ಭಾರತ ಮತ್ತು ಶ್ರೀಲಂಕಾ ನಡುವಿನ ಪಂದ್ಯಗಳ ದಿನಾಂಕ ಹಾಗೂ ನೇರಪ್ರಸಾರದ ಮಾಹಿತಿ

ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ತಂಡ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದು ಜೂನ್ 18-22ರವರೆಗೆ ನ್ಯೂಜಿಲೆಂಡ್ ವಿರುದ್ಧ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯವನ್ನಾಡಲಿದೆ. ಇದಾದ ಬಳಿಕ ಕೊಹ್ಲಿ ನೇತೃತ್ವದ ಭಾರತ ತಂಡ ಇಂಗ್ಲೆಂಡ್‌ನಲ್ಲಿಯೇ ಬೀಡುಬಿಡಲಿದ್ದು ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ.
ಆರ್‌ಸಿಬಿ ಸರಿಯಾಗಿ ಬಳಸಿಕೊಳ್ಳದೇ ತಂಡದಿಂದ ಕೈಬಿಟ್ಟ ಸ್ಟಾರ್ ಕ್ರಿಕೆಟಿಗರಿವರು!
ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ತಂಡ ಇಂಗ್ಲೆಂಡ್‌ನಲ್ಲಿರುವಾಗಲೇ ಮತ್ತೊಂದು ಭಾರತ ತಂಡ ಜುಲೈ ತಿಂಗಳಿನಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು ಸೀಮಿತ ಓವರ್‌ಗಳ ಸರಣಿಯನ್ನಾಡಲಿದೆ. ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ 3 ಏಕದಿನ ಹಾಗೂ 3 ಟ್ವೆಂಟಿ ಪಂದ್ಯಗಳ ಸರಣಿಗಳು ನಡೆಯಲಿವೆ.
ಐಪಿಎಲ್ 2021 ಪುನರಾರಂಭ, ಫೈನಲ್‌ನ ಪಕ್ಕಾ ದಿನಾಂಕ ಪ್ರಕಟ!
ಜುಲೈ 13, 16 ಹಾಗೂ 18ರಂದು ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ 3 ಏಕದಿನ ಪಂದ್ಯಗಳು ನಡೆಯಲಿದ್ದು, ಜುಲೈ 21, 23 ಹಾಗೂ 25ರಂದು 3 ಟಿ ಟ್ವೆಂಟಿ ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳ ನೇರ ಪ್ರಸಾರದ ಹಕ್ಕನ್ನು ಸೋನಿ ಸ್ಪೋರ್ಟ್ಸ್ ಇಂಡಿಯಾ ಪಡೆದುಕೊಂಡಿದ್ದು ಸೋನಿ ಟೆನ್ 1, ಸೋನಿ ಟೆನ್ 3, ಸೋನಿ ಟೆನ್ 4 ಹಾಗೂ ಸೋನಿ ಸಿಕ್ಸ್ ಚಾನೆಲ್‌ಗಳಲ್ಲಿ ಪಂದ್ಯಗಳ ನೇರಪ್ರಸಾರವನ್ನು ಮಾಡಲಿದೆ.

ಶಿಖರ್ ಧವನ್ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆ
ವಿರಾಟ್ ಕೊಹ್ಲಿ, ರೋಹಿತ್ ಶರ್ಮ ಹಾಗೂ ಅಜಿಂಕ್ಯ ರಹಾನೆ ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಕಾರಣ ಶ್ರೀಲಂಕಾ ವಿರುದ್ಧದ ಸರಣಿಗಳಿಗೆ ಭಾರತದ ನಾಯಕತ್ವವನ್ನು ಶಿಖರ್ ಧವನ್ ವಹಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಯುವ ಆಟಗಾರರಿಗೆ ಉತ್ತಮ ಅವಕಾಶ
ಭಾರತ ತಂಡದ ಅನೇಕ ಖಾಯಂ ಆಟಗಾರರು ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಕಾರಣ ಶ್ರೀಲಂಕಾ ವಿರುದ್ಧದ ಸರಣಿಗಳಿಗೆ ಯುವ ಆಟಗಾರರನ್ನು ಆಯ್ಕೆ ಮಾಡಲಿದ್ದು, ಈ ಸರಣಿಗಳ ಮೂಲಕ ಆ ಯುವ ಆಟಗಾರರು ತಮ್ಮ ಪ್ರತಿಭೆಯನ್ನು ತೋರಿಸಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಲಿದೆ.

ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಆಡಲಿರುವ ಟೀಮ್ ಇಂಡಿಯಾ
ಶ್ರೀಲಂಕಾ ಪ್ರವಾಸದ ಮತ್ತೊಂದು ವಿಶೇಷತೆ ಏನೆಂದರೆ ರಾಹುಲ್ ದ್ರಾವಿಡ್. ಹೌದು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಟೀಮ್ ಇಂಡಿಯಾ ತಂಡಕ್ಕೆ ರಾಹುಲ್ ದ್ರಾವಿಡ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಅಂಡರ್ 19 ಹಾಗೂ ಟೀಮ್ ಇಂಡಿಯಾ ಎ ತಂಡಗಳನ್ನು ಯಶಸ್ವಿಯಾಗಿ ಮುನ್ನಡೆಸಿರುವ ಅನುಭವವನ್ನು ಹೊಂದಿರುವ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಜಯ ಸಾಧಿಸುವುದು ಪಕ್ಕಾ ಎನ್ನಲಾಗುತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications