ಭಾರತ vs ಶ್ರೀಲಂಕಾ, ಪ್ರಥಮ ಟೆಸ್ಟ್: 575 ರನ್‌ಗಳಿಸಿ ಭಾರತ ಡಿಕ್ಲೇರ್: Live ಸ್ಕೋರ್

ಭಾರತ ಹಾಗೂ ಶ್ರೀಲಂಕಾ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಮೊಹಾಲಿಯಲ್ಲಿ ನಡೆಯುತ್ತಿದ್ದು ಎರಡನೇ ದಿನದಾಟ ಮುಂದುವರಿದಿದೆ. ಮೊದಲ ದಿನ ಭಾರತ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದು ದೊಡ್ಡ ಮೊತ್ತ ಗಳಿಸುವತ್ತ ಮುನ್ನುಗ್ಗಿತ್ತು. ಮೊದಲ ದಿನದಾಟದ ಅಂತ್ಯದಲ್ಲಿ ಭಾರತ 357 ರನ್‌ಗಳಿಸಿ 6 ವಿಕೆಟ್ ಕಳೆದುಕೊಂಡು ಎರಡನೇ ದಿನಕ್ಕೆ ಆಟವನ್ನು ಕಾಯ್ದುಕೊಂಡಿತ್ತು. ಎರಡನೇ ದಿನದಾಟವನ್ನು ರವೀಂದ್ರ ಜಡೇಜಾ ಹಾಗೂ ಆರ್ ಅಶ್ವಿನ್ ಮುಂದುವರಿಸಿದರು.
ಇನ್ನು ಭೋಜನ ವಿರಾಮಕ್ಕೂ ಮುನ್ನ ಅನುಭವಿ ಆರ್ ಅಶ್ವನ್ ವಿಕೆಟ್‌ಅನ್ನು ಭಾರತ ಕಳೆದುಕೊಂಡರೆ ರವೀಂದ್ರ ಜಡೇಜಾ ಭರ್ಜರಿ ಶತಕ ಸಿಡಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಜಡೇಜಾ ತಮ್ಮ ಎರಡನೇ ಶತಕ ಸಿಡಿಸಿ ಮಿಂಚಿದ್ದಾರೆ. ಇನ್ನು ಭಾರತೀಯ ಕ್ರಿಕೆಟ್ ತಂಡ 575 ರನ್‌ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ. ಈ ಸಂದರ್ಭದಲ್ಲಿ ರವೀಂದ್ರ ಜಡೇಜಾ 175 ರನ್‌ಗಳಿಸಿ ಅಜೇಯವಾಗುಳಿದಿದ್ದರು.
ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಪರವಾಗಿ ರಿಷಬ್ ಪಂತ್ ಅದ್ಭುತ ಇನ್ನಿಂಗ್ಸ್ ಆಡಿದರು. ಬರ್ಜರಿ ಹೊಡೆತಗಳ ಮೂಲಕ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡಿದ ಪಂತ್ ತಂಡದ ಮೊತ್ತ ಹೆಚ್ಚಲು ಪ್ರಮುಖ ಕಾರಣವಾದರು. 97 ಎಸೆತಗಳನ್ನು ಎದುರಿಸಿದ ಪಂತ್ 96 ರನ್‌ಗಳಿಸಿ ಲಕ್ಮಲ್‌ಗೆ ಬೌಲ್ಡ್ ಆಗುವ ಮೂಲಕ ತಮ್ಮ ಅದ್ಭುತ ಇನ್ನಿಂಗ್ಸ್‌ಅನ್ನು ಅಂತ್ಯಗೊಳಿಸಿದರು. ಈ ಮೂಲಕ ಶತಕಗಳಿಸುವ ಉತ್ತಮ ಅವಕಾಶವೊಂದನ್ನು ಕೇವಲ 4 ರನ್‌ಗಳ ಅಂತರದಲ್ಲಿ ಕಳೆದುಕೊಂಡಿದ್ದಾರೆ.
ಇನ್ನು ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಹನುಮ ವಿಹಾರಿ ಕೂಡ ಉತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. 128 ಎಸೆತ ಎದುರಿಸಿದ ವಿಹಾರಿ 58 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಇನ್ನು ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ನೂರನೇ ಪಂದ್ಯದಲ್ಲಿ ಅದ್ಭುತವಾಗಿ ಇನ್ನಿಂಗ್ಸ್ ಕಟ್ಟುವ ಸೂಚನೆ ನೀಡಿದರು. ಆದರೆ 45 ರನ್‌ಗಳಿಸುವಷ್ಟರಲ್ಲಿ ವಿರಾಟ್ ಕೊಹ್ಲಿ ತಮ್ಮ ವಿಕೆಟ್ ಕೈ ಚೆಲ್ಲಿದ್ದಾರೆ.
ಸ್ಕೋರ್‌ಕಾರ್ಡ್ ಹೀಗಿದೆ:
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಹನುಮ ವಿಹಾರಿ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಯಂತ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ
ಬೆಂಚ್: ಮೊಹಮ್ಮದ್ ಸಿರಾಜ್, ಶುಬ್ಮನ್ ಗಿಲ್, ಉಮೇಶ್ ಯಾದವ್, ಕುಲದೀಪ್ ಯಾದವ್, ಪ್ರಿಯಾಂಕ್ ಪಾಂಚಾಲ್, ಶ್ರೀಕರ್ ಭರತ್, ಸೌರಭ್ ಕುಮಾರ್
ಶ್ರೀಲಂಕಾ ಪ್ಲೇಯಿಂಗ್ XI: ದಿಮುತ್ ಕರುಣರತ್ನೆ(ನಾಯಕ), ಲಹಿರು ತಿರಿಮನ್ನೆ, ಪಾತುಮ್ ನಿಸ್ಸಾಂಕ, ಚರಿತ್ ಅಸಲಂಕಾ, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ನಿರೋಶನ್ ಡಿಕ್ವೆಲ್ಲಾ(ವಿಕೆಟ್ ಕೀಪರ್), ಸುರಂಗ ಲಕ್ಮಲ್, ವಿಶ್ವ ಫೆರ್ನಾಂಡೊ, ಲಸಿತ್ ಎಂಬುಲ್ಡೆನಿಯಾ, ಲಹಿರು ಕುಮಾರ
ಬೆಂಚ್: ಪ್ರವೀಣ್ ಜಯವಿಕ್ರಮ, ದಿನೇಶ್ ಚಂಡಿಮಲ್, ಚಾಮಿಕಾ ಕರುಣಾರತ್ನೆ, ಜೆಫ್ರಿ ವಾಂಡರ್ಸೆ, ದುಷ್ಮಂತ ಚಮೀರಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications