Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs WI: ಐದನೇ ದಿನದಾಟದ ಮೊದಲ ಸೆಶನ್ ಸಂಪೂರ್ಣ ಮಳೆಗೆ ಆಹುತಿ

ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಹಾಗೂ ಕೊನೆಯ ಪಂದ್ಯ ಟ್ರೆನಿಡಾಡ್‌ನ ಫೋರ್ಟ್‌ಆಫ್ ಸ್ಪೇನ್‌ನಲ್ಲಿ ನಡೆಯುತ್ತಿದೆ. ಗೆಲುವಿನ ನಿರೀಕ್ಷೆಯಲ್ಲಿರುವ ಟೀಮ್ ಇಂಡಿಯಾಗೆ ಕೊನೆಯ ದಿನ ಮಳೆರಾಯ ಕಾಟಕೊಟ್ಟಿದ್ದು ಮೊದಲ ಸೆಶನ್ ಸಂಪೂರ್ಣವಾಗಿ ಮಳೆಗೆ ಆಹುತಿಯಾಗಿದೆ. ಆದರೆ ಆಶಾದಾಯಕವೆನ್ನುವಂತೆ ಮಳೆ ಕಡಿಮೆಯಾಗಿದ್ದು ಉಳಿದ ಅವಧಿಯ ಆಡುವ ಅವಕಾಶದ ನಿರೀಕ್ಷೆಯಿದೆ.

ಸದ್ಯದ ಮಾಹಿತಿಯ ಪ್ರಕಾರ ಮಳೆ ಮತ್ತೆ ಸುರಿಯದಿದ್ದರೆ ಭಾರತೀಯ ಕಾಲಮಾನ ರಾತ್ರಿ 10:45ಕ್ಕೆ ಪಂದ್ಯ ಮುಂದುವರಿಯಲಿದೆ. 67 ಓವರ್‌ಗಳ ಪಂದ್ಯ ನಡೆಯುವ ಅವಕಾಶ ಮಾತ್ರವೇ ಇದ್ದು ಇದರಲ್ಲಿ ಟೀಮ್ ಇಂಡಿಯಾ 8 ವಿಕೆಟ್‌ಗಳನ್ನು ಕಬಳಿಸಬೇಕಿದೆ. ಅತ್ತ ವಿಂಡೀಸ್ ಗೆಲುವಿಗೆ 289 ರನ್‌ಗಳ ಅಗತ್ಯವಿದೆ. ಹೀಗಾಗಿ ಈ ಟೆಸ್ಟ್ ಸರಣಿಯ ಅಂತಿಮ ಪಂದ್ಯವನ್ನು ಕೂಡ ಗೆದ್ದು ಎರಡು ಪಂದ್ಯಗಳ ಸರಣಿಯನ್ನು ವೈಟ್‌ವಾಶ್ ಮಾಡುವ ಉತ್ಸಾಹದಲ್ಲಿ ರೋಹಿತ್ ಶರ್ಮಾ ಪಡೆಯಿದ್ದರೆ ವೆಸ್ಟ್ ಇಂಡೀಸ್ ತಂಡ ಸರಣಿಯನ್ನು ಡ್ರಾ ಮಾಡಿಕೊಳ್ಳುವ ಪ್ರಯತ್ನ ನಡೆಸಲಿದೆ.

India vs West Indies, 2nd Test: Rain washes out 1st session of final day

ವೆಸ್ಟ್ ಇಂಡೀಸ್ ಪರವಾಗಿ ಟಗೆನರೈನ್ ಚಂದರ್‌ಪಾಲ್ ಹಾಗೂ ಜರ್ಮನ್‌ ಬ್ಲಾಕ್‌ವುಡ್ ಕ್ರೀಸ್‌ನಲ್ಲಿದ್ದು ಕೊನೆಯ ದಿನ ಬ್ಯಾಟಿಂಗ್ ಆರಂಭಿಸುತ್ತಿದ್ದಾರೆ. ನಾಯಕ ಕ್ರೇಗ್ ಬ್ರಾಥ್ ವೇಟ್ ಹಾಗೂ ಕ್ರಿಕ್ ಮೆಕೆಂಜಿ ವಿಕೆಟ್ ಕಳೆದುಕೊಂಡಿದ್ದು ಈ ಇಬ್ಬರ ವಿಕೆಟ್ ಕೂಡ ಆರ್ ಅಶ್ವಿನ್ ಕಬಳಿಸಿ ಕೊನೆಯ ಇನ್ನಿಂಗ್ಸ್‌ನಲ್ಲಿ ವಿಂಡೀಸ್ ಪಡೆಗೆ ಮತ್ತೊಮ್ಮೆ ಆಘಾತ ನೀಡುವ ಸೂಚನೆ ನೀಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ನಡೆಸಿರುವ ಟೀಮ್ ಇಂಡಿಯಾ ವಿರಾಟ್ ಕೊಹ್ಲಿ ಶತಕ ಹಾಗೂ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ರವೀಂದ್ರ ಜಡೇಜಾ ಹಾಗೂ ಆರ್ ಅಶ್ವಿನ್ ಅರ್ಧ ಶತಕದ ನೆರವಿನಿಂದ 438 ರನ್‌ಗಳನ್ನು ಗಳಿಸಿತ್ತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ವಿಂಡೀಸ್ ತಂಡ 255 ರನ್‌ಗಳನ್ನು ಗಳಿಸಿ ಆಲೌಟ್ ಆಯಿತು. ಭಾರತದ ಪರವಾಗಿ ಮೊಹಮ್ಮದ್ ಸಿರಾಜ್ ಐದು ವಿಕೆಟ್‌ಗಳ ಗೊಂಚಲು ಪಡೆದು ಮಿಂಚಿದರು.

ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ಕಿರ್ಕ್ ಮೆಕೆಂಜಿ, ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್ ಅಥಾನಾಜೆ, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೋಮೆಲ್ ವಾರಿಕನ್, ಶಾನನ್ ಗೇಬ್ರಿಯಲ್ ಆಡುತ್ತಿದ್ದಾರೆ
ಬೆಂಚ್: ಕೆವಿನ್ ಸಿಂಕ್ಲೇರ್, ರಹಕೀಮ್ ಕಾರ್ನ್ವಾಲ್

ಟೀಮ್ ಇಂಡಿಯಾ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್, ಮುಖೇಶ್ ಕುಮಾರ್, ಮೊಹಮ್ಮದ್ ಸಿರಾಜ್
ಬೆಂಚ್: ಋತುರಾಜ್ ಗಾಯಕ್ವಾಡ್, ಶ್ರೀಕರ್ ಭರತ್, ಅಕ್ಸರ್ ಪಟೇಲ್, ನವದೀಪ್ ಸೈನಿ, ಶಾರ್ದೂಲ್ ಠಾಕೂರ್

Story first published: Monday, July 24, 2023, 22:25 [IST]
Other articles published on Jul 24, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+