Ind vs SL: ಸತತ ಮೂರನೇ ದಿನ ಮೈದಾನಕ್ಕಿಳಿದ ಭಾರತ ತಂಡದಲ್ಲಿ ಒಂದು ಬದಲಾವಣೆ
ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಸತತ ಮೂರನೇ ದಿನ ಪಂದ್ಯವನ್ನಾಡಲು ಮೈದಾನಕ್ಕೆ ಇಳಿದಂತಾಗಿದೆ. ಭಾನುವಾರ ನಡೆದಿದ್ದ ಭಾರತ ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡಿದ ಕಾರಣ ಸೋಮವಾರ ಮೀಸಲು ದಿನವಾಗಿದ್ದ ಕಾರಣ ಕಣಕ್ಕಿಳಿದಿತ್ತು. ಆ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಂಡ ಬಳಿಕ ಮಂಗಳವಾರ ಮತ್ತೊಂದು ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಲು ಕಣಕ್ಕಿಳಿದಿದೆ.
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದ ಶಾರ್ದೂಲ್ ಠಾಕೂರ್ ಈ ಪಂದ್ಯದಲ್ಲಿ ಹೊರಬಿದ್ದಿದ್ದು ಮತ್ತೋರ್ವ ಸ್ಪಿನ್ ಆಲ್‌ರೌಂಡರ್‌ಗೆ ಅವಕಾಶ ನೀಡಲಾಗಿದೆ. ಹೀಗಾಗಿ ಅಕ್ಷರ್ ಪಟೇಲ್ ಈ ಪಂದ್ಯದಲ್ಲಿ ಭಾತ ತಂಡದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ.

ಇನ್ನು ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಆತಿಥೇಯ ಶ್ರೀಲಂಕಾ ಈ ಪಂದ್ಯದಲ್ಲಿ ಮೊದಲಿಗೆ ಬೌಲಿಂಗ್ ದಾಳಿ ನಡೆಸುವ ಸವಾಲು ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ ಫೈನಲ್‌ಗೇರುವ ಸಾಧ್ಯತೆ ಬಹುತೇಕ ನಿಚ್ಚಳವಾಗಲಿದೆ.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಬೆಂಚ್: ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಪ್ರಸಿದ್ಧ್ ಕೃಷ್ಣ, ತಿಲಕ್ ವರ್ಮಾ, ಶಾರ್ದೂಲ್ ಠಾಕೂರ್
ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ದಸುನ್ ಶಾನಕ (ನಾಯಕ), ದುನಿತ್ ವೆಲ್ಲಲಾಗೆ, ಮಹೇಶ್ ತೀಕ್ಷಣ, ಕಸುನ್ ರಜಿತ, ಮತೀಶ ಪತಿರಣ
ಬೆಂಚ್: ಕುಸಲ್ ಪೆರೇರಾ, ಬಿನೂರ ಫೆರ್ನಾಂಡೋ, ಪ್ರಮೋದ್ ಮದುಶನ್, ದುಶನ್ ಹೇಮಂತ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications