IND vs WI Test: ಸರಣಿ ಗೆಲುವಿನ ವಿಶ್ವಾಸದಲ್ಲಿ ಗಿಲ್ ಪಡೆ: ಬದಲಾವಣೆ ಸಾಧ್ಯತೆ
ಭಾರತ ಹಾಗೂ ವೆಸ್ಟ್ ಇಡೀಸ್ ನಡುವಣ ಎರಡನೇ ಟೆಸ್ಟ್ ಪಂದ್ಯಕ್ಕೆ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ ಸಜ್ಜಾಗಿದೆ. ಈಗಾಗಲೇ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದಿರುವ ಟೀಮ್ ಇಂಡಿಯಾ, ಎರಡನೇ ಪಂದ್ಯದಲ್ಲೂ ಭರ್ಜರಿ ಪ್ರದರ್ಶನ ನೀಡಿ ಗೆಲುವು ದಾಖಲಿಸುವ ಪ್ಲ್ಯಾನ್ ಮಾಡಿಕೊಂಡಿದೆ. ಈ ವೇಳೆ ಟೀಮ್ ಇಂಡಿಯಾದ ಸಂಯೋಜನೆ ಹೇಗೆ ಇರಲಿದೆ ಎಂಬ ಬಗ್ಗೆ ಇಲ್ಲಿದೆ ವರದಿ.
ಶುಭಮನ್ ಗಿಲ್ ಪಡೆ ತವರಿನಲ್ಲಿ ಮೊದಲ ಸರಣಿ ಗೆಲುವಿನ ಕನಸು ಕಾಣುತ್ತಿದೆ. ಅಲ್ಲದೆ ಸರಣಿ ವಶಕ್ಕೆ ಪಡೆಯುವ ಪ್ಲ್ಯಾನ್ ಮಾಡಿಕೊಂಡಿದೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬದಲಾವಣೆಗಳನ್ನು ಮಾಡಿಕೊಳ್ಳಬಹುದಾಗಿದೆ. ಶುಭಮನ್ ಗಿಲ್ ತವರಿನಲ್ಲಿ ಸರಣಿ ಗೆಲುವಿನ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿಯಲ್ಲಿ ಬಡ್ತಿ ಪಡೆಯುವ ಕನಸು ಕಾಣುತ್ತಿದೆ.

ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಕಾಣಿಸಿಕೊಳ್ಳಲಿದ್ದಾರೆ. ಯಶಸ್ವಿ ಜೈಸ್ವಾಲ್ ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಬೇಕಿದೆ. ಇನ್ನು ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿ ಅಬ್ಬರಿಸಿದ್ದ ರಾಹುಲ್ ಅವರು ಸ್ಥಿರ ಬ್ಯಾಟಿಂಗ್ ಪ್ರದರ್ಶನವನ್ನು ನೀಡಬೇಕಿದೆ. ಇನ್ನು ಸಾಯಿ ಸುದರ್ಶನ್ ಅವರಿಗೆ ಅವಕಾಶ ಸಿಗುತ್ತದಾ ಎಂಬ ಪ್ರಶ್ನೆಗಳು ಎದ್ದಿವೆ. ಟೀಮ್ ಮ್ಯಾನೇಜ್ಮೆಂಟ್ ಸಾಯಿ ಅವರ ಮೇಲೆ ಭರವಸೆ ಇಡುವುದಾಗಿ ತಿಳಿಸಿದೆ. ಇನ್ನು ಈ ಪಂದ್ಯದಲ್ಲಿ ವಿಂಡೀಸ್ ಬೌಲರ್‌ಗಳನ್ನು ಕಾಡಬೇಕಿದೆ.
ತಂಡದಲ್ಲಿ ಬದಲಾವಣೆ
ನಾಯಕ ಶುಭಮನ್ ಗಿಲ್ ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಬೇಕಿದೆ. ಇನ್ನು ಧ್ರುವ್ ಜುರೇಲ್ ಮಧ್ಯಮ ಕ್ರಮಾಂಕಕ್ಕೆ ಬಲ ತುಂಬ ಬೇಕಿದೆ. ಇನ್ನು ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಬಹುದಾಗಿದೆ. ಇನ್ನು ವಾಷಿಂಗ್ಟನ್ ಸುಂದರ್ ಸಹ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ.
ಇನ್ನು ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಈ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಅವರ ಮೇಲೆ ಎಲ್ಲರ ಕಣ್ಣು ನೆಟ್ಟಿವೆ. ಇನ್ನು ನುರಿತ ಸ್ಪಿನ್ ಬೌಲರ್ ಆಗಿ ಕುಲ್‌ದೀಪ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ.
ಭಾರತದ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಬಿ ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಪುಟಿದೇಳುವ ಕನಸು
ಭಾರತ ತಂಡದ ಬಲಿಷ್ಠ ತಂಡಕ್ಕೆ ವಿಂಡೀಸ್ ಎರಡನೇ ಟೆಸ್ಟ್ ಪಂದ್ಯದಲ್ಲಿ ಪುಟಿದೇಳುವ ಅವಶ್ಯಕತೆ ಇದೆ. ಈ ಪಂದ್ಯದಲ್ಲಿ ಸ್ಟಾರ್ ಆಟಗಾರರು ಭಾರತದ ಬೌಲರ್‌ಗಳ ತಂತ್ರವನ್ನು ಮೆಟ್ಟಿನಿಂತು ಬ್ಯಾಟ್ ಮಾಡಬೇಕಿದೆ. ಅಲ್ಲದೆ ಬೌಲರ್‌ಗಳು ಸಹ ತಮ್ಮ ಶಿಸ್ತು ಬದ್ಧ ದಾಳಿಯಿಂದ ಎದುರಾಳಿಗಳನ್ನು ಕಟ್ಟಿ ಹಾಕಬೇಕಿದೆ. ಅಂದಾಗ ಮಾತ್ರ 1987ರಲ್ಲಿ ಮಾಡಿದ ಸಾಧನೆಯನ್ನು ಮಾಡಬಹುದಾಗಿದೆ. ಇನ್ನು ಈ ಮೈದಾನದಲ್ಲಿ ಕೊನೆಯ ಬಾರಿಗೆ ಪ್ರವಾಸಿ ತಂಡ ಪಂದ್ಯವನ್ನು ಗೆದ್ದಿದ್ದು ವಿಂಡೀಸ್. ಈಗ ಮತ್ತೊಮ್ಮೆ ಇಂತಹ ಪ್ರದರ್ಶನ ನೀಡಬೇಕಿದೆ.

ವಿಂಡೀಸ್ ಸಂಭಾವ್ಯ ತಂಡ: ಟಾಗೆನರಿನ್ ಚಂದ್ರಪಾಲ್, ಜಾನ್ ಕ್ಯಾಂಪ್‌ಬೆಲ್, ಅಲಿಕ್ ಅಥಾನಾಜೆ, ಬ್ರಾಂಡನ್ ಕಿಂಗ್, ಶಾಯ್ ಹೋಪ್ (ವಿಕೆಟ್ ಕೀಪರ್), ರೋಸ್ಟನ್ ಚೇಸ್ (ಕ್ಯಾಪ್ಟನ್), ಜಸ್ಟಿನ್ ಗ್ರೀವ್ಸ್, ಜೋಮೆಲ್ ವಾರಿಕನ್, ಖಾರಿ ಪಿಯರೆ, ಜೋಹಾನ್ ಲೇನ್ / ಜೆಡಿಯಾ ಬ್ಲೇಡ್ಸ್, ಜೇಡನ್ ಸೀಲ್ಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications