Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs WI: ಭಾರತ vs ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯ ಇಂದಿನಿಂದ ಆರಂಭ

ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಇಂದಿನಿಂದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಟ್ರನಿಡಾಡ್‌ನಲ್ಲಿ ಈ ಪಂದ್ಯ ನಡೆಯಲಿದ್ದು ಎರಡು ತಮಡಗಳು ಕೂಡ ತೀವ್ರ ಪೈಪೋಟಿಯನ್ನು ಪಡೆಸಲಿದೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು ಸಾಧಿಸಿರುವ ಕಾರಣ ಸರಣಿಯಲ್ಲಿ 1-0 ಅಂತರದ ಮುನ್ನಡೆಯಲ್ಲಿದೆ. ಈ ಪಂದ್ಯವನ್ನು ಗೆದ್ದು ಸರಣಿ ವೈಟ್‌ವಾಶ್ ಮಾಡುವ ಆತ್ಮವಿಶ್ವಾಸದಲ್ಲಿದೆ ರೋಹಿತ್ ಪಡೆ.

ಇನ್ನು ಮೊದಲ ಪಂದ್ಯದಲ್ಲಿ ಹೀನಾಯ ಪ್ರದರ್ಶನ ನೀಡಿದ ವೆಸ್ಟ್ ಇಂಡೀಸ್ ತಂಡ ಈ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿ ಕಮ್‌ಬ್ಯಾಕ್ ಮಾಡಬೇಕಿದೆ. ಹಾಗಿದ್ದಲ್ಲಿ ಮಾತ್ರವೇ ಸರಣಿಯನ್ನು ವೈಟ್‌ವಾಶ್ ಅಂತರದಿಂದ ಕಳೆದುಕೊಳ್ಳುವ ಅವಮಾನದಿಂದ ಪಾರಾಗಲಿದೆ. ಹೀಗಾಗಿ ಈ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ.

India vs West Indies: 2nd Test starts from today, India eye on whitewash the series

ಪಿಚ್ ರಿಪೋರ್ಟ್

ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಡೆಯಲಿರುವ ಈ ಪಂದ್ಯ ಕೆರಿಬಿಯನ್‌ನ ಟೆಸ್ಟ್ ಪಿಚ್‌ಗಳ ಗುಣಗಳನ್ನು ಹೊಂದಿದ್ದು ವೇಗದ ಬೌಲಿಂಗ್‌ಗೆ ನೆರವು ನೀಡುವ ನಿರೀಕ್ಷೆಯಿದೆ. ಬೌಲರ್‌ಗಳಿಗೆ ನೆರವು ನೀಡಿದರೂ ಮೊದ ಎರಡು ಇನ್ನಿಂಗ್ಸ್‌ನಲ್ಲಿ ಬ್ಯಾಟರ್‌ಗಳಿಗೆ ರನ್‌ಗಳಿಸಲು ಕೂಡ ಉತ್ತಮ ನೆರವು ದೊರೆಯಲಿದೆ. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಇಲ್ಲಿ ಬೌಲಿಂಗ್ ವಿಭಾಗ ಮೇಲುಗೈ ಸಾಧಿಸುವ ಸಾಧ್ಯತೆ ಹೆಚ್ಚಿದೆ. ಮೊದಲ ಪಂದ್ಯದಲ್ಲಿ ಮೊದಲ ದಿನದಿಂದಲೇ ಹೆಚ್ಚು ತಿರುವು ಪಡೆಯುವ ಮೂಲಕ ಸ್ಪಿನ್ನರ್‌ಗಳಿಗೆ ನೆರವು ನೀಡಿದ್ದರೆ ಈ ಪಂದ್ಯ ಅದಕ್ಕೆ ತದ್ವಿರುದ್ದವಾಗಿರಲಿದ್ದು ವೇಗಿಗಳಿಗೆ ನೆರವು ನೀಡುವ ನಿರೀಕ್ಷೆಯಿದೆ.

ಇನ್ನು ಈ ಪಂದ್ಯದ ಆರಂಭದ ದಿನದಿಂದಲೂ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಹೀಗಾಗಿ ಮಳೆ ಪಂದ್ಯಕ್ಕೆ ಅಡ್ಡಿಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ 30-34 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶವಿರಲಿದೆ.

ಟೀಮ್ ಇಂಡಿಯಾ ಸಂಭಾವ್ಯ XI: ರೋಹಿತ್ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್

ವೆಸ್ಟ್ ಇಂಡೀಸ್ ಸಂಭಾವ್ಯ XI: ಕ್ರೈಗ್ ಬ್ರಾಥ್‌ವೈಟ್(ನಾಯಕ), ಜೆರ್ಮೈನ್ ಬ್ಲಾಕ್‌ವುಡ್, ಟಿ ಚಂದ್ರಪಾಲ್, ಕೈಲ್ ಮೇಯರ್ಸ್, ರೋಸ್ಟನ್ ಚೇಸ್, ಜೇಸನ್ ಹೋಲ್ಡರ್, ರೇಮನ್ ರೀಫರ್,
ಜೆ ಡಾ ಸಿಲ್ವಾ(ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಜಿ ಮೋತಿ-ಕನ್ಹೈ, ಕೆಮರ್ ರೋಚ್

Story first published: Thursday, July 20, 2023, 9:10 [IST]
Other articles published on Jul 20, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+