Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ವೆಸ್ಟ್ ಇಂಡೀಸ್: ಮೊದಲ ಟಿ20 ಪಂದ್ಯಕ್ಕೆ ಅಡ್ಡಿಯಾಗಲಿದೆಯಾ ಮಳೆ?: ಹವಾಮಾನ ವರದಿ

ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಟಿ20 ಸರಣಿಯಲ್ಲಿ ಮುಖಾಮುಖಿಯಾಗುತ್ತಿದ್ದು ಇಂದು ಮೊದಲ ಪಂದ್ಯ ಟ್ರಿನಿಡಾಡ್‌ನಲ್ಲಿ ನಡೆಯಲಿದೆ. ಏಕದಿನ ಸರಣಿಯಲ್ಲಿ ಭಾರತ 201 ಅಂತರದಿಂದ ಗೆದ್ದು ಟ್ರೋಫಿ ವಶಕ್ಕೆ ಪಡೆದ ಬಳಿಕ ಚುಟುಕು ಮಾದರಿಯಲ್ಲಿಯೂ ಗೆಲುವಿನ ಮೇಲೆ ಚಿತ್ತ ನೆಟ್ಟಿದ್ದು ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದೆ. ಆದರೆ ಚುಟುಕು ಮಾದರಿಯಲ್ಲಿ ವಿಂಡೀಸ್ ಪಡೆ ಬಲಿಷ್ಠವಾಗಿದ್ದು ತೀವ್ರ ಪೈಪೋಟಿ ಎದುರಾಗುವ ನಿರೀಕ್ಷೆಯಿದೆ. ಹಾಗಾಗಿ ಸಾಕಷ್ಟು ಕುತೂಹಲ ಮೂಡಿಸಿದೆ ಈ ಸರಣಿ.

ಟ್ರಿನಿಡಾಡ್‌ನ ಟರೌಬಾದಲ್ಲಿರುವ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ. ಏಕದಿನ ಸರಣಿಯ ಅಂತಿಮ ಪಂದ್ಯ ಕೂಡ ಇಲ್ಲಿಯೇ ನಡೆದಿದ್ದು ಅಲ್ಲಿಯೂ ಭಾರತ ಅದ್ಭುತ ಯಶಸ್ಸು ಸಾಧಿಸಿತ್ತು ಎಂಬುದು ಗಮನಾರ್ಹ. ಹೀಗಾಗಿ ಈ ಪಂದ್ಯಕ್ಕೆ ಭಾರತ ಸಾಕಷ್ಟು ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿಯುತ್ತಿದೆ.

India vs West Indies 1st T20I: Trinidad Weather report: Will rain play spoilsport in 1st t20i

ಐದು ಪಂದ್ಉಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಆರಂಭವಾಗುತ್ತಿರುವ ಸಂದರ್ಭದಲ್ಲಿ ಪಂದ್ಯಕ್ಕೆ ಮಳೆಯ ಆತಂಕವೂ ಕಾಡುತ್ತಿರುವುದು ಸುಳ್ಳಲ್ಲ. ಟ್ರನಿಡಾಡ್‌ನಲ್ಲಿ ಹವಾಮಾನ ಅತ್ಯಂತ ಶೀಘ್ರವಾಗಿ ಬದಲಾಗುವ ಲಕ್ಷಣಗಳನ್ನು ಹೊಂದಿದ್ದು ಬೆಳಗಿನ ಜಾವ ಬಿಸಿಲಿನಿಂದ ಕೂಡಿದ್ದರೂ ಮಧ್ತಾಹ್ನದವೇಳೆಗೆ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳು ಇದೆ. ಅಲ್ಲದೆ ಈ ಭಾಗ ಈಗ ಮಳೆಗಾಲದ ಮಧ್ಯಭಾಗದಲ್ಲಿದ್ದು ಟಿ20 ಸರಣಿಯ ಮೊದಲ ಪಂದ್ಯಕ್ಕೆ ಇದರ ಪರಿಣಾಮವುಂಟಾಗುವ ಸಾಧ್ಯತೆಯಿದೆ.

ಇತ್ತೀಚಿನ ಹವಾಮಾನ ವರದಿಯ ಪ್ರಕಾರ ಪಂದ್ಯದ ದಿನ ಟ್ರನಿಡಾಡ್‌ನಲ್ಲಿ ಮಳೆಯಾಗುವ ಸಾಧ್ಯತೆ 50% ಇದೆ ಎನ್ನಲಾಗಿದೆ. ಅಲ್ಲದೆ ಮಧ್ತಾಹ್ನದ ಬಳಿಕ ಗುಡು ಸಿಡಿಲಿನಿಂದ ಕೂಡಿದ ವಾತಾವರಣವಿರಲಿದೆ. ಹಾಗಾಗಿ ಈ ಪಂದ್ಯಕ್ಕೆ ಮಳೆ ಅಡ್ಡುಯುಂಟು ಮಾಡುವ ಸಾಧ್ಯತೆ ದಟ್ಟವಾಗಿದೆ.

ವೆಸ್ಟ್ ಇಂಡೀಸ್ ತಂಡ: ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ಶಾಯ್ ಹೋಪ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಒಬೆಡ್ ಥಾಮಸ್, ಒಡ್ನ್‌ಶನ್ ಕಿಂಗ್, ಓಡಿಯನ್ ಸ್ಮಿತ್, ರೋಸ್ಟನ್ ಚೇಸ್, ರೊಮಾರಿಯೋ ಶೆಫರ್ಡ್

ಟೀಮ್ ಇಂಡಿಯಾ: ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಅರ್ಷ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್, ಕುಲದೀಪ್ ಯಾದವ್, ಅವೇಶ್ ಖಾನ್, ರವಿ ಬಿಷ್ಣೋಯ್, ತಿಲಕ್ ವರ್ಮಾ

Story first published: Thursday, August 3, 2023, 10:17 [IST]
Other articles published on Aug 3, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+