Ind vs WI: ಫಾರ್ಮ್‌ನಲ್ಲಿರುವ ಆಟಗಾರನಿಗಿಲ್ಲ ಸ್ಥಾನ: ಸಿಡಿದ ನೆಟಿಜನ್‌ಗಳು!

ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಆರಂಭವಾಗಿದ್ದು ಮೊದಲ ಪಂದ್ಯದಲ್ಲಿ ಎರಡು ತಂಡಗಳು ಮುಖಾಮುಖಿಯಾಗಿದೆ. ರೋಹಿತ್ ಶರ್ಮಾ ನೇತೃತ್ವದಲ್ಲಿ ಕಣಕ್ಕಿಳಿದಿರುವ ಭಾರತ ತಂಡ ಟಿ20 ಸರಣಿಯಲ್ಲಿಯೂ ಅದ್ಭುತ ಪ್ರದರ್ಶನ ನೀಡುವ ವಿಶ್ವಾಸದೊಂದಿಗೆ ಕಣಕ್ಕಿಳಿದಿದೆ. ಏಕದಿನ ಸರಣಿಯಿಂದ ಹೊರಗುಳಿದಿದ್ದ ಕೆಲ ಪ್ರಮುಖ ಆಟಗಾರರು ಟಿ20 ಸರಣಿಯಲ್ಲಿ ಕಾಣಿಸಿಕೊಂಡಿದ್ದಾರೆ.
ಆದರೆ ಇತ್ತೀಚಿನ ದಿನಗಳಲ್ಲಿ ಭಾರತದ ಪರವಾಗಿ ಸಿಕ್ಕ ಅವಕಾಶದಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚುತ್ತಿರುವ ಓರ್ವ ಆಟಗಾರನಿಗೆ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಡುವ ಅವಕಾಶ ದೊರೆತಿಲ್ಲ. ಇದು ಭಾರತೀಯ ತಂಡದ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ದೀಪಕ್ ಹೂಡಾಗಿಲ್ಲ ಸ್ಥಾನ
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆಲ್‌ರೌಂಡರ್ ದೀಪಕ್ ಹೂಡಾಗೆ ಆಡುವ ಬಳಗದಲ್ಲಿ ಅವಕಾಶ ದೊರೆತಿಲ್ಲ. ಇತ್ತೀಚಿನ ದಿನಗಳಲ್ಲಿ ದೀಪಕ್ ಹೂಡ ಅಮೋಘ ಫಾರ್ಮ್‌ನಲ್ಲಿದ್ದು ಸಿಕ್ಕ ಅವಕಾಶದಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಶತಕವನ್ನು ಸಿಡಿಸಿದ್ದ ದೀಪಕ್ ಹೂಡಾ ಬಳಿಕ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿಯೂ ಮೊದಲ ಪಂದ್ಯದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ್ದರು. ಆದರೆ ಬಳಿಕ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ ಕಾರಣ ಅವಕಾಶ ದೊರೆತಿರಲಿಲ್ಲ.

ಮೊದಲ ಪಂದ್ಯದಲ್ಲಿ ಅವಕಾಶವಿಲ್ಲ
ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ ದೀಪಕ್ ಹೂಡಾಗೆ ಅವಕಾಶ ದೊರೆಯಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಆಡುವ ಬಳಗದಲ್ಲಿ ದೀಪಕ್ ಹೂಡಾಗೆ ಅವಕಾಶ ನಿಡದ ಕಾರಣ ಅಭಿಮಾನಿಗಳು ನಿರಾಸೆಗೆ ಒಳಗಾಗಿದ್ದಾರೆ. ಮಾತ್ರವಲ್ಲದೆ ಅದ್ಭುತ ಫಾರ್ಮ್‌ನಲ್ಲಿರುವ ಹೊರತಾಗಿಯೂ ಆಡುವ ಬಳಗದಲ್ಲಿ ಸ್ಥಾನ ನೀಡದ ಬಗ್ಗೆ ಕಿಡಿ ಕಾರಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ನೆಟ್ಟಿಗರು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ಮೊದಲ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಭಾರತ
ಇನ್ನು ವೆಸ್ಟ್ ಇಮಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತದ ಪರವಾಗಿ ಆರಂಬದಲ್ಲಿ ನಾಯಕ ರೋಹಿತ್ ಶರ್ಮಾ ಅರ್ಧ ಶತಕ ಸಿಡಿಸಿ ಮಿಂಚಿದರು. ಬಳಿಕ ಅಂತಿಮ ಹಂತದಲ್ಲಿ ಕಣಕ್ಕಿಳಿದ ದಿನೇಶ್ ಕಾರ್ತಿಕ್ ತಮ್ಮ ಸ್ಪೋಟಕ ಶೈಲಿಯ ಬ್ಯಾಟಿಂಗ್ ಮೂಲಕ ತಂಡದ ಮೊತ್ತವನ್ನು ಭರ್ಜರಿಯಾಗಿ ಏರಿಸಿದರು. ಇದರ ಪರಿಣಾವಾಗಿ ಭಾರತ ತಂಡ 190 ರನ್‌ಗಳನ್ನು ಗಳಿಸಲು ಸಾಧ್ಯವಾಯಿತು.
ಭಾರತ ಮತ್ತು ವೆಸ್ಟ್ ಇಂಡೀಸ್ ಆಡುವ 11ರ ಬಳಗ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ರವಿ ಬಿಷ್ಣೋಯಿ, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್.
ವೆಸ್ಟ್ ಇಂಡೀಸ್ ತಂಡ: ಶಮರ್ಹ್ ಬ್ರೂಕ್ಸ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ನಿಕೋಲಸ್ ಪೂರನ್ (ನಾಯಕ/ವಿಕೆಟ್ ಕೀಪರ್), ಕೈಲ್ ಮೇಯರ್ಸ್, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಓಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್, ಕೀಮೋ ಪಾಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications