ಭಾರತ vs ಶ್ರೀಲಂಕಾ: ಹೇಗಿರಲಿದೆ ಮೂರನೇ ಏಕದಿನ ಪಂದ್ಯಕ್ಕೆ ಭಾರತೀಯ ತಂಡ!

ಭಾರತ ಹಾಗೂ ಶ್ರೀಲಂಕಾ ನಡುವಿನ ಏಕದಿನ ಸರಣಿಯ ಮೂರನೇ ಪಂದ್ಯ ಶುಕ್ರವಾರ ನಡೆಯಲಿದೆ. ಈಗಾಗಲೇ ಸರಣಿಯನ್ನು ಭಾರತ ತನ್ನ ವಶಕ್ಕೆ ಪಡೆದಿರುವ ಕಾರಣ ಕೆಲ ಬದಲಾವಣೆಗಳನ್ನು ತಂಡದಲ್ಲಿ ಮಾಡಿಕೊಳ್ಳುವ ಸಾಧ್ಯತೆಯಿದೆ. ಯುವ ಆಟಗಾರರ ಪಡೆಯನ್ನೇ ಹೊಂದಿರುವ ತಂಡದಲ್ಲಿ ಮತ್ತಷ್ಟು ಪ್ರತಿಭಾವಂತರಿಗೆ ಅವಕಾಶಗಳು ದೊರೆಯುವ ಸಾಧ್ಯತೆಯಿದೆ.
ಯುವ ಆರಂಭಿಕ ಆಟಗಾರ ಫೃಥ್ವಿ ಶಾ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಆರಂಭಿಕನಾಗಿ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ. ಮೊದಲ ಪಂದ್ಯದಲ್ಲಿ ಸ್ಪೋಟಕ ಪ್ರದರ್ಶನ ನೀಡಿದ ಶಾ ಸಾಕಷ್ಟು ಭರವಸೆಯನ್ನು ಮೂಡಿಸಿದ್ದು ಎರಡನೇ ಪಂದ್ಯದಲ್ಲಿ ಈ ಪ್ರದರ್ಶನ ಮುಂದುವರಿಸುವಲ್ಲಿ ವಿಫಲರಾದರು. ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲು ಶಾಗೆ ಸಾಧ್ಯವಾಗಿರಲಿಲ್ಲ. ಮೂರನೇ ಪಂದ್ಯದಲ್ಲಿ ಪೃಥ್ವಿ ಶಾ ಬದಲಿಗೆ ಕನ್ನಡಿಗ ದೇವದತ್ ಪಡಿಕ್ಕಲ್ ಆರಂಭಿಕನಾಗಿ ಸ್ಥಾನವನ್ನು ಪಡೆದರೆ ಅಚ್ಚರಿಯಿಲ್ಲ. ಋತುರಾಜ್ ಗಾಯಕ್ವಾಡ್ ಕೂಡ ಆರಂಭಿಕನಾಗಿ ಕಣಕ್ಕಿಳಿಯಲು ಪೈಪೋಟಿ ನಡೆಸುತ್ತಿದ್ದಾರೆ.

ಸಂಜುಗೆ ಸಿಗುತ್ತಾ ಅವಕಾಶ
ಇನ್ನು ಮತ್ತೊಂದೆಡೆ ಯುವ ವಿಕೆಟ್ ಕೀಪರ್ ಇಶಾನ್ ಕಿಶನ್ ಕೂಡ ಮೊದಲ ಪಂದ್ಯದಲ್ಲಿ ಸ್ಪೋಟಕ ಪ್ರದರ್ಶನವನ್ನು ನೀಡಿ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿದ್ದರು. ಚೊಚ್ಚಲ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ಅರ್ಧ ಶತಕವನ್ನು ಸಿಡಿಸಿದ್ದಾರೆ. ಆದರೆ ಎರಡನೇ ಪಂದ್ಯದಲ್ಲಿ ಇವರು ಕೂಡ ನಿರಾಸೆ ಅನುಭವಿಸಿದರು. ಈಗ ಮೂರನೇ ಪಂದ್ಯದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸ್ಥಾನಕ್ಕೆ ಸಂಜು ಸ್ಯಾಮ್ಸನ್ ಆಡುವ ಅವಕಾಶ ಗಿಟ್ಟಿಸಿಕೊಳ್ಳುವ ಸಾಧ್ಯತೆಯಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೆಲ ಅವಕಾಶಗಳನ್ನು ಸಂಜು ಪಡೆದುಕೊಂಡಿದ್ದರಾದರೂ ತನ್ನ ಸಂಪೂರ್ಣ ಸಾಮರ್ಥ್ಯವನ್ನು ಪ್ರದರ್ಶಿಸಲು ಸಂಜು ವಿಫಲರಾಗಿದ್ದಾರೆ. ಹೀಗಾಗಿ ಸಂಜುಗೆ ಮತ್ತೊಂದು ಅವಕಾಶ ದೊರೆಯುವ ಸಾಧ್ಯತೆಯಿದೆ.

ಚಾಹಲ್‌ಗೆ ವಿಶ್ರಾಂತಿ?
ಇನ್ನು ಮೊದಲ ಎರಡು ಪಂದ್ಯಗಳಲ್ಲಿ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಕಣಕ್ಕಿಳಿದಿದ್ದರು. ಮೂರನೇ ಪಂದ್ಯದಲ್ಲಿ ಅವರಿಗೆ ವಿಶ್ರಾಂತಿಯನ್ನು ನೀಡಿ ವರುಣ್ ಚಕ್ರವರ್ತಿಗೆ ಅವಕಾಶ ಮಾಡಿಕೊಡುವ ಸಾಧ್ಯತೆಗಳು ಕೂಡ ಇದೆ. ವರುಣ್ ಚಕ್ರವರ್ತಿ ಕೂಡ ಭಾರತೀಯ ಏಕದಿನ ತಂಡಕ್ಕೆ ಪದಾರ್ಪನೆ ಮಾಡಲು ಕಾಯುತ್ತಿದ್ದಾರೆ. ಉಳಿದಂತೆ ಬಹುತೇಕ ಈ ಹಿಂದಿನ ತಂಡವೇ ಇರುವ ಸಾಧ್ಯತೆಯಿದೆ.

ಸಂಭಾವ್ಯ ಭಾರತೀಯ ತಂಡ
ಶಿಖರ್ ಧವನ್ (ನಾಯಕ), ಪೃಥ್ವಿ ಶಾ/ದೇವದತ್ ಪಡಿಕ್ಕಲ್ , ಇಶಾನ್ ಕಿಶನ್/ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಯುಜುವೇಂದ್ರ ಚಾಹಲ್ / ವರುಣ್ ಚಕ್ರವರ್ತಿ, ಕುಲದೀಪ್ ಯಾದವ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications