ಲಂಕಾ ವಿರುದ್ಧ ಏಕದಿನ ಸರಣಿಗೆ ರೋಹಿತ್ ನಾಯಕ, ಕೊಹ್ಲಿಗೆ ರೆಸ್ಟ್
ನವದೆಹಲಿ, ನವೆಂಬರ್ 27: ಪ್ರವಾಸಿ ಶ್ರೀಲಂಕಾ ವಿರುದ್ಧದ ಅಂತಿಮ ಟೆಸ್ಟ್ ಹಾಗೂ ಮೂರು ಏಕದಿನ ಕ್ರಿಕೆಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.
ಲಂಕಾ ವಿರುದ್ಧ 3ನೇ ಟೆಸ್ಟ್ ಮತ್ತು ಮೂರು ಏಕದಿನ ಸರಣಿಗೆ ಭಾರತದ 15 ಆಟಗಾರರ ಪಟ್ಟಿಯನ್ನು ಸೋಮವಾರ ಬಿಸಿಸಿಐ ಪ್ರಕಟಿಸಿದೆ. ಮೂರು ಏಕದಿನ ಸರಣಿಗೆ ರೋಹಿತ್ ಶರ್ಮ ಅವರಿಗೆ ನಾಯಕತ್ವ ಪಟ್ಟ ನೀಡಲಾಗಿದ್ದು, ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.

ಶ್ರೇಯಸ್ ಅಯ್ಯರ್, ಕನ್ನಡಿಗ ಮನೀಷ್ ಪಾಂಡೆ ಹಾಗೂ ಸಿದ್ಧಾರ್ಥ್ ಕೌಲ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಈಗಾಗಲೇ ಟೀಂ ಇಂಡಿಯಾ ಮೂರು ಟೆಸ್ಟ್ ಗಳ ಪಂದ್ಯಗಳಲ್ಲಿ 1-0 ಅಂತರವನ್ನು ಮುನ್ನಡೆ ಸಾಧಿಸಿದೆ.
ಇನ್ನು ಅಂತಿಮ ಟೆಸ್ಟ್ ಪಂದ್ಯ ಡಿಸೆಂಬರ್ 2ರಿಂದ 6ರ ವರೆಗೆ ದೆಹಲಿಯಲ್ಲಿ ನಡೆಯಲಿದ್ದು, ತಂಡವನ್ನು ಕೊಹ್ಲಿ ಮುನ್ನಡೆಸಲಿದ್ದಾರೆ. ಇದೇ ಡಿಸೆಂಬರ್ 10ರಿಂದ ಏಕದಿನ ಸರಣಿ ಆರಂಭವಾಗಲಿದೆ. ಏಕದಿನ ಸರಣಿಗೆ ಭಾರತ ತಂಡವನ್ನು ರೋಹಿತ್ ಶರ್ಮ ಮುನ್ನಡೆಸಲಿದ್ದಾರೆ.
ಏಕದಿನ ಸರಣಿಗೆ ಭಾರತ ತಂಡ ಇಂತಿದೆ: ರೋಹಿತ್ ಶರ್ಮ (ನಾಯಕ), ಶಿಖರ್ ಧವನ್, ಅಜಿಂಕ್ಯಾ ರಹಾನೆ, ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ , ಕೇದರ್ ಜಾದವ್, ದಿನೇಶ್ ಕಾರ್ತಿಕ್, ಎಂ ಎಸ್ ಧೋನಿ, ಹಾರ್ದಿಕ್ ಪಾಂಡ್ಯಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಚಹಲ್, ಜಸ್ ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಸಿದ್ಧಾರ್ಥ್ ಕೌಲ್.
3ನೇ ಟೆಸ್ಟ್ ಗೆ ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ಮುರುಳಿ ವಿಜಯ್, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ರೋಹಿತ್ ಶರ್ಮ, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಅಶ್ವಿನ್, ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಇಶಾಂತ್ ಶರ್ಮ, ವಿಜಯ್ ಶಂಕರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications