ಸೆಪ್ಟೆಂಬರ್ 9 ರಿಂದ ಯುಎಇಯಲ್ಲಿ ಏಷ್ಯಾ ಕಪ್ ಟಿ20 ಟೂರ್ನಿ ಆರಂಭವಾಗಲಿದೆ. ಈ ಟೂರ್ನಿಗಾಗಿ ಈಗಾಗಲೇ ಟೀಮ್ ಇಂಡಿಯಾ ಯುಎಇ ತಲುಪಿದೆ. ಈಗಾಗಲೇ ಭಾರತ ತಂಡ ಐಸಿಸಿ ಅಕಾಡೆಮಿಯಲ್ಲಿ ಅಭ್ಯಾಸವನ್ನು ಪ್ರಾರಂಭಿಸಿದೆ. ಏಷ್ಯಾ ಕಪ್ ಟಿ20 ಟೂರ್ನಿಯ ಗ್ರೂಪ್-ಎ ನಲ್ಲಿ ಸ್ಥಾನ ಪಡೆದಿದೆ. ಟೀಮ್ ಇಂಡಿಯಾ ಫೆಬ್ರವರಿಯಲ್ಲಿ ತನ್ನ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿತ್ತು. ಈ ವೇಳೆ ಟೀಮ್ ಇಂಡಿಯಾಕ್ಕೆ ಹಲವು ಸ್ಟಾರ್ ಆಟಗಾರರು ಕಂ ಬ್ಯಾಕ್ ಮಾಡಿದ್ದಾರೆ.
ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಸಹ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಬ್ಲ್ಯೂ ಬಾಯ್ಸ್ ಪರ ಮಿಂಚಲು ಹಾರ್ದಿಕ್ ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಈ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ವಿಶೇಷ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಹಾಗಿದ್ದರೆ ಹಾರ್ದಿಕ್ ಪಾಂಡ್ಯ ನಿರ್ಮಿಸಲು ಸಿದ್ಧರಾಗಿದ್ದಾರೆ.

ಟೀಮ್ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ ನಡೆವಿಶೇಷ ದಾಖಲೆ ನಿರ್ಮಿಸಲು ತಯಾರಿ ನಡೆಸಿದ್ದಾರೆ. 31 ವರ್ಷದ ಹಾರ್ದಿಕ್ ಪಾಂಡ್ಯ ಈಗಾಗಲೇ ಭಾರತದ ಪರ 114 ಆಡಿದ್ದು, ಈ ವೇಳೆ 94 ವಿಕೆಟ್ ಕಬಳಿಸಿದ್ದಾರೆ. ಮುಂಬರು ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಆರು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರೆ ಟಿ20 ಫಾರ್ಮೆಟ್‌ನಲ್ಲಿ ವಿಕೆಟ್‌ಗಳ ಶತಕವನ್ನು ಪೂರೈಸಿದ ಸಾಧನೆ ಮಾಡಲಿದ್ದಾರೆ. ಟೀಮ್ ಇಂಡಿಯಾ ಪರ ಚುಟುಕು ಫಾರ್ಮೆಟ್‌ನಲ್ಲಿ ಇನ್ನು ಯಾವೊಬ್ಬ ಬೌಲರ್ ಟಿ20 ಸ್ವರೂಪದಲ್ಲಿ ಈ ಸಾಧನೆ ಮಾಡಿದ್ದಾರೆ.
ಹಾರ್ದಿಕ್ ಪಾಂಡ್ಯ ಈ ಟೂರ್ನಿಯಲ್ಲಿ ಮೂರು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರೆ ಯುಜ್ವೇಂದ್ರ ಚಾಹಲ್ ಅವರ ದಾಖಲೆ ಅಳಿಸಿ ಹಾಕಲಿದ್ದಾರೆ. ಟೀಮ್ ಇಂಡಿಯಾ ಪರ ಚುಟುಕು ಫಾರ್ಮೆಟ್‌ನಲ್ಲಿ 96 ವಿಕೆಟ್ ಪಡೆದಿದ್ದಾರೆ. ಇವರ ದಾಖಲೆಯನ್ನು ಹಾರ್ದಿಕ್ ಪಾಂಡ್ಯ ಮೀರಿ ನಿಲ್ಲುವ ಅವಕಾಶ ಇದೆ.

ಭಾರತದ ಪರ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದವರ ಪಟ್ಟಿಯಲ್ಲಿ ಅರ್ಶ್‌ದೀಪ್ ಸಿಂಗ್ ಅಗ್ರಸ್ಥಾನದಲ್ಲಿದ್ದಾರೆ. ಅರ್ಷದೀಪ್ ಸಿಂಗ್ ಟಿ20 ಕ್ರಿಕೆಟ್‌ನಲ್ಲಿ 99 ವಿಕೆಟ್‌ಗಳನ್ನು ಪಡೆದಿದ್ದಾರೆ. ಇವರು ಯುಎಇ ವಿರುದ್ಧದ ಪಂದ್ಯದಲ್ಲಿ ಒಂದು ವಿಕೆಟ್ ಪಡೆಯುವಲ್ಲಿ ಸಫಲರಾದರೆ, ಇತಿಹಾಸ ನಿರ್ಮಿಸುವ ಕನಸಿನಲ್ಲಿದ್ದಾರೆ.
ಅರ್ಷದೀಪ್ ಸಿಂಗ್ - 99 ವಿಕೆಟ್
ಯುಜ್ವೇಂದ್ರ ಚಾಹಲ್ - 96 ವಿಕೆಟ್
ಹಾರ್ದಿಕ್ ಪಾಂಡ್ಯ - 94 ವಿಕೆಟ್
ಭುವನೇಶ್ವರ್ ಕುಮಾರ್ - 90 ವಿಕೆಟ್
ಜಸ್ಪ್ರೀತ್ ಬುಮ್ರಾ - 89 ವಿಕೆಟ್
ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಸೆ.10 ರಿಂದ ಟೀಮ್ ಇಂಡಿಯಾ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಟೂರ್ನಿಯ ಫೈನಲ್ ಪಂದ್ಯ ಸೆ.29 ರಂದು ಫೈನಲ್ ಪಂದ್ಯ ನಡೆಯಲಿದೆ.