For Quick Alerts
ALLOW NOTIFICATIONS  
For Daily Alerts
 

Ind vs WI: ಇಂದಿನಿಂದ ಟಿ20 ಸರಣಿ ಆರಂಭ; ಅನುಭವಿಗಳ ಗೈರಲ್ಲಿ ಯುವಕರಿಗೆ ಅದ್ಭುತ ಅವಕಾಶ

ಭಾರತ ಹಾಗೂ ವೆಸ್ಟ್ ಇಂಡಿಸ್ ತಂಡಗಳ ನಡುವಿನ ಟಿ20 ಸರಣಿ ಇಂದಿನಿಂದ ಆರಂಭವಾಗುತ್ತಿದೆ. ಐದು ಪಂದ್ಯಗಳ ಟಿ20 ಸರಣೀ ಇದಾಗಿದ್ದು ಈ ಸರಣಿಯಲ್ಲಿ ರೋಹಿತ್ ಶರ್ಮಾ ವಿರಾಟ್ ಕೊಹ್ಲಿ ಇಬ್ಬರು ಕೂಡ ಆಡುತ್ತಿಲ್ಲ. ಹಾಗಾಗಿ ಯುವ ಆಟಗಾರರು ಈ ಸರಣಿಯಲ್ಲಿ ನಿರ್ಣಾಯಕ ಪಾತ್ರವಹಿಸುವ ಅಗತ್ಯವಿದೆ. ವೆಸ್ಟ್ ಇಂಡೀಸ್ ಕೂಡ ಬಲಿಷ್ಠ ಆಡುವ ಬಳಗವನ್ನು ಹೊಂದಿದ್ದು ಸರಣಿ ತೀವ್ರ ಕುತೂಹಲ ಮೂಡಿಸಿದೆ.

ಸರಣಿಯ ಮೊದಲ ಪಂದ್ಯ ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದೆ. ಎರಡನೇ ಹಾಗೂ ಮೂರನೇ ಪಂದ್ಯ ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯಲಿದ್ದು ಆಗಸ್ಟ್ 6 ಹಾಗೂ 8ರಂದು ಈ ಪಂದ್ಯಗಳು ಆಯೋಜನೆಯಾಗಲಿದೆ. ಇನ್ನು ಸರಣಿಯ ಕೊನೆಯ ಎರಡು ಪಂದ್ಯಗಳು ಯುಎಸ್‌ಎನಲ್ಲಿ ನಡೆಯಲಿದ್ದು ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ರೀಜಿನಲ್ ಪಾರ್ಕ್ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದೆ. ಆಗಸ್ಟ್ 12 ಮತ್ತು 13ರಂದು ಈ ಪಂದ್ಯಗಳು ನಡೆಯಲಿದೆ.

India vs West Indies 1st T20I: Chance for young players to step up in absence of seniors

ಹಾರ್ದಿಕ್ ಪಾಂಡ್ಯ ಈ ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಏಕದಿನ ಸರಣಿಯಲ್ಲಿ ಕೊನೆಯ ಎರಡು ಪಂದ್ಯಗಳಲ್ಲಿಯೂ ಹಾರ್ದಿಕ್ ನಾಯಕತ್ವ ವಹಿಸಿಕೊಂಡು ಕೊನೆಯ ಪಂದ್ಯದಲ್ಲಿ ಭರ್ಜರಿ ಗೆಲುವಿನಲ್ಲಿಯೂ ಪ್ರಮುಖ ಪಾತ್ರವಹಿಸಿದ್ದರು. ಬ್ಯಾಟಿಂಗ್‌ನಲ್ಲಿಯೂ ಹಾರ್ದಿಕ್ ಭರ್ಜರಿ ಯಶಸ್ಸು ಸಾಧಿಸಿರುವುದು ತಂಡದ ಆತ್ಮಿಶ್ವಾಸ ಹೆಚ್ಚಿಸಿದೆ.

ಇನ್ನು ಇಶಾನ್ ಕಿಶನ್ ಏಕದಿನ ಸರಣಿಯಲ್ಲಿ ಅದ್ಭುತ ಫಾರ್ಮ್ ಪ್ರದರ್ಶಿಸಿದ್ದು ಮೂರು ಪಂದ್ಯಗಳಲ್ಲಿ ಮೂರು ಅರ್ಧ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಶುಬ್ಮನ್ ಗಿಲ್ ಮೊದಲ ಎರಡು ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿದ್ದರೂ ಕೊನೆಯ ಪಂದ್ಯದಲ್ಲಿ ಮಿಂಚಿದ್ದಾರೆ. ಇನ್ನು ಸೂರ್ಯಕುಮಾರ್ ಏಕದಿನ ಮಾದರಿಯಲ್ಲಿ ನಿರೀಕ್ಷಿತ ಯಶಸ್ಸು ಸಾಧಿಸದಿದ್ದರೂ ಟಿ20 ಮಾದರಿಯಲ್ಲಿ ಯಾವಾಗಲೂ ಅಬ್ಬರಿಸುವ ಮನಸ್ಥಿತಿಯಲ್ಲಿರುತ್ತಾರೆ ಸೂರ್ಯ.

ವೆಸ್ಟ್ ಇಂಡೀಸ್ ತಂಡ: ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ಶಾಯ್ ಹೋಪ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಒಬೆಡ್ ಥಾಮಸ್, ಒಡ್ನ್‌ಶನ್ ಕಿಂಗ್, ಓಡಿಯನ್ ಸ್ಮಿತ್, ರೋಸ್ಟನ್ ಚೇಸ್, ರೊಮಾರಿಯೋ ಶೆಫರ್ಡ್

ಟೀಮ್ ಇಂಡಿಯಾ: ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಅರ್ಷ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್, ಕುಲದೀಪ್ ಯಾದವ್, ಅವೇಶ್ ಖಾನ್, ರವಿ ಬಿಷ್ಣೋಯ್, ತಿಲಕ್ ವರ್ಮಾ

Story first published: Thursday, August 3, 2023, 8:51 [IST]
Other articles published on Aug 3, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+