ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs SL : ಈ ಮೂವರು ಕ್ರಿಕೆಟಿಗರಿಗೆ ಶ್ರೀಲಂಕಾ ವಿರುದ್ಧದ ಸರಣಿ ಅಗ್ನಿಪರೀಕ್ಷೆ!

India Vs Sri Lanka : These 3 India Players Need To Be Prove Themselves In Sri Lanka Series

2023ರ ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾ ಸಿದ್ಧತೆ ಆರಂಭಿಸಿದೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದ್ದು, ಏಕದಿನ ಸರಣಿಯಲ್ಲಿ ಪ್ರಮುಖ ಆಟಗಾರರು ಸ್ಥಾನ ಪಡೆದಿದ್ದಾರೆ.

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಮತ್ತೆ ತಂಡಕ್ಕೆ ಸೇರಿಕೊಂಡಿದ್ದಾರೆ. ಸೂರ್ಯಕುಮಾರ್ ಯಾದವ್ ತಂಡಕ್ಕೆ ಮರಳಿದ್ದಾರೆ, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಶಮಿ, ಸೇರಿದಂತೆ ಹಲವು ಆಟಗಾರರು ಮತ್ತೆ ತಂಡಕ್ಕೆ ಮರಳಿದ್ದಾರೆ.

ಜನವರಿ 10 ರಿಂದ ಏಕದಿನ ಸರಣಿ ಆರಂಭವಾಗಲಿದೆ. ಗುವಾಹಟಿಯಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದ್ದು, ಕೋಲ್ಕತ್ತಾ ಮತ್ತು ತಿರುವನಂತಪುರಂನಲ್ಲಿ ಎರಡು ಮತ್ತು ಮೂರನೇ ಏಕದಿನ ಪಂದ್ಯ ನಡೆಯಲಿದೆ. ಭಾರತ ತಂಡದ ಆಯ್ಕೆಯು ಈಗಾಗಲೇ ಸಾಕಷ್ಟು ಟೀಕೆಗೆ ಒಳಗಾಗಿದೆ, ವಜಾಗೊಂಡಿರುವ ಆಯ್ಕೆ ಸಮಿತಿಯು ತಮ್ಮ ಆಲೋಚನೆಗಳನ್ನು ವಿವರಿಸಲು ಇನ್ನೂ ಪತ್ರಿಕಾಗೋಷ್ಠಿಯನ್ನು ನಡೆಸಬೇಕಿದೆ.

IND vs SL: ಭಾರತ ವಿರುದ್ಧದ ಸರಣಿಗೆ ಶ್ರೀಲಂಕಾದ 20 ಸದಸ್ಯರ ಬಲಿಷ್ಠ ತಂಡ ಪ್ರಕಟIND vs SL: ಭಾರತ ವಿರುದ್ಧದ ಸರಣಿಗೆ ಶ್ರೀಲಂಕಾದ 20 ಸದಸ್ಯರ ಬಲಿಷ್ಠ ತಂಡ ಪ್ರಕಟ

ಶ್ರೀಲಂಕಾ ವಿರುದ್ಧ ಏಕದಿನ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಸರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಈ ಮೂವರು ಆಟಗಾರರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲೇಬೇಕಿದೆ.

ಸೂರ್ಯಕುಮಾರ್ ಯಾದವ್

ಸೂರ್ಯಕುಮಾರ್ ಯಾದವ್

ಟಿ20 ಮಾದರಿಯಲ್ಲಿ ನಂಬರ್ 1 ಬ್ಯಾಟರ್ ಆಗಿರುವ ಸೂರ್ಯಕುಮಾರ್ ಯಾದವ್ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗಿದ್ದಾರೆ. ಕೊನೆಯ ಐದು ಇನ್ನಿಂಗ್ಸ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡದಿದ್ದರೂ ಕೂಡ ಅವರನ್ನು ಮತ್ತೆ ಏಕದಿನ ಸರಣಿಗಾಗಿ ಆಯ್ಕೆ ಮಾಡಲಾಗಿದೆ.

16 ಇನ್ನಿಂಗ್ಸ್‌ಗಳಲ್ಲಿ ಅವರು 384 ರನ್ ಗಳಿಸಿದ್ದಾರೆ. ಕೇವಲು ಎರಡು ಬಾರಿ ಅರ್ಧಶತಕ ಗಳಿಸಿದ್ದಾರೆ. 100.52 ಸ್ಟ್ರೈಕ್ ಹೊಂದಿದ್ದರು, ಸರಾಸರಿ ಕೇವಲ 32 ಆಗಿದೆ. ಅವರ ಟಿ20 ಅಂಕಿ ಅಂಶಗಳಿಗೆ ಹೋಲಿಕೆ ಮಾಡಿದರೆ ಇದು ತುಂಬಾ ಕಡಿಮೆಯಾಗಿದೆ.

ಸೂರ್ಯಕುಮಾರ್, ರಿಷಬ್ ಪಂತ್ ಮತ್ತು ರುತುರಾಜ್ ಗಾಯಕ್ವಾಡ್ ಅವರಂತಹ ಹೆಸರುಗಳ ಮುಂದೆ ನುಸುಳುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಟೈಲಿಶ್ ಬಲಗೈ ಆಟಗಾರ 50-ಓವರ್‌ಗಳ ತಂಡದಲ್ಲಿ ಸ್ಥಾನಕ್ಕಾಗಿ ಹಕ್ಕು ಸಾಧಿಸಲು ಸಮಯ ಮೀರುತ್ತಿದೆ. ಅವರ ಸ್ಪಿನ್ ಆಟ ಮತ್ತು ಉದ್ದೇಶವು ವಿಶ್ವಕಪ್‌ನಲ್ಲಿ ಸೂಕ್ತವಾಗಿ ಬರಬಹುದಾದರೂ, ಮುಂದಿನ ದಿನಗಳಲ್ಲಿ ಅವರಿಗೆ ಉತ್ತಮ ಸ್ಕೋರ್‌ಗಳ ಅಗತ್ಯವಿದೆ.

Kar vs Goa : ಮನೀಶ್ ಪಾಂಡೆ ಭರ್ಜರಿ ದ್ವಿಶತಕ, ಗೋವಾ ವಿರುದ್ಧ ಬೃಹತ್ ಮೊತ್ತ ದಾಖಲಿಸಿದ ಕರ್ನಾಟಕ

ಉಪನಾಯಕ ಹಾರ್ದಿಕ್ ಪಾಂಡ್ಯ

ಉಪನಾಯಕ ಹಾರ್ದಿಕ್ ಪಾಂಡ್ಯ

ಟಿ20 ಮಾದರಿಯಲ್ಲಿ ಹಾರ್ದಿಕ್ ಪಾಂಡ್ಯ ಉತ್ತಮ ಆಲ್‌ರೌಂಡರ್ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಅವರು ಈಗಾಗಲೇ ಅದನ್ನು ಸಾಬೀತುಪಡಿಸಿದ್ದಾರೆ. ಆದರೆ ಏಕದಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಇನ್ನು ತಮ್ಮ ಸಾಮರ್ಥ್ಯ ಸಾಬೀತುಪಡಿಸಬೇಕಿದೆ.

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಹಾರ್ದಿಕ್ ಪಾಂಡ್ಯ ಉಪನಾಯಕರನ್ನಾಗಿ ನೇಮಿಸಲಾಗಿದೆ. ಆಲ್‌ರೌಂಡರ್ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಉಪನಾಯಕನಾಗಿ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಳ್ಳಬೇಕಿದೆ.

ಹಾರ್ದಿಕ್ ಪಾಂಡ್ಯ 2022 ರಿಂದ ಇದುವರೆಗೆ 12 ಏಕದಿನ ಪಂದ್ಯಗಳನ್ನು ಆಡಿದ್ದಾರೆ, ಆದರೆ ಪಾಂಡ್ಯ ಅವರ ಫಿಟ್‌ನೆಸ್ ಸಮಸ್ಯೆಯಾಗಿದೆ. ಅಗ್ರ ಆರು ಕ್ರಮಾಂಕದಲ್ಲಿ ಅವರು ಬ್ಯಾಟಿಂಗ್ ಮಾಡುವಾದ ಫಿಟ್ನೆಸ್ ಕಾಪಾಡಿಕೊಳ್ಳಬೇಕಿದೆ, 10 ಓವರ್ ಸಂಪೂರ್ಣವಾಗಿ ಬೌಲಿಂಗ್ ಮಾಡುತ್ತಾರಾ ಎನ್ನುವುದು ಮುಖ್ಯವಾಗಿದೆ. 2023ರ ವಿಶ್ವಕಪ್‌ಗಾಗಿ ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಬಹಳ ಮುಖ್ಯವಾಗಿದೆ.

ಆಯ್ಕೆ ಸಮರ್ಥಿಸಿಕೊಳ್ಳಬೇಕಿದೆ ಉಮ್ರಾನ್ ಮಲಿಕ್

ಆಯ್ಕೆ ಸಮರ್ಥಿಸಿಕೊಳ್ಳಬೇಕಿದೆ ಉಮ್ರಾನ್ ಮಲಿಕ್

ಜಮ್ಮು ಮತ್ತು ಕಾಶ್ಮೀರ ವೇಗಿ ಉಮ್ರಾನ್ ಮಲಿಕ್ ತಂಡಕ್ಕೆ ಮರಳಿದ್ದಾರೆ. 150 ಕಿಮೀ ವೇಗದಲ್ಲಿ ಬೌಲಿಂಗ್ ಮಾಡುವ ಉಮ್ರಾನ್ ಮಲಿಕ್ ಏಕದಿನ ಸರಣಿಯಲ್ಲಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಬೇಕಿದೆ.

ಉಮ್ರಾನ್ ಮಲಿಕ್ ಇದುವರೆಗೂ 5 ಏಕದಿನ ಪಂದ್ಯಗಳನ್ನಾಡಿದ್ದಾರೆ, 6 ಎಕಾನಮಿ ದರದಲ್ಲಿ 7 ವಿಕೆಟ್ ಪಡೆದಿದ್ದಾರೆ. ಬೌಲಿಂಗ್‌ ಮೇಲಿನ ಅವರ ನಿಯಂತ್ರಣ, ಲೈನ್ ಮತ್ತು ಲೆಂಗ್ತ್ ಗಮನಾರ್ಹವಾಗಿ ಸುಧಾರಣೆಯಾಗಿದೆ. ವೇಗದಿಂದ ಅವರು ಬ್ಯಾಟರ್ ಮೇಲೆ ಒತ್ತಡ ಹೇರುವ ಸಾಮರ್ಥ್ಯ ಹೊಂದಿದ್ದಾರೆ.

2023ರ ಏಕದಿನ ವಿಶ್ವಕಪ್‌ಗಾಗಿ ಭಾರತ ತಂಡದಲ್ಲಿ ಸ್ಥಾನವನ್ನು ಖಾಯಂಗೊಳಿಸಲು ಅವರಿಗೆ ಅತ್ಯುತ್ತಮ ಅವಕಾಶ ಸಿಕ್ಕಿದೆ. ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದರೆ, ಅವರು ಮುಂದಿನ ಸರಣಿಯಲ್ಲಿ ಸುಲಭವಾಗಿ ತಂಡದಲ್ಲಿ ಉಳಿಯಬಹುದು.

Story first published: Thursday, December 29, 2022, 5:35 [IST]
Other articles published on Dec 29, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X