ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೀಮ್ ಇಂಡಿಯಾಗೆ ಮತ್ತೆ ಗಾಯದ ಆತಂಕ: 2ನೇ ಪಂದ್ಯಕ್ಕೆ ಸ್ಟಾರ್ ಆಟಗಾರ ಅನುಮಾನ!

India vs Srio Lanka: injury scare for Team India, Sanju Samson doubtful for 2nd T20I

ಕಳೆದ ಕೆಲ ತಿಂಗಳಿನಿಂದ ಟೀಮ್ ಇಂಡಿಯಾದ ಸಾಕಷ್ಟು ಆಟಗಾರರು ಗಾಯಕ್ಕೆ ತುತ್ತಾಗುತ್ತಿದ್ದು ವಿಶ್ರಾಂತಿಯಲ್ಲಿದ್ದಾರೆ. ಇದೀಗ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯಕ್ಕೆ ಮುನ್ನ ಭಾರತ ತಂಡಕ್ಕೆ ಮತ್ತೊಂದು ಗಾಯದ ಆತಂಕ ಎದುರಾಗಿದೆ. ಪುಣೆಯಲ್ಲಿ ನಡೆಯಲಿರುವ ಎರಡನೇ ಟಿ20 ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಗಾಯಕ್ಕೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಟೀಮ್ ಇಂಡಿಯಾ ಆಡುವ ಬಳಗದ ಭಾಗವಾಗಿದ್ದರು. ಆದರೆ ಸಂಜು ಸ್ಯಾಮ್ಸನ್ ಈ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದ್ದಾರೆ. ಭಾರತ ತಂಡದಲ್ಲಿ ಸ್ಥಾನವನ್ನು ಖಾಯಂಗೊಳಿಸಲು ಹರಸಾಹಸ ಪಡುತ್ತಿರುವ ಸಂಜು ಸಿಕ್ಕ ಅವಕಾಶವನ್ನು ಕೈಚೆಲ್ಲುವ ಜೊತೆಗೆ ಗಾಯಕ್ಕೂ ತುತ್ತಾಗಿರುವುದು ಹಿನ್ನಡೆಯುಂಟು ಮಾಡಿದೆ.

ಅಫ್ರಿದಿ ಹೊಸ ನಿಯಮ: ಬಾಬರ್ ಅಜಂ, ಮೊಹಮ್ಮದ್ ರಿಜ್ವಾನ್‌ಗೂ ಟಿ20 ತಂಡದಲ್ಲಿ ಅವಕಾಶ ಇಲ್ಲವಾ?ಅಫ್ರಿದಿ ಹೊಸ ನಿಯಮ: ಬಾಬರ್ ಅಜಂ, ಮೊಹಮ್ಮದ್ ರಿಜ್ವಾನ್‌ಗೂ ಟಿ20 ತಂಡದಲ್ಲಿ ಅವಕಾಶ ಇಲ್ಲವಾ?

ಮೊದಲ ಪಂದ್ಯದಲ್ಲಿ ಸಂಜು ವಿಫಲ

ಮೊದಲ ಪಂದ್ಯದಲ್ಲಿ ಸಂಜು ವಿಫಲ

ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡದ ಪ್ರಮುಖ ಆಟಗಾರರು ವಿಕೆಟ್ ಕಳೆದುಕೊಂಡಿದ್ದಾಗ ಸಂಜು ಬ್ಯಾಟಿಂಗ್‌ಗೆ ಇಳಿದಿದ್ದರು. ಆದರೆ ಸಂಜು ಕೂಡ ಈ ಪಂದ್ಯದಲ್ಲಿ ನಿರಾಸೆ ಮೂಡಿಸಿದ್ದರು. 6 ಎಸೆತಗಳನ್ನು ಎದುರಿಸಿದ ಸಂಜು ಸ್ಯಾಮ್ಸನ್ ಕೇವಲ 5 ರನ್‌ಗಳಿಸಿ ನಿರ್ಗಮಿಸಿದ್ದಾರೆ. ಈ ಸಂದರ್ಭದಲ್ಲಿ ಒಂದು ಜೀವದಾನ ಲಭಿಸಿದರು ಕೂಡ ಸಂಜು ಅದನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ವಿಫಲವಾದರು. ಮತ್ತೆ ಕೆಟ್ಟ ಹೊಡೆತಕ್ಕೆ ಮುಂದಾಗಿ ಸುಲಭ ಕ್ಯಾಚ್ ನೀಡಿ ನಿರ್ಗಮಿಸಿದರು.

ತಂಡದೊಂದಿಗೆ ಪುಣೆಗೆ ತೆರಳದ ಸಂಜು

ತಂಡದೊಂದಿಗೆ ಪುಣೆಗೆ ತೆರಳದ ಸಂಜು

ಸರಣಿಯ ನಿರ್ಣಾಯಕ ಪಂದ್ಯಕ್ಕಾಗಿ ಮುಂಬೈನಿಂದ ಪುಣೆಗೆ ಹಾರ್ದಿಕ್ ಪಾಂಡಯ ನೇತೃತ್ವದ ಭಾರತ ತಂಡ ಪ್ರಯಾಣ ಬೆಳೆಸಿದೆ. ಆದರೆ ಈ ತಂಡದ ಜೊತೆಗೆ ಸಂಜು ಸ್ಯಾಮ್ಸನ್ ಪ್ರಯಾಣಿಸಿಲ್ಲ ಎಂದು ಕ್ರಿಕ್ ಬಜ್ ವರದಿ ಮಾಡಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಕ್ಯಾಚ್‌ಗಾಗಿ ಡೈವ್ ಮಾಡಿದ್ದ ಸಂದರ್ಭದಲ್ಲಿ ಸಂಜು ಸ್ಯಾಮ್ಸನ್ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದಾರೆ ಎನ್ನಲಾಗಿದೆ. ಆದರೆ ಈ ಘಟನೆಯ ಬಳಿಕವೂ ಸಂಜು ಫಿಲ್ಡಿಂಗ್ ಮುಂದುವರಿಸಿದ್ದರು.

2ನೇ ಪಂದ್ಯದತ್ತ ಚಿತ್ತ

2ನೇ ಪಂದ್ಯದತ್ತ ಚಿತ್ತ

ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಮುಕ್ತಾಯದ ಬಳಿಕ ಇದೀಗ ಎರಡನೇ ಪಂದ್ಯದತ್ತ ಚಿತ್ತ ನೆಟ್ಟಿದೆ. ಎರಡನೇ ಪಂದ್ಯ ಕೂಡ ಮಹಾರಾಷ್ಟ್ರದಲ್ಲಿಯೇ ನಡೆಯಲಿದ್ದು ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ಗುರುವಾರ ಈ ಪಂದ್ಯ ಆಯೋಜನೆಯಾಗಲಿದೆ. ಈ ಪಂದ್ಯವನ್ನು ಗೆದ್ದು ಸರಣಿ ವಶಕ್ಕೆ ಪಡೆಯುವ ಉತ್ಸಾಹದಲ್ಲಿ ಟೀಮ್ ಇಂಡಿಯಾ ಇದ್ದರೆ ಶ್ರೀಲಂಕಾ ಸರಣಿ ಸಮಬಲಗೊಳಿಸುವ ಗುರಿಯೊಂದಿಗೆ ಕಣಕ್ಕಿಳಿಯಲಿದೆ.

ಇತ್ತಂಡಗಳ ಸ್ಕ್ವಾಡ್ ಹೀಗಿದೆ

ಇತ್ತಂಡಗಳ ಸ್ಕ್ವಾಡ್ ಹೀಗಿದೆ

ಭಾರತ ತಂಡ: ಇಶಾನ್ ಕಿಶನ್(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ಅರ್ಷದೀಪ್ ಸಿಂಗ್, ಋತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ರಾಹುಲ್ ತ್ರಿಪಾಠಿ

ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್(ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನ, ಮಹೇಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ, ಲಹಿರು ಕುಮಾರ, ದುನಿತ್ ವೆಳ್ಳಾಲಗೆ, ಸದೀರ ಸಮರವಿಕ್ರಮ, ಅವಿಷ್ಕ ಫೆರ್ನಾಂಡೋ, ಅಶೇನ್ ಬಂಡಾರ, ಪ್ರಮೋದ್ ಮದುಶನ್, ನುವಾನ್ ತುಷಾರ

Story first published: Wednesday, January 4, 2023, 21:36 [IST]
Other articles published on Jan 4, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X