ಭಾರತ vs ಶ್ರೀಲಂಕಾ 2ನೇ ಏಕದಿನ ಪಂದ್ಯ: ಟಾಸ್ ರಿಪೋರ್ಟ್, Live ಸ್ಕೋರ್ ಹಾಗೂ ಆಡುವ ಬಳಗ

ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಕೊಲ್ಕತ್ತಾದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಆತಿಥೇಯ ಶ್ರೀಲಂಕಾ ಮೊದಲಿಗೆ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಒಂದು ಬದಲಾವಣೆಯೊಂದುಗೆ ಕಣಕ್ಕಿಳಿದಿದೆ. ಯುಜುವೇಂದ್ರ ಚಾಹಲ್ ಮೊದಲ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಭುಜಕ್ಕೆ ಗಾಯಮಾಡಿಕೊಂಡಿರುವ ಕಾರಣ ಈ ಪಂದ್ಯದಲ್ಲಿ ಹೊರಗುಳಿದಿದ್ದು ಕುಲ್‌ದೀಪ್ ಯಾದವ್ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಇನ್ನು ಶ್ರೀಲಂಕಾ ತಂಡ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿದಿದ್ದು ಮದುಶಂಕ ಹಾಗೂ ಫಾತುಮ್ ನಿಸ್ಸಾಂಕ ಆಡುವ ಬಳಗದಿಂದ ಹೊರಬಿದ್ದಿದ್ದು ನುವಾನಿಡು ಫೆರ್ನಾಂಡೋ ಹಾಗೂ ಲಹಿರು ಕುಮಾರ ಅವಕಾಶ ಪಡೆದುಕೊಂಡಿದ್ದಾರೆ
Live score ಹೀಗಿದೆ

ಮುನ್ನಡೆಯಲ್ಲಿದೆ ಭಾರತ
ಇನ್ನು ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ನಡೆಸುವ ಮೂಲಕ ಬೃಹತ್ ಮೊತ್ತವನ್ನು ಗಳಿಸಿತ್ತು. ನಾಯಕ ರೋಹಿತ್ ಶರ್ಮಾ, ಶುಬ್ಮನ್ ಗಿಲ್ ಭರ್ಜರಿ ಅರ್ಧ ಶತಕ ಸಿಡಿಸಿದ್ದರೆ ವಿರಾಟ್ ಕೊಹ್ಲಿ ಅಮೋಘ ಶತಕ ಸಿಡಿಸಿ ಮಿಂಚಿದ್ದರು. ಹೀಗಾಗಿ ಟೀಮ್ ಇಂಡಿಯಾ ಈ ಪಂದ್ಯದಲ್ಲಿ 373 ರನ್‌ಗಳನ್ನು ಗಳಿಸಿತ್ತು. ಇದನ್ನು ಬೆನ್ನಟ್ಟಿದ ಶ್ರೀಲಂಕಾ ತಂಡಕ್ಕೆ ಲಂಕಾ ನಾಯಕ ದಸುನ್ ಶನಕ ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಮದಾಗಿ ಸಾಕಷ್ಟು ಹೋರಾಟ ನಡೆಸಿತು. ಹಾಗಿದ್ದರು ಕೂಡ ಈ ಪಂದ್ಯದಲ್ಲಿ ಶ್ರೀಲಂಕಾ 67 ರನ್‌ಗಳ ಅಂತರದ ಸೋಲು ಅನುಭವಿಸಿತು. ಹೀಗಾಗಿ ಟೀಮ್ ಇಂಡಿಯಾ ಈ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆಯಲ್ಲಿದೆ.

ಟೀಮ್ ಇಂಡಿಯಾ ಆಡುವ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಉಮ್ರಾನ್ ಮಲಿಕ್, ಕುಲ್‌ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಬೆಂಚ್: ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್, ಇಶಾನ್ ಕಿಶನ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್

ಶ್ರೀಲಂಕಾ ಆಡುವ ಬಳಗ
ಶ್ರೀಲಂಕಾ: ಕುಸಾಲ್ ಮೆಂಡಿಸ್(ವಿಕೆಟ್ ಕೀಪರ್), ಅವಿಷ್ಕ ಫೆರ್ನಾಂಡೊ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ನುವಾನಿಡು ಫೆರ್ನಾಂಡೊ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ಲಹಿರು ಕುಮಾರ, ಕಸುನ್ ರಜಿತ
ಬೆಂಚ್: ಮಹೇಶ್ ತೀಕ್ಷಣ, ಅಶೇನ್ ಬಂಡಾರ, ಪ್ರಮೋದ್ ಮದುಶನ್, ಜೆಫ್ರಿ ವಂಡರ್ಸೆ, ಸದೀರ ಸಮರವಿಕ್ರಮ, ಪಾತುಮ್ ನಿಸ್ಸಾಂಕ, ದಿಲ್ಶಾನ್ ಮಧುಶಂಕ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications