ಭಾರತ vs ವೆಸ್ಟ್ ಇಂಡೀಸ್: ಏಕದಿನ ಸರಣಿಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ಕ್ರಿಕೆಟ್ ವೆಸ್ಟ್ ಇಂಡೀಸ್

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಸರಣಿ ಅಂತ್ಯವಾಗಿದ್ದು ಭಾರತ ಈಗ ತವರಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಸೀಮಿತ ಓವರ್‌ಗಳ ಸರಣಿಗೆ ಸಜ್ಜಾಗುತ್ತಿದೆ. ಈ ಸರಣಿಗೆ ಭಾರತ ತಂಡವನ್ನು ಬುಧವಾರ ಘೋಷಣೆ ಮಾಡಿಲಾಗಿದೆ. ಇದೀಗ ಏಕದಿನ ಸರಣಿಯಲ್ಲಿ ಭಾಗಿಯಾಗಲಿರುವ ವೆಸ್ಟ್ ಇಂಡೀಸ್ ತಂಡವನ್ನು ಕೂಡ ಘೋಷಣೆ ಮಾಡಲಾಗಿದ್ದು ಬಲಿಷ್ಠ ಆಟಗಾರರ ಪಡೆಯನ್ನೇ ಹೊಂದಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಫೆಬ್ರವರಿ 6 ರಿಂದ ಆರಂಭವಾಗಲಿದ್ದು ಫೆಬ್ರವರಿ 20ರವರೆಗೆ ನಡಲಿದೆ. ಈ ಸರಣಿಯಲ್ಲಿ ಭಾರತದ ವಿರುದ್ಧ ವಿಂಡೀಸ್ ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಲಿದೆ. ಮೊದಲಿಗೆ ಫೆಬ್ರವರಿ 6, 9 ಮತ್ತು 11 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಏಕದಿನ ಪಂದ್ಯಗಳು ನಡೆಯಲಿವೆ.

ಭಾರತ vs ವೆಸ್ಟ್ ಇಂಡೀಸ್ ಏಕದಿನ: ತಂಡದಿಂದ ಹೊರಬಿದ್ದ ಕೆಎಲ್ ರಾಹುಲ್; ಕಾರಣವೇನು?ಭಾರತ vs ವೆಸ್ಟ್ ಇಂಡೀಸ್ ಏಕದಿನ: ತಂಡದಿಂದ ಹೊರಬಿದ್ದ ಕೆಎಲ್ ರಾಹುಲ್; ಕಾರಣವೇನು?

ಇನ್ನು ಭಾರತದ ವಿರುದ್ಧದ ಈ ಏಕದಿನ ಸರಣಿಯಲ್ಲಿ ಭಾಗಿಯಾಗುವ ವೆಸ್ಟ್ ಇಂಡೀಸ್ ತಂಡದಲ್ಲಿ ಕೆಲ ಪ್ರಮುಖ ಆಟಗಾರರು ಕಮ್‌ಬ್ಯಾಕ್ ಮಾಡಿದ್ದಾರೆ. ಅನುಭವಿ ವೇಗದ ಬೌಲರ್ ಕೇಮರ್ ರೋಚ್, ಮಧ್ಯಮ ಕ್ರಮಾಂಕದ ಬ್ಯಾಟರ್ ಎನ್‌ಕ್ರಮಾಹ್ ಬೋನ್ನರ್ ಮತ್ತು ಆರಂಭೀಕ ಆಟಗಾರ ಬ್ರೆಂಡನ್ ಕಿಂಗ್ ಈ ಸರಣಿಯ ಮೂಲಕ ಕಮ್‌ಬಯಾಕ್ ಮಾಡಿದ್ದಾರೆ. ಕೇಮರ್ ರೋಚ್ ವಿಂಡೀಸ್ ತಂಡದ ಪರವಾಗಿ 92 ಏಕದಿನ ಪಂದ್ಯಗಳನ್ನು ಆಡಿದ್ದು 124 ವಿಕೆಟ್ ಪಡೆದಿದ್ದಾರೆ.

ಇನ್ನು ಬೋನ್ನರ್ ವರ್ಷದ ಹಿಂದೆ ಬಾಂಗ್ಲಾದೇಶದ ವಿರುದ್ಧ ಏಕದಿನ ಮಾದರಿಗೆ ಪದಾರ್ಪಣೆಯನ್ನು ಮಾಡಿದ್ದರು. ಈವರೆಗೂ ಮೂರು ಪಂದ್ಯಗಳಲ್ಲಿ ಆಡಿದ್ದಾರೆ. ಇನ್ನು ಬ್ರೆಂಡನ್ ಕಿಂಗ್ ಕೂಡ ಈವರೆಗೆ ಏಕದಿನ ಮಾದರಿಯಲ್ಲಿ ನಾಲ್ಕು ಪಂದ್ಯಗಳಲ್ಲಿ ಮಾತ್ರವೇ ವೆಸ್ಟ್ ಇಂಡೀಸ್ ತಂಡವನ್ನು ಮುನ್ನಡೆಸಿದ್ದಾರೆ.

ಇನ್ನು ಅನುಭವಿ ಕಿರಾನ್ ಪೊಲಾರ್ಡ್ ವೆಸ್ಟ್ ಇಂಡೀಸ್ ತಂಡದ ನಾಯಕನಾಗಿ ಈ ಪ್ರವಾಸದಲ್ಲಿ ಮುನ್ನಡೆಸಲಿದ್ದು ನಿಕೋಲಸ್ ಪೂರನ್ ಉಪನಾಯಕನಾಗಿದ್ದಾರೆ. ವೆಸ್ಟ್ ಇಂಡೀಸ್ ತಂಡದ ಬಹುತೇಕ ಅನುಭವಿ ಆಟಗಾರರು ಭಾರತದಲ್ಲಿ ಐಪಿಎಲ್ ಟೂರ್ನಿ ಆಡಿದ ಅಪಾರ ಅನುಭವ ಹೊಂದಿದ್ದಾರೆ. ಹೀಗಾಗಿ ಭಾರತದ ಪರಿಚಿತ ವಾತಾವರಣದಲಲ್ಇ ವಿಂಡೀಸ್ ತಂಡದ ಪ್ರದರ್ಶನ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ.

ಧೋನಿಯೇ ಐಪಿಎಲ್‌ನ ಶ್ರೇಷ್ಠ ನಾಯಕ, ನಾನು ಸಿಎಸ್‌ಕೆ ಪರ ಆಡಬೇಕು ಎಂದ ಆರ್‌ಸಿಬಿಯ ಸ್ಟಾರ್ ಆಟಗಾರ!ಧೋನಿಯೇ ಐಪಿಎಲ್‌ನ ಶ್ರೇಷ್ಠ ನಾಯಕ, ನಾನು ಸಿಎಸ್‌ಕೆ ಪರ ಆಡಬೇಕು ಎಂದ ಆರ್‌ಸಿಬಿಯ ಸ್ಟಾರ್ ಆಟಗಾರ!

ಇನ್ನು ವೆಸ್ಟ್ ಇಂಡೀಸ್ ತಂಡ ಸದ್ಯ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಆಡುತ್ತಿದ್ದು ಭರ್ಜರಿ ಪ್ರದರ್ಶನ ನೀಡುತ್ತಾ ಸಾಕಷ್ಟು ಆತ್ಮವಿಶ್ವಾಸವನ್ನು ಗಳಿಸುತ್ತಿದೆ. ಪ್ರವಾಸಿ ಇಂಗ್ಲೆಂಡ್ ವಿರುದ್ಧ ಉತ್ತಮ ಅಂತರದಿಂದ ಸರಣಿ ಗೆಲುವು ಸಾಧಿಸಿ ಭಾರತ ವಿರುದ್ಧದ ಸರಣಿಯಲ್ಲಿ ಆಡಲು ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳುವ ಇರಾದೆಯಲ್ಲಿದೆ ವಿಂಡೀಸ್ ಪಡೆ.

ವೆಸ್ಟ್ ಇಂಡೀಸ್ ಏಕದಿನ ತಂಡ: ಕಿರಾನ್ ಪೊಲಾರ್ಡ್ (ನಾಯಕ), ಕೇಮರ್ ರೋಚ್, ಎನ್‌ಕ್ರುಮಾ ಬೊನ್ನರ್, ಬ್ರಾಂಡನ್ ಕಿಂಗ್, ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ಶಮರ್ ಬ್ರೂಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಅಲ್ಜಾರಿ ಜೋಸೆಫ್, ನಿಕೋಲಸ್ ಪೂರನ್, ಒಡೆಯನ್ ಸ್ಮಿತ್, ಒಡೆಯನ್ ಶೆಫರ್ಡ್ ಹೇಡನ್ ವಾಲ್ಷ್ ಜೂನಿಯರ್

For Quick Alerts
ALLOW NOTIFICATIONS
For Daily Alerts
Story first published: Thursday, January 27, 2022, 16:12 [IST]
Other articles published on Jan 27, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X