ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಬೌಲಿಂಗ್‌ಗೆ ಶ್ರೀಲಂಕಾ ಅಕ್ಷರಶಃ ತತ್ತರಿಸಿ ಹೋಗಿದೆ. ಟೀಮ್ ಇಂಡಿಯಾದ ಆರಂಭಿಕ ಬೌಲಿಂಗ್ ಜೋಡಿಯಾದ ಜಸ್ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಶ್ರೀಲಂಕಾ ತಂಡಕ್ಕೆ ಯಾರೂ ನಿರೀಕ್ಷೆ ಮಾಡದ ಆಘಾತ ನೀಡಿದ್ದಾರೆ. ತಾನು ಎಸೆದ ನಾಲ್ಕನೇ ಓವರ್‌ನಲ್ಲಿ ಸಿರಾಜ್ ಒಂದಲ್ಲ ಎರಡಲ್ಲ ಬರೊಬ್ಬರಿ 4 ವಿಕೆಟ್ ಕಬಳಿಸಿ ಭಾರೀ ಆಘಾತ ನೀಡಿದ್ದಾರೆ.

ಈ ಪಂದ್ಯದ ಆರಂಭದಲ್ಲಿಯೇ ಶ್ರೀಲಂಕಾ ತಂಡಕ್ಕೆ ಬೂಮ್ರಾ ಆಘಾತ ನೀಡಿದರು. ಎರಡನೇ ಎಸೆತದಲ್ಲಿಯೇ ವಿಕೆಟ್ ಪಡೆಯುವ ಮೂಲಕ ಆಘಾತ ನಿಡಿದರು. ಆದರೆ ಪಂದ್ಯದ ನಾಲ್ಕನೇ ಓವರ್‌ನಲ್ಲಿ ಸಿರಾಜ್ ಲಂಕಾ ಆಟಗಾರರನ್ನು ಸಂಪೂರ್ಣವಾಗಿ ಹೆಡೆಮುರಿಕಟ್ಟಿದ್ದಾರೆ. ಈ ಒಂದೇ ಓವರ್‌ನಲ್ಲಿ ಶ್ರೀಲಂಕಾ ತಂಡದ ನಾಲ್ವರು ಆಟಗಾರರನ್ನು ಔಟ್ ಮಾಡಿ ಶ್ರೀಲಂಕಾಗೆ ಆಘಾತ ನೀಡಿದರು. ಅದಾದ ನಂತರ ತನ್ನ ಮುಂದಿನ ಓವರ್‌ನಲ್ಲಿ ಸಿರಾಜ್ ಮತ್ತೊಂದು ವಿಕೆಟ್ ಪಡೆಯುವ ಮೂಲಕ ಕೇವಲ 12 ರನ್‌ಗಳಿಗೆ 6 ವಿಕೆಟ್ ಕಳೆದುಕೊಳ್ಳುವಂತೆ ಮಾಡಿದರು.

India vs Sri Lanka Final: Mohammed Siraj record breaking spell, 4 wickets in 1 Over

ವಿಶ್ವದಾಖಲೆ ಬರೆದ ಸಿರಾಜ್

ಈ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ವಿಶ್ವದಾಖಲೆಯನ್ನು ಬರೆದಿದ್ದಾರೆ. ಕೇವಲ 16 ಎಸೆತಗಳಲ್ಲಿಯೇ ಐದು ವಿಕೆಟ್‌ಗಳ ಗೊಂಚಲು ಪಡೆಯುವ ಮೂಲಕ ಅತ್ಯಂತ ವೇಗವಾಗಿ ಐದು ವಿಕೆಟ್ ಗೊಂಚಲು ಪಡೆದ ಬೌಲರ್ ಎನ್ನುವ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದಕ್ಕೂ ಮುನ್ನ ಶ್ರೀಲಂಕಾದ ದಿಗ್ಗಜ ವೇಗಿ ಚಾಮಿಂಡಾ ವಾಸ್ ಕೂಡ 16 ಎಸೆತಗಳಲ್ಲಿಯೇ ಐದು ವಿಕೆಟ್ ಗೊಂಚಲು ಪಡೆದ ದಾಖಲೆ ಹೊಂದಿದ್ದರು. ಆ ದಾಖಲೆಯನ್ನು ಸಿರಾಜ್ ಸರಿಗಟ್ಟುವಲ್ಲಿ ಯಶಸ್ವಿಯಾದರು.

ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್
ಬೆಂಚ್: ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಪ್ರಸಿದ್ಧ್ ಕೃಷ್ಣ, ತಿಲಕ್ ವರ್ಮಾ

ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ದಸುನ್ ಶನಕ (ನಾಯಕ), ದುನಿತ್ ವೆಲ್ಲಲಗೆ, ದುಶನ್ ಹೇಮಂತ, ಪ್ರಮೋದ್ ಮದುಶನ್, ಮತೀಶ ಪತಿರಣ
ಬೆಂಚ್: ಕಸುನ್ ರಜಿತಾ, ಬಿನೂರ ಫೆರ್ನಾಂಡೋ, ದಿಮುತ್ ಕರುಣಾರತ್ನೆ, ಸಹನ್ ಅರಚ್ಚಿಗೆ

Story first published: Sunday, September 17, 2023, 16:27 [IST]
Other articles published on Sep 17, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+