ಭಾರತ vs ಶ್ರೀಲಂಕಾ ಟಿ20 ಸರಣಿಗೆ ಕ್ಷಣಗಣನೆ: ವೇಳಾಪಟ್ಟಿ, ಸ್ಕ್ವಾಡ್ ಹಾಗೂ ನೇರಪ್ರಸಾರ ಮಾಹಿತಿ

ಭಾರತ ಹಾಗೂ ಶ್ರೀಲಂಕಾ ತಂಡಗಳು ಟಿ20 ಸರಣಿಯಲ್ಲಿ ಮುಖಾಮುಖಿಯಾಗಲು ಸಜ್ಜಾಗಿದೆ. 2023ರ ಕ್ಯಾಲೆಂಡರ್ ವರ್ಷವನ್ನು ಇತ್ತಂಡಗಳು ಟಿ20 ಸರಣಿಯ ಮೂಲಕ ಆರಂಭಿಸಲಿದ್ದು ಈ ಸರಣಿಗಾಗಿ ಕ್ಷಣಗಣೆ ಆರಂಭವಾಗಿದೆ. ಈಗಾಗಲೇ ಶ್ರೀಲಂಕಾ ತಂಡ ಭಾರತಕ್ಕೆ ಆಗಮಿಸಿದ್ದು ಮೊದಲಿಗೆ ಮೂರು ಪಂದ್ಯಗಳ ಟಿ30 ಸರಣಿಯಲ್ಲಿ ಮುಖಾಮುಖಿಯಾಗಲಿದೆ.
ಭಾರತ ಹಾಗೂ ಶ್ರೀಲಂಕಾ ತಂಡಗಳು ಕೊನೆಯ ಬಾರಿಗೆ ಏಷ್ಯಾ ಕಪ್ ಟೂರ್ನಿಯಲ್ಲಿ ಮುಖಾಮುಖಿಯಾಗಿದ್ದವು. ಸೂಪರ್ 12 ಹಂತದ ಪಂದ್ಯದಲ್ಲಿ ಭಾರತ ತಂಡವನ್ನು ಶ್ರೀಲಂಕಾ 6 ವಿಕೆಟ್‌ಗಳ ಅಂತರದಿಂದ ಮಣಿಸಿತ್ತು. ಹೀಗಾಗಿ ಭಾರತ ಏಷ್ಯಾ ಕಪ್ ಫೈನಲ್ ಹಂತಕ್ಕೇರಲು ವಿಫಲವಾಗಿತ್ತು. ಬಳಿಕ ಏಷ್ಯಾ ಕಪ್‌ನ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಕೂಡ ಮಣಿಸಿದ ಶ್ರೀಲಂಕಾ ಚಾಂಪಿಯನ್ ಪಟ್ಟಕ್ಕೇರಿತು.

ಭಾರತ ಹಾಗೂ ಶ್ರೀಲಂಕಾ ಟಿ20 ಪಂದ್ಯಗಳ ದಿನಾಂಕ ಹಾಗೂ ಸಮಯ
ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದ್ದು ಜನವರಿ 3 ಮಂಗಳವಾರದಂದು ಈ ಪಂದ್ಯ ನಡೆಯಲಿದೆ. ಎರಡನೇ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸಿಸೊಯೇಶನ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಜನವರಿ 5ರಂದು ಈ ಪಂದ್ಯ ಆಯೋಜನೆಯಾಗಲಿದೆ. ಸರಿಯ ಮೂರನೇ ಹಾಗೂ ಅಂತಿಮ ಪಂದ್ಯ ಜನವರಿ 7ರಂದು ರಾಜ್‌ಕೋಟ್‌ನಲ್ಲಿ ನಡೆಯಲಿದೆ. ಈ ಸರಣಿಯ ಮೂರು ಪಂದ್ಯಗಳು ಕೂಡ ಣಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ನೇರಪ್ರಸಾರದ ಮಾಹಿತಿ
ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿಗೆ ಸ್ಟಾರ್ ಸ್ಪೋರ್ಟ್ಸ್ ಅಧಿಕೃತ ಪ್ರಸಾರಕರಾಗಿದ್ದಾರೆ. ಹೀಗಾಗಿ ಸ್ಟಾರ್ ಸ್ಪೋರ್ಟ್ಸ್ ವಾಹಿನಿಯಲ್ಲಿ ಪಂದ್ಯವನ್ನು ನೇರವಾಗಿ ವೀಕ್ಷಿಸುವ ಅವಕಾಶವಿದೆ. ಇನ್ನು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ. 7 ಗಂಟೆಗೆ ಪಂದ್ಯಗಳು ಆರಂಬವಾಗಲಿದ್ದು 6:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಭಾರತ ಸ್ಕ್ವಾಡ್ ಹೀಗಿದೆ
ಟೀಮ್ ಇಂಡಿಯಾ: ಹಾರ್ದಿಕ್ ಪಾಂಡ್ಯ (ನಾಯಕ), ಋತುರಾಜ್ ಗಾಯಕ್ವಾಡ್, ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ರಾಹುಲ್ ತ್ರಿಪಾಠಿ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ಮಾವಿ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್

ಶ್ರೀಲಂಕಾ ತಂಡ ಹೀಗಿದೆ
ಶ್ರೀಲಂಕಾ: ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಸದೀರ ಸಮರವಿಕ್ರಮ, ಕುಸಲ್ ಮೆಂಡಿಸ್, ಭಾನುಕಾ ರಾಜಪಕ್ಸೆ, ಅಶೇನ್ ಬಂಡಾರ, ಮಹೇಶ್ ತೀಕ್ಷಣ, ದಿಲ್ಶನ್ ಮಧುಶಂಕ, ಕಸುನ್ ರಜಿತ, ದುನಿತ್ ವೆಲ್ಲಲಾಗೆ, ಪ್ರಮೋದ್ ಮದುಶನ್, ಲಹಿರು ಕುಮಾರ, ನುವಾನ್ ತುಷಾರ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications