ಲಕ್ನೋದಲ್ಲಿ ಭಾರತಕ್ಕೆ ಸಾಟಿಯಾಗದ ಲಂಕಾ; ಟೀಮ್ ಇಂಡಿಯಾಗೆ ಬೃಹತ್ ಗೆಲುವು

ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಅಧಿಕಾರಿಯುತ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಲಕ್ನೋದಲ್ಲಿ ನಡೆದ ಮೂರು ಪಮದ್ಯಗಳ ಟಿ20 ಸರಣಿಯ ಮೊದಲ ಪಮದ್ಯದಲ್ಲಿ ಭಾರತ ಎಲ್ಲಾ ವಿಭಾಗದಲ್ಲಿಯೂ ಅದ್ಭುತ ಪ್ರದರ್ಶನ ನೀಡಿದ್ದು ಸುಲಭ ಗೆಲುವು ಸಾಧಿಸಿದೆ. ಭರ್ಜರಿ 62 ರನ್‌ಗಳ ಅಂತರದ ಗೆಲುವು ಸಾಧಿಸಿರುವ ಭಾರತ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಆಯ್ದ ಭಾರತ ಭರ್ಜರಿ ಬ್ಯಾಟಿಂಗ್ ನಡೆಸಿತು. ಅಗ್ರ ಕ್ರಮಾಂಕದ ಆಟಗಾರರ ಅಬ್ಬರದ ಪ್ರದರ್ಶನದಿಂದಾಗಿ ಟೀಮ್ ಇಂಡಿಯಾ ಭಾರೀ ಮೊತ್ತವನ್ನು ಕಲೆಹಾಕಿತು. ಟೀಮ್ ಇಂಡಿಯಾ ದಾಂಡಿಗರನ್ನು ಕಟ್ಟಿಹಾಕಲು ಲಂಕಾ ಬೌಲರ್‌ಗಳು ಯಾವ ಹಂತದಲ್ಲಿಯೂ ಸಫಲವಾಗಲಿಲ್ಲ. ಇಶಾನ್ ಕಿಶನ್, ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಐಯ್ಯರ್ ಅಮೋಘ ಬ್ಯಾಟಿಂಗ್ ಪ್ರದರ್ಶನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡಿತು. ನಂತರ ಬ್ಯಾಟಿಂಗ್‌ನಲ್ಲಿಯೂ ಭಾರತಕ್ಕೆ ಪ್ರತಿರೋಧವೊಡ್ಡುವಲ್ಲಿ ವಿಫಲವಾದ ಲಂಕಾ ಬಳಗ ನಿಗದಿತ 20 ಓವರ್‌ಗಳಲ್ಲಿ ಕೇವಲ 137 ರನ್‌ಗಳಿಸಲಷ್ಟೇ ಶಕ್ತವಾಯಿತು.

ಅಬ್ಬರದ ಆರಂಭ ಪಡೆದ ಭಾರತ
ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಮೊದಲ ವಿಕೆಟ್‌ಗೆ 111 ರನ್‌ಗಳ ಭರ್ಜರಿ ಜೊತೆಯಾಟ ನೀಡಿದರು. ಈ ಸಂದರ್ಭದಲ್ಲಿ 32 ಎಸೆತಗಳಲ್ಲಿ 44 ರನ್ ಗಳಿಸಿದ್ದ ರೋಹಿತ್ ಶರ್ಮಾ ಲಹಿರು ಕುಮಾರ ಎಸೆತದಲ್ಲಿ ಬೌಲ್ಡ್ ಆಗುವ ಮೂಲಕ ಪೆವಿಲಿಯನ್ ಸೇರಿಕೊಂಡರು. ನಂತರ ಇಶಾನ್ ಕಿಶನ್ ಅವರನ್ನು ಶ್ರೇಯಸ್ ಐಯ್ಯರ್ ಸೇರಿಕೊಂಡು ಮತ್ತೊಂದು ಉತ್ತಮ ಜೊತೆಯಾಟದಲ್ಲಿ ಭಾಗಿಯಾಗಿದರು. ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡ ನಂತರವೂ ಇಶಾನ್ ಕಿಶನ್ ತಮ್ಮ ಸ್ಪೋಟಕ ಪ್ರದರ್ಶನವನ್ನು ಮುಂದುವರಿಸಿದ್ದರು.

ಶತಕದಂಚಿನಲ್ಲಿ ಎಡವಿದ ಇಶಾನ್
89 ರನ್‌ಗಳಿಸಿದ್ದ ಸಂದರ್ಭದಲ್ಲಿ ಇಶಾನ್ ಕಿಶನ್ ದೊಡ್ಡ ಹೊಡೆತಕ್ಕೆ ಕೈ ಹಾಕಿ ವಿಕೆಟ್ ಕಳೆದುಕೊಳ್ಳುವ ಮೂಲಕ ಶತಕ ಗಳಿಸುವ ಉತ್ತಮ ಅವಕಾಶವನ್ನು ಕಳೆದುಕೊಂಡರು. 56 ಎಸೆತಗಳನ್ನು ಎದುರಿಸಿದ್ದ ಇಶಾನ್ ಕಿಶನ್ 10 ಬೌಂಡರಿ ಹಾಗೂ 3 ಸಿಕ್ಸರ್ ಸಿಡಿಸಿ ಮಿಂಚಿದ್ದರು. ಶತಕ ಗಳಿಸಲು ವಿಫಲವಾದರು ಕೂಡ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಬ್ಯಾಟಿಂಗ್‌ನಲ್ಲಿ ಅನುಭವಿಸಿದ್ದ ಹಿನ್ನಡೆಯಿಂದ ಫಾರ್ಮ್‌ಗೆ ಮರಳುವಲ್ಲಿ ಯಶಸ್ವಿಯಾಗಿದ್ದು ತಂಡಕ್ಕೆ ಸಕಾರಾತ್ಮಕ ಅಂಶವಾಗಿದೆ. ಇನ್ನು ಇಶಾನ್ ಕಿಶನ್ ವಿಕೆಟ್ ಕಳೆದುಕೊಂಡ ಬಳಿಕ ಶ್ರೇಯಸ್ ಐಯ್ಯರ್ ತಮ್ಮ ರನ್ ವೇಗವನ್ನು ಹೆಚ್ಚಿಸಿದರು. 28 ಎಸೆತಗಳನ್ನು ಎದುರಿಸಿದ ಶ್ರೇಯಸ್ ಐಯ್ಯರ್ 57 ರನ್‌ಗಳನ್ನು ಗಳಿಸಿ ತಂಡದ ದೊಡ್ಡ ಮೊತ್ತಕ್ಕೆ ಕಾರಣವಾದರು.

ಬ್ಯಾಟಿಂಗ್‌ನಲ್ಲಿಯೂ ಎಡವಿದ ಲಂಕಾ
ಇನ್ನು ಬೌಲಿಂಗ್‌ನಲ್ಲಿ ಮಿಂಚಲು ವಿಫಲವಾದ ಶ್ರೀಲಂಕಾ ಪಡೆ ಬ್ಯಾಟಿಂಗ್‌ನಲ್ಲಿಯೂ ಸಮರ್ಥ ಪ್ರತಿರೋಧವೊಡ್ಡಲು ವಿಫಲವಾಯಿತು. ಪಂದ್ಯದ ಮೊದಲ ಎಸೆತದಲ್ಲಿಯೇ ವಿಕೆಟ್ ಕಳೆದುಕೊಂಡ ಶ್ರೀಲಂಕಾ ವಿರುದ್ಧ ಭಾರತೀಯ ಬೌಲರ್‌ಗಳು ಸಂಪೂರ್ಣವಾಗಿ ನಿಯಂತ್ರಣ ಸಾಧಿಸುತ್ತಾ ಸಾಗಿದರು. ಶ್ರೀಲಂಕಾ ಪರವಾಗಿ ಮದ್ಯಮ ಕ್ರಮಾಂಕದ ಆಟಗಾರ ಚರಿತ ಅಸಲಂಕಾ ಹೊರತುಪಡಿಸಿ ಅಗ್ರ ಕ್ರಮಾಂಕದ ಯಾವ ಆಟಗಾರ ಕೂಡ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಕೆಳ ಕ್ರಮಾಂಕದಲ್ಲಿ ಚಾಮಿಕ ಕರುಣರತ್ನೆ ಹಾಗೂ ದುಷ್ಮಂತ ಚಮೀರ ಸಣ್ಣ ಹೋರಾಟ ನಡೆಸಿದರೂ ಇದು ಲಂಕಾ ಪಾಲಿಗೆ ಪ್ರಯೋಜನಕ್ಕೆ ಬಾರಲಿಲ್ಲ. ಅಂತಿಮವಾಗಿ ಶ್ರೀಲಂಕಾ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 137 ರನ್‌ಗಳಿಸಲಷ್ಟೇ ಶಕ್ತವಾಯಿತು.

ಆಡುವ ಬಳಗ
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ದೀಪಕ್ ಹೂಡಾ, ವೆಂಕಟೇಶ್ ಅಯ್ಯರ್, ಹರ್ಷಲ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಹಾಲ್
ಬೆಂಚ್: ಋತುರಾಜ್ ಗಾಯಕ್ವಾಡ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಆವೇಶ್ ಖಾನ್, ಕುಲದೀಪ್ ಯಾದವ್
ಶ್ರೀಲಂಕಾ ಪ್ಲೇಯಿಂಗ್ XI: ಪಾತುಮ್ ನಿಸ್ಸಾಂಕ, ಚರಿತ್ ಅಸಲಂಕಾ, ಕಮಿಲ್ ಮಿಶ್ರಾ, ದಿನೇಶ್ ಚಂಡಿಮಲ್ (ವಿಕೆಟ್ ಕೀಪರ್), ಜನಿತ್ ಲಿಯಾನಗೆ, ದಸುನ್ ಶನಕ (ನಾಯಕ), ಚಾಮಿಕ ಕರುಣಾರತ್ನೆ, ದುಷ್ಮಂತ ಚಮೀರ, ಪ್ರವೀಣ್ ಜಯವಿಕ್ರಮ, ಜೆಫ್ರಿ ವಾಂಡರ್ಸೆ, ಲಹಿರು ಕುಮಾರ
ಬೆಂಚ್: ದನುಷ್ಕ ಗುಣತಿಲಕ, ಶಿರಾನ್ ಫೆರ್ನಾಂಡೋಆಶಿಯಾನ್ ಡೇನಿಯಲ್, ಬಿನೂರ ಫೆರ್ನಾಂಡೋ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications