IND vs SL 1st ODI: ಶ್ರೀಲಂಕಾ ಎದುರು ಗೆಲ್ಲುವ ಪಂದ್ಯ ಟೈ ಮಾಡಿಕೊಂಡ ಭಾರತ!
ಆಗಸ್ಟ್ 2 ಶುಕ್ರವಾರ, ಕೊಲಂಬೊದ ಆರ್.ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ಮತ್ತು ಭಾರತ ನಡುವಿನ ಪಂದ್ಯ ಟೈ ಆಗಿದೆ. ಕೊನೆ ಹಂತದಲ್ಲಿ ಗೆಲ್ಲುವ ಪಂದ್ಯವನ್ನು ಭಾರತ ಡ್ರಾ ಮಾಡಿಕೊಂಡಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿತು. ಶ್ರೀಲಂಕಾ ನೀಡಿದ ಈ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ 47.5 ಓವರ್‌ಗಳಲ್ಲಿ 230 ರನ್‌ಗಳಿಗೆ ಆಲೌಟಾಯಿತು.

ಶ್ರೀಲಂಕಾ ಇನ್ನಿಂಗ್ಸ್
ಶ್ರೀಲಂಕಾ ಪರ ಪಾಥುಮ್ ನಿಸ್ಸಾಂಕಾ ಮತ್ತು ಅವಿಷ್ಕಾ ಫೆರ್ನಾಂಡೋ ಅವರು ಇನಿಂಗ್ಸ್ ಆರಂಭಿಸಿದರು. ಆದರೆ ಮೊಹಮ್ಮದ್ ಸಿರಾಜ್ ಮೂರನೇ ಓವರ್‌ನಲ್ಲಿ 1 ರನ್ ಗಳಿಸಿದ ಅವಿಷ್ಕಾ ಫೆರ್ನಾಂಡೊ ಅವರ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ಇದಾದ ಬಳಿಕ ಕುಸಾಲ್ ಮೆಂಡಿಸ್ (14), ಸದಿರ ಸಮರವಿಕ್ರಮ (8), ಚರಿತ್ ಅಸಲಂಕ (14), ಜನಿತ್ ಲಿಯಾನಗೆ (20) ರನ್ ಗಳಿಸಿ ಔಟಾದರು. ಇದೇ ವೇಳೆ ಪಾಥುಮ್ ನಿಸ್ಸಾಂಕ 75 ಎಸೆತಗಳಲ್ಲಿ 9 ಬೌಂಡರಿಗಳ ನೆರವಿನಿಂದ 54 ರನ್ ಗಳಿಸಿದರು.
ನಂತರ 65 ಎಸೆತಗಳಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 67 ರನ್ ಗಳಿಸಿದ ದುನಿತ್ ವೆಲಾಲ ಲಂಕಾ ತಂಡಕ್ಕೆ ಆಸರೆಯಾದರು. ಇವರಿಂದಾಗಿ ಶ್ರೀಲಂಕಾ ಭಾರತಕ್ಕೆ 230 ರನ್‌ಗಳ ಟಾರ್ಗೆಟ್ ನೀಡಿತು.
ಶ್ರೀಲಂಕಾ ನೀಡಿದ 231 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಅರ್ಧಶತಕ ಗಳಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 12.4 ಓವರ್‌ಗಳಲ್ಲಿ 75 ರನ್ ಸೇರಿಸಿದರು.
ಭಾರತದ ಚೇಸಿಂಗ್
ಶುಭಮನ್ ಗಿಲ್ 16 ರನ್ ಗಳಿಸಿ ವಿಕೆಟ್ ಕಳೆದುಕೊಂಡರು. ಇದಾದ ಬಳಿಕ ರೋಹಿತ್ ಶರ್ಮಾ 47 ಎಸೆತಗಳಲ್ಲಿ 7 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 58 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು.
ವಾಷಿಂಗ್ಟನ್ ಸುಂದರ್ (5), ವಿರಾಟ್ ಕೊಹ್ಲಿ (24) ಮತ್ತು ಶ್ರೇಯಸ್ ಅಯ್ಯರ್ 23 ರನ್ ಗಳಿಸಿ ಔಟಾದರು. ಈ ಹಂತದಲ್ಲಿ ಟೀಮ್ ಇಂಡಿಯಾ 24.2 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 132 ರನ್ ಗಳಿಸಿತ್ತು.
ಕೆಎಲ್ ರಾಹುಲ್ ಮತ್ತು ಅಕ್ಷರ್ ಪಟೇಲ್ 6ನೇ ವಿಕೆಟ್‌ಗೆ 57 ರನ್‌ಗಳ ಜೊತೆಯಾಟವಾಡಿದರು. ಈ ಮೂಲಕ ಭಾರತಕ್ಕೆ ಗೆಲುವಿನ ಆಸೆ ಚಿಗುರಿಸಿದರು. ಉತ್ತಮವಾಗಿ ಆಡುತ್ತಿದ್ದ ರಾಹುಲ್ 31 ಹಾಗೂ ಅಕ್ಷರ್ 33 ರನ್ ಗಳಿಸಿ ಔಟಾದರು.
ಕುಲ್‌ದೀಪ್ (2) ಶಿವಂ ದುಬೆ (25) ಮೊಹಮ್ಮದ್ ಸಿರಾಜ್ (5) ಅರ್ಷದೀಪ್ ಸಿಂಗ್ 1 ರನ್ ಗಳಿಸಲು ಸಾಧ್ಯವಾಗದೆ ಕೊನೆಯಲ್ಲಿ ವಿಕೆಟ್ ಕಳೆದುಕೊಂಡರು. ಇದರಿಂದಾಗಿ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ಟೈ ಆಯಿತು.
ಭಾರತಕ್ಕೆ ಗೆಲ್ಲಲು 1 ರನ್ ಅಗತ್ಯವಿತ್ತು. ಈ ವೇಳೆ 2 ಎಸೆತಗಳಲ್ಲಿ 2 ವಿಕೆಟ್ ಕಬಳಿಸುವ ಮೂಲಕ ಚರಿತ್ ಅಸಂಲಕ ಪಂದ್ಯಕ್ಕೆ ತಿರುವು ನೀಡಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications