ಭಾರತ vs ಶ್ರೀಲಂಕಾ: 1st ODI , Live ಸ್ಕೋರ್, ಭಾರತಕ್ಕೆ 263 ರನ್‌ಗಳ ಗುರಿ

ಭಾರತ ಹಾಗೂ ಶ್ರೀಲಂಕಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಕೊಲೊಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಟಾಸ್ ಗೆದ್ದ್ ಆತೀಥೇಯ ಶ್ರಿಲಂಕಾ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಶಿಖರ್ ಧವನ್ ನೇತೃತ್ವದ ಭಾರತ ತಂಡ ಮೊದಲಿಗೆ ಬೌಲಿಂಗ್ ದಾಳಿ ನಡೆಸಲಿದೆ.

ಶಿಖರ್ ಧವನ್ ನೇತೃತ್ವದ ಭಾರತ ತಮಡದ ಪರವಾಗಿ ಇಬ್ಬರು ಆಟಗಾರರು ಏಕದಿನ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ಏಕದಿನ ತಂಡದ ಆಡುವ ಬಳಗದಲ್ಲಿ ಮೊದಲ ಬಾರಿಗೆ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ. ಆರಂಭಿಕನಾಗಿ ಪೃಥ್ವಿ ಶಾ ಸಾಥ್ ನೀಡಲಿದ್ದು ಅನುಭವಿ ಮನೀಶ್ ಪಾಂಡೆ ಕೂಡ ತಂಡದಲ್ಲಿದ್ದಾರೆ. ಇನ್ನು ಕುಲ್‌ದೀಪ್ ಯಾದವ್ ಹಾಗೂ ಯುಜುವೇಂದ್ರ ಚಾಹಲ್ ಇಬ್ಬರು ಕೂಡ ಆಡುವ ಬಳಗದಲ್ಲಿ ಸುದೀರ್ಘ ಕಾಲದ ನಂತರ ಜೊತೆಯಾಗಿ ಅವಕಾಶ ಪಡೆದಿದ್ದಾರೆ.

Live ಸ್ಕೋರ್ ಪಟ್ಟಿ ಹೀಗಿದೆ:

1
51198

ಇನ್ನು ಶ್ರೀಲಂಕಾ ತಂಡದಲ್ಲಿ ಕೂಡ ಕೆಲ ಪ್ರಮುಖ ಬದಲಾವಣೆಗಳು ಆಗಿದೆ. ನಾಯಕನಾಗಿ ದಸುನ್ ಶನಕಾ ಮೊದಲ ಬಾರಿಗೆ ಆಡುವ ಶ್ರೀಲಂಕಾ ತಂಡವನ್ನು ಮುನ್ನಡೆಸುತ್ತಿದ್ದಾರೆ. ಲಂಕಾದಲ್ಲಿದಲ್ಲಿ ಭಾನುಕ ರಾಜಪಕ್ಸ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆಯನ್ನು ಮಾಡಿದ್ದಾರೆ.

ಟೀಮ್ ಇಂಡಿಯಾ ಆಡುವ ಬಳಗ: ಶಿಖರ್ ಧವನ್ (ನಾಯಕ), ಪೃಥ್ವಿ ಶಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ದೀಪಕ್ ಚಹರ್, ಭುವನೇಶ್ವರ್ ಕುಮಾರ್, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್

ಖುಷಿಯಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸುತ್ತಿರುವ ವಿದ್ಯಾರ್ಥಿಗಳು | Oneindia Kannada

ಶ್ರೀಲಂಕಾ ಆಡುವ ಬಳಗ: ಅವಿಷ್ಕಾ ಫರ್ನಾಂಡೊ, ಮಿನೋಡ್ ಭನುಕಾ (ವಿಕೆಟ್ ಕೀಪರ್), ಭನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಸುನ್ ಶನಕಾ (ನಾಯಕ), ವನಿಂದು ಹಸರಂಗ, ಚಮಿಕಾ ಕರುಣರತ್ನೆ, ಇಸುರು ಉದಾನ, ದುಷ್ಮಂತ ಚಮೀರ, ಲಕ್ಷನ್ ಸಂದಕ

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Sunday, July 18, 2021, 14:51 [IST]
Other articles published on Jul 18, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X