India vs West Indies: ಮೊದಲ ಪಂದ್ಯದಲ್ಲಿ ಇತ್ತಂಡಗಳ ಮುಖಾಮುಖಿ: ಟಾಸ್ ರಿಪೋರ್ಟ್, ಆಡುವ ಬಳಗ
ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿರುವ ಟೀಮ್ ಇಂಡಿಯಾ ಮೊದಲ ಟೆಸ್ಟ್ ಪಂದ್ಯವನ್ನಾಡಲು ಕಣಕ್ಕಿಳಿದಿದೆ. ಡೊಮೆನಿಕಾದಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಿದ್ದು ಆತಿಥೇಯ ವೆಸ್ಟ್ ಇಂಡೀಸ್ ತಂಡ ಟಾಸ್ ಗೆದ್ದು ಆರಂಭದಲ್ಲಿ ಬ್ಯಾಟಿಂಗ್ ನಡೆಸಲು ನಿರ್ಧರಿಸಿದೆ. ಹೀಗಾಗಿ ಟೀಮ್ ಇಂಡಿಯಾ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಇಬ್ಬರು ಯುವ ಆಟಗಾರರು ಪದಾರ್ಪಣೆ ಮಾಡುತ್ತಿದ್ದಾರೆ. ಯಶಸ್ವಿ ಜೈಸ್ವಾಲ್ ಆರಂಭಿಕನಾಗಿ ಕಣಕ್ಕಿಳಿಯಲಿದ್ದು ರೋಹಿತ್ ಶರ್ಮಾಗೆ ಸಾಥ್ ನೀಡಲಿದ್ದರೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಇಶಾನ್ ಕಿಶನ್ ಕೂಡ ಭಾರತ ಟೆಸ್ಟ್ ತಂಡಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

ಇನ್ನು ಇಬ್ಬರು ಸ್ಪಿನ್ನರ್‌ಗಳು ಹಾಗೂ ಮೂವರು ವೇಗಿಗಳೊಂದಿಗೆ ಬಾರತ ಕಣಕ್ಕಿಳಿಯುತ್ತಿದ್ದು ಶಾರ್ದೂಲ್ ಠಾಕೂರ್, ಜಯ್‌ದೇವ್ ಉನಾದ್ಕಟ್ ಹಾಗೂ ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್‌ನಲ್ಲಿ ಆಡಲಿದ್ದಾರೆ. ಇನ್ನು ವೆಸ್ಟ್ ಇಂಡೀಸ್ ತಂಡದಲ್ಲಿಯೂ ಓರ್ವ ಆಟಗಾರ ಪದಾರ್ಪಣೆ ಮಾಡುತ್ತಿದ್ದು ಅಲಿಕ್ ಅಥನಾಜ್ ಮೊದಲ ಬಾರಿಗೆ ಟೆಸ್ಟ್ ಕ್ಯಾಪ್ ಧರಿಸಿದ್ದಾರೆ.
Live ಸ್ಕೋರ್ ಹೀಗಿದೆ
ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ರೇಮನ್ ರೈಫರ್, ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್ ಅಥಾನಾಜೆ, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ರಹಕೀಮ್ ಕಾರ್ನ್‌ವಾಲ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೋಮೆಲ್ ವಾರಿಕನ್
ಬೆಂಚ್: ಕಿರ್ಕ್ ಮೆಕೆಂಜಿ, ಶಾನನ್ ಗೇಬ್ರಿಯಲ್
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್
ಬೆಂಚ್: ಋತುರಾಜ್ ಗಾಯಕ್ವಾಡ್, ಶ್ರೀಕರ್ ಭರತ್, ಅಕ್ಷರ್ ಪಟೇಲ್, ನವದೀಪ್ ಸೈನಿ, ಮುಖೇಶ್ ಕುಮಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications