Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಶ್ರೀಲಂಕಾ: ಟಿ20 ಸರಣಿಗೆ ಅಲಭ್ಯವಾಗುತ್ತಾರಾ ಕೊಹ್ಲಿ? ಜಡ್ಡು, ಬೂಮ್ರಾ ಕಮ್‌ಬ್ಯಾಕ್ ಸಾಧ್ಯತೆ!

India vs Sri Lanka: Kohli likely to skip t20 series, India squad announcement soon

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿ ನಡೆಯುತ್ತಿದ್ದು ಈ ಸರಣಿಯ ಮುಕ್ತಾಯದ ಬಳಿಕ ಶ್ರೀಲಂಕಾ ವಿರುದ್ಧ ಸರಣಿಗೆ ಭಾರತ ಸಜ್ಜಾಗಲಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಮೊದಲಿಗೆ ಟಿ20 ಮಾದರಿಯಲ್ಲಿ ಎರಡು ತಂಡಗಳು ಮುಖಾಮುಖಿಯಾಗಲಿದ್ದು ಬಳಿಕ ಟೆಸ್ಟ್ ಸರಣಿಯಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಪೈಪೋಟಿ ನಡೆಸಲಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಟಿ0 ಸರಣಿ ಅಂತ್ಯವಾಗುತ್ತಿದ್ದಂತೆಯೇ ಶ್ರೀಲಂಕಾ ವಿರುದ್ಧದ ಟಿ20 ಸರಣಿ ಆರಂಭವಾಗಲಿದ್ದು ಕೇವಲ 4 ದಿನದ ಅಂತರದಲ್ಲಿ ಈ ಸರಣಿ ಆರಂಭವಾಗಲಿದೆ. ಹೀಗಾಗಿ ಶ್ರೀಲಂಕಾ ವಿರುದ್ಧಧ ಟಿ20 ಸರಣಿಯಲ್ಲಿ ಭಾಗಿಯಾಗಲಿರುವ ಭಾರತ ತಂಡವನ್ನು ಆಯ್ಕೆ ಸಮಿತಿ ಶೀಘ್ರದಲ್ಲಿಯೇ ಘೋಷಣೆ ಮಾಡಲಿದೆ. ಭಾನುವಾರಕ್ಕೂ ಮುನ್ನ ತಂಡ ಘೋಷಣೆಯಾಗುವ ಸಾಧ್ಯತೆ ಹೆಚ್ಚಿದೆ.

ಇನ್ನು ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ಇಬ್ಬರು ಪ್ರಮುಖ ಆಟಗಾರರಾದ ರವೀಂದ್ರ ಜಡೇಜಾ ಹಾಗೂ ಜಸ್ಪ್ರೀತ್ ಬೂಮ್ರಾ ಕಮ್‌ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಈ ಆಟಗಾರರು ವೆಸ್ಟ್ ಇಂಡಿಸ್ ವಿರುದ್ಧದ ಸರಣಿಯಿಂದ ವಿಶ್ರಾಂತಿಯನ್ನು ಪಡೆದುಕೊಂಡಿದ್ದರು. ಆದರೆ ಮಾಜಿ ನಾಯಕ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ. ಆದರೆ ಮಾರ್ಚ್ 4ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ದದ ಟೆಸ್ಟ್ ಸರಣಿಗೆ ಕೊಹ್ಲಿ ಮರಳಲಿದ್ದಾರೆ.

ಶ್ರೀಲಂಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿ ಫೆಬ್ರವರಿ 24ರಿಂದ ಆರಂಭವಾಗಲಿದ್ದು ಮೊದಲ ಪಂದ್ಯ ಲಕ್ನೋದಲ್ಲಿ ಆಯೋಜನೆಯಾಗಲಿದೆ. ಈ ಸರಣಿಗಾಗಿ ಶೀಘ್ರದಲ್ಲಿಯೇ ತಂಡದ ಘೋಷಣೆಯನ್ನು ಆಯ್ಕೆ ಸಮಿತಿ ಮಾಡಲಿದೆ.

ಕ್ರಿಕ್ ಬಜ್ ವರದಿಯ ಪ್ರಕಾರ ಆಲ್‌ರೌಂಡರ್ ರವೀಂದ್ರ ಜಡೇಜಾ ಈಗಾಗಲೇ ಲ್ಕೋ ತಲುಪಿದ್ದು ಕ್ವಾರಂಟೈನ್ ಪೂರೈಸುತ್ತಿದ್ದಾರೆ ಎನ್ನಲಾಗಿದೆ. ಮೊದಲ ಟಿ20 ಪಂದ್ಯ ಲಕ್ನೋದ ಎಕಾನ ಸ್ಟೇಡಿಯಂ ನಲ್ಲಿ ನಡೆಯಲಿದ್ದು ಅಂತಿಮ ಎರಡು ಟಿ20 ಪಂದ್ಯಗಳು ಧರ್ಮಶಾಲಾದಲ್ಲಿ ಆಯೋಜನೆಯಾಗಲಿದೆ.

ವಿರಾಟ್ ಕೊಹ್ಲಿಗೆ ವಿಶ್ರಾಂತಿ: ಎರಡು ಪಂದ್ಯಗಳ ಟೆಸ್ಟ್ ಸರಣಿಯ ಹಿನ್ನೆಲೆಯಲ್ಲಿ ಅನುಭವಿ ಆಟಗಾರ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಹೀಗಾಗಿ ವಿರಾಟ್ ಕೊಹ್ಲಿ ತಮ್ಮ 100ನೇ ಟಿ20 ಪಂದ್ಯವನ್ನು ಮುಂದಿನ ಜೂನ್ ತಿಂಗಳಿನಲ್ಲಿ ತವರಿನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಆಡುವ ಸಾಧ್ಯತೆಯಿದೆ. ಆದರೆ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ 100ನೇ ಟೆಸ್ಟ್ ಪಂದ್ಯವನ್ನು ಆಡಲು ಸಜ್ಜಾಗುತ್ತಿದ್ದಾರೆ.

Story first published: Friday, February 18, 2022, 17:36 [IST]
Other articles published on Feb 18, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+