
ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಅಂತ್ಯವಾಗಿದ್ದಿ ಇದೀಗ ಎರಡನೇ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಮೊದಲ ಪಂದ್ಯದಲ್ಲಿ ಭಾರತ ತಂಡ ಎಲ್ಲಾ ವಿಭಾಗದಲ್ಲಿಯೂ ಅದ್ಭುತ ಪ್ರದರ್ಶನ ನೀಡಲು ಯಶಸ್ವಿಯಾಗಿದ್ದು ಅರ್ಹ ಗೆಲುವು ಸಂಪಾದಿಸಿತ್ತು. ಎರಡನೇ ಪಂದ್ಯದಲ್ಲಿಯೂ ನಾಯಕ ರೋಹಿತ್ ಶರ್ಮಾ ಭಾರತ ತಂಡದಿಂದ ಸರ್ವಾಂಗೀಣ ಪ್ರದರ್ಶನದ ನಿರೀಕ್ಷೆಯಲ್ಲಿದ್ದಾರೆ.
ಇನ್ನು ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ 0-3 ಅಂತರದಿಂದ ಸೋಲು ಕಂಡಿರುವ ಕಿರಾನ್ ಪೊಲಾರ್ಡ್ ನೇತೃತ್ವದ ವೆಸ್ಟ್ ಇಂಡಿಸ್ ತಂಡ ತನ್ನ ನೆಚ್ಚಿನ ಮಾದರಿಯಾದ ಟಿ20 ಕ್ರಿಕೆಟ್‌ನಲ್ಲಿ ತಿರುಗಿ ಬೀಳುವ ಪ್ರಯತ್ನ ನಡೆಸಲಿದೆ. ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ನಡೆದ ಸರಣಿಯಲ್ಲಿ ವಿಂಡೀಸ್ ಪಡೆ 3-2 ಅಂತರದ ಗೆಲುವು ಸಾಧಿಸಿದ ಕಾರಣ ಭಾರತದ ವಿರುದ್ಧದ ಅಂತಿಮ ಎರಡು ಪಂದ್ಯದಲ್ಲಿ ತಿರುಗಿ ಬೀಳುವ ಆತ್ಮ ವಿಶ್ವಾಸದಲ್ಲಿದೆ. ಆದರೆ ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ದೊಡ್ಡ ಪ್ರತಿಸ್ಪರ್ಧೆಯನ್ನು ಒಡ್ಡಲು ಪೊಲಾರ್ಡ್ ಬಳಗ ವಿಫಲವಾಗಿದ್ದು ಸ್ಪಷ್ಟವಾಗಿದೆ.
ಭಾರತ ಮುಂದಿನ ಎರಡು ಪಂದ್ಯಗಳ ಪೈಕಿ ಒಂದರಲ್ಲಿ ಗೆಲುವು ಸಾಧಿಸಿದರೆ ರೋಹಿತ್ ಶರ್ಮಾ ಪೂರ್ಣ ಪ್ರಮಾಣದ ವೈಟ್ ಬಾಲ್ ನಾಯಕತ್ವದಲ್ಲಿ ಭಾರತ ಸತತ ಮೂರನೇ ಸರಣಿಯನ್ನು ಗೆದ್ದುಕೊಂಡಂತಾಗುತ್ತದೆ. ಈ ಸರಣಿಯಲ್ಲಿ ಭಾರತ ತಂಡಕ್ಕೆ ಒಂದೇ ಒಂದು ಕಳವಳಕಾರಿ ಸಂಗತಿಯೆಂದರೆ ವಿರಾಟ್ ಕೊಹ್ಲಿ ಫಾರ್ಮ್ ಸಮಸ್ಯೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಕೊಹ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ್ದು 8, 18, 0 ಮತ್ತು 17 ರನ್‌ಗಳನ್ನು ಮಾತ್ರವೇ ಗಳಿಸಿದ್ದಾರೆ.
ಭಾರತ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್ , ಹರ್ಷಲ್ ಪಟೇಲ್, ರುತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ಕುಲದೀಪ್ ಯಾದವ್ ಮತ್ತು ಹರ್ಪ್ರೀತ್ ಬ್ರಾರ್.
ವೆಸ್ಟ್ ಇಂಡೀಸ್ ಸ್ಕ್ವಾಡ್: ಕಿರಾನ್ ಪೊಲಾರ್ಡ್ (ನಾಯಕ), ನಿಕೋಲಸ್ ಪೂರನ್ (ಉಪನಾಯಕ), ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ರೋಸ್ಟನ್ ಚೇಸ್, ಶೆಲ್ಡನ್ ಕಾಟ್ರೆಲ್, ಡೊಮಿನಿಕ್ ಡ್ರೇಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೀಲ್ ಹೊಸೈನ್, ಬ್ರಾಂಡನ್ ಕಿಂಗ್, ರೋವ್‌ಮನ್ ಪೊವೆಲ್, ರೊಮಾರಿಯೊ ಶೆಫರ್ಡ್, ಓಡಿಯನ್ ಶೆಫರ್ಡ್, ಓಡಿಯನ್ ಕೈಲ್ ಮೇಯರ್ಸ್, ಹೇಡನ್ ವಾಲ್ಷ್ ಜೂನಿಯರ್.
ಸಂಭಾವ್ಯ ಆಡುವ ಬಳಗ:
ಭಾರತ: ರೋಹಿತ್ ಶರ್ಮಾ, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ರವಿ ಬಿಷ್ಣೋಯ್ , ಯುಜ್ವೇಂದ್ರ ಚಹಾಲ್
ವೆಸ್ಟ್ ಇಂಡಿಸ್: ಬ್ರೆಂಡನ್ ಕಿಂಗ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್, ಕಿರಾನ್ ಪೊಲಾರ್ಡ್ (ನಾಯಕ), ರೋಸ್ಟನ್ ಚೇಸ್/ಜೇಸನ್ ಹೋಲ್ಡರ್, ರೊಮಾರಿಯೋ ಶೆಫರ್ಡ್, ಓಡಿಯನ್ ಸ್ಮಿತ್, ಫ್ಯಾಬಿಯನ್ ಅಲೆನ್, ಶೆಲ್ಡನ್ ಕಾಟ್ರೆಲ್, ಅಕೀಲ್ ಹೋಸೇನ್
ಪಂದ್ಯದ ಮಾಹಿತಿ:
ದಿನಾಂಕ ಹಾಗೂ ಸಮಯ: ಭಾರತ ಹಾಘೂ ವೆಸ್ಟ್ ಇಂಡೀಸ್ ನಡುವಿನ 2ನೇ ಟಿ20 ಪಂದ್ಯ ಫೆಬ್ರವರಿ 18 ಶುಕ್ರವಾರದಂದು ನಡೆಯಲಿದೆ. ಸಮಯ ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದ್ದು 6:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ನೇರ ಪ್ರಸಾರ: ಸ್ಟಾರ್‌ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪಂದ್ತ ನೇರಪ್ರಸಾರವಿರಲಿದ್ದು ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರರು ಕೂಡ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.