Ind vs WI 1st Test: ಚೊಚ್ಚಲ ಪಂದ್ಯದಲ್ಲೇ ಯಶಸ್ವಿ ಜೈಸ್ವಾಲ್ ಅಮೋಘ ಶತಕ: Live ಸ್ಕೋರ್
ಟೀಮ್ ಇಂಡಿಯಾದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ತಮ್ಮ ಚೊಚ್ಚಲ ಪಂದ್ಯದಲ್ಲಿಯೇ ಶತಕ ಸಿಡಿಸಿ ಅಮೋಘ ಸಾಧನೆ ಮಾಡಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅಪರೂಪದ ಮೈಲಿಗಲ್ಲು ನೆಟ್ಟಿದ್ದಾರೆ ಯುವ ಕ್ರಿಕೆಟಿಗ.
ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಡೊಮೆನಿಕಾದಲ್ಲಿ ನಡೆಯುತ್ತಿದ್ದು ಎರಡನೇ ದಿನದಾಟ ಆರಂಭವಾಗಿದೆ. ಮೊದಲ ದಿನ ವೆಸ್ಟ್ ಇಂಡೀಸ್ ತಂಡವನ್ನು 150 ರನ್‌ಗಳಿಗೆ ಆಲೌಟ್ ಮಾಡಿರುವ ಭಾರತ ನಂತರ ಬ್ಯಾಟಿಂಗ್‌ನಲ್ಲಿಯೂ ಉತ್ತಮ ಆರಂಭ ಪಡೆದುಕೊಂಡಿತು. ಇದೀಗ ಎರಡನೇ ದಿನದಾಟದಲ್ಲಿ ದೊಡ್ಡ ಮೊತ್ತದತ್ತ ಮುನ್ನುಗ್ಗುವ ವಿಶ್ವಾಸದಲ್ಲಿ ಕಣಕ್ಕಿಳಿಸಿದೆ
ಮೊದಲ ದಿನ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಆರಂಭದಿಂದಲೇ ಹಿನ್ನಡೆ ಅನುಭವಿಸಿತು. ಟೀಮ್ ಇಂಡಿಯಾದ ಸ್ಪಿನ್ನರ್ ಆರ್ ಅಶ್ವಿನ್ ದಾಳೀಗೆ ನಲುಗಿದ ವಿಂಡೀಸ್ ಪಡೆ ಸಾಧಾರಣ ಮೊತ್ತಕ್ಕೆ ಆಲೌಟ್ ಆಯಿತು. ವೆಸ್ಟ್ ಇಂಡೀಸ್ ವಿರುದ್ಧ ಯಾವಾಗಲೂ ಮೇಲುಗೂ ಸಾಧಿಸುವ ಅಶ್ವಿನ್ ಈ ಪಂದ್ಯದಲ್ಲಿ ಐದು ವಿಕೆಟ್‌ಗಳ ಗೊಂಚಲು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ರವೀಂದ್ರ ಜಡೇಜಾ ಮೂರು ವಿಕೆಟ್ ಕಬಳಿಸಿದ್ದು ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದುಕೊಂಡಿದ್ದಾರೆ.

Live ಸ್ಕೋರ್ ಹೀಗಿದೆ
ನಂತರ ಬ್ಯಾಟಿಂಗ್ ಆರಂಭಿಸಿರುವ ಭಾರತ ಅದ್ಭುತ ಆರಂಭವನ್ನು ಪಡೆದುಕೊಂಡಿದೆ. ನಾಯಕ ರೋಹಿತ್ ಶರ್ಮಾ ಜೊತೆಗೆ ಚೊಚ್ಚಲ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ಜೈಸ್ವಾಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ದಿನದಾಟದ ಅಂತ್ಯದಲ್ಲಿ ಭಾರತ 80 ರನ್‌ಗಳನ್ನು ಗಳಿಸಿದ್ದು ಯಾವುದೇ ವಿಕೆಟ್ ಕಳೆದುಕೊಂಡಿಲ್ಲ. ಯಶಸ್ವಿ ಜೈಸ್ವಾಲ್ 40 ರನ್ ಹಾಗೂ ರೋಹಿತ್ ಶರ್ಮಾ 30 ರನ್‌ಗಳನ್ನು ಗಳಿಸಿ ಎರಡನೇ ದಿನಕ್ಕೆ ಆಟವನ್ನು ಕಾಯ್ದಿರಿಸಿದ್ದು ಬ್ಯಾಟಿಂಗ್ ಮುಂದುವರಿಸಿದ್ದಾರೆ.
ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ರೇಮನ್ ರೈಫರ್, ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್ ಅಥಾನಾಜೆ, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ರಹಕೀಮ್ ಕಾರ್ನ್‌ವಾಲ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೋಮೆಲ್ ವಾರಿಕನ್
ಬೆಂಚ್: ಕಿರ್ಕ್ ಮೆಕೆಂಜಿ, ಶಾನನ್ ಗೇಬ್ರಿಯಲ್
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್
ಬೆಂಚ್: ಋತುರಾಜ್ ಗಾಯಕ್ವಾಡ್, ಶ್ರೀಕರ್ ಭರತ್, ಅಕ್ಷರ್ ಪಟೇಲ್, ನವದೀಪ್ ಸೈನಿ, ಮುಖೇಶ್ ಕುಮಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications