Ind vs WI: ನಿರ್ಣಾಯಕ 3ನೇ ಏಕದಿನ ಸಜ್ಜಾದ ಭಾರತ, ವಿಂಡೀಸ್: ಸಂಭಾವ್ಯ ಆಡುವ ಬಳಗ: ಪಿಚ್ ರಿಪೋರ್ಟ್
ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಮಂಗಳವಾರ ಆರಂಭವಾಗಲಿದೆ. ಮೊದಲ ಎರಡು ಪಂದ್ಯಗಳಲ್ಲಿ ಎರಡು ತಂಡಗಳು ಕೂಡ ಸೋಲು ಗೆಲುವಿನ ರುಚಿ ಕಂಡಿದ್ದು ಕೊನೆಯ ಪಂದ್ಯ ಸರಣಿಯ ನಿರ್ಣಾಯಕವೆನಿಸಿದೆ. ಹೀಗಾಗಿ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ಯಾವ ಆಡುವ ಬಳಗದೊಂದಿಗೆ ಕಣಕ್ಕಿಳಿಯಲಿದೆ ಹಾಗೂ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.
ವಿಶ್ವಕಪ್ ಹಾಗೂ ಏಷ್ಯಾಕಪ್ ಟೂರ್ನಿಯ ಹಿನ್ನೆಲೆಯಲ್ಲಿ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರಾದ ವಿರಾಟ್ ಕೊಹ್ಲಿ ಹಾಗೂ ನಾಯಕ ರೋಹಿತ್ ಶರ್ಮಾ ಆಡುವ ಬಳಗದಿಂದ ಹೊರಗುಳಿದಿದ್ದದರು. ಹೀಗಾಗಿ ಸಂಜು ಸ್ಯಾಮ್ಸನ್ ಹಾಗೂ ಅಕ್ಷರ್ ಪಟೇಲ್ ಎರಡನೇ ಪಂದ್ಯದಲ್ಲಿ ಆಡುವ ಅವಕಾಶ ಪಡೆದುಕೊಂಡಿದ್ದರು. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ಈ ಪಂದ್ಯವನ್ನು ಹೀನಾಯವಾಗಿ ಸೋತಿತ್ತು. ಹೀಗಾಗಿ ಕೊನೆಯ ಪಂದ್ಯದಲ್ಲಿ ತಂಡದ ರಣತಂತ್ರ ಹೇಗಿರಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಪಂದ್ಯದ ಸಮಯ ಹಾಗೂ ಇತರ ಮಾಹಿತಿ
ಭಾರತ ಹಾಗೂ ವೆಸ್ಟ್ ಇಂಡಿಸ್ ತಂಡಗಳ ನಡುವಿನ ಏಕದಿನ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯ ಆಗಸ್ಟ್ 1 ಮಂಗಳವಾರ ನಡೆಯಲಿದೆ. ಟ್ರಿನಿಡಾಡ್ ಆಂಡ್ ಟೊಬ್ಯಾಗೋದ ಬ್ರಿಯನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ. ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದ್ದು 6:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಡಿಡಿ ಸ್ಪೋರ್ಟ್ಸ್‌ನಲ್ಲಿ ಪಂದ್ಯ ನೇರಪ್ರಸಾರವಾಗಲಿದ್ದು ಫ್ಯಾನ್‌ಕೋಡ್ ಹಾಗೂ ಜಿಯೋ ಸಿನಿಮಾದಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಪಿಚ್ ರಿಪೋರ್ಟ್
ಕೆರಿಬಿಯನ್ ನಾಡಿನ ಪಿಚ್‌ಗಳು ಬ್ಯಾಟರ್‌ಗಳಿಗೆ ಹೆಚ್ಚಿನ ಸಹಕಾರಿಯಾಗಿರುವುದಿಲ್ಲ. ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯಲಿರುವ ಕೊನೆಯ ಪಂದ್ಯವೂ ಇದಕ್ಕೆ ಭಿನ್ನವಾಗಿರುವ ಸಾಧ್ಯತೆಯಿಲ್ಲ. ನಿಧಾನದ ಪಿಚ್ ಆಗಿರುವ ಕಾರಣ ಇಲ್ಲಿಯು ಕೂಡ ಸ್ಪಿನ್ನರ್‌ಗಳು ಅದ್ಭುತ ಯಶಸ್ಸು ಸಾಧಿಸುವ ಸಾಧ್ಯತೆಯಿದೆ. ವೇಗಿಗಳು ಇಲ್ಲಿ ನಿಧಾನಗತಿಯ ಬೌಲಿಂಗ್‌ನಲ್ಲಿ ಹೆಚ್ಚು ಯಶಸ್ಸು ಪಡೆಯುವ ಸಾಧ್ಯತೆಯಿದೆ.
ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಟೀಮ್ ಇಂಡಿಯಾ: ಇಶಾನ್ ಕಿಶನ್, ಶುಬ್ಮನ್ ಗಿಲ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮುಖೇಶ್ ಕುಮಾರ್, ಯುಜುವೇಂದ್ರ ಚಾಹಲ್, ಜಯ್‌ದೇವ್ ಉನಾದ್ಕಟ್
ವೆಸ್ಟ್ ಇಂಡೀಸ್: ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಅಥಾನಾಜೆ, ಶಾಯ್ ಹೋಪ್, ಹೆಟ್ಮೆಯರ್, ರೋವ್ಮನ್ ಪೊವೆಲ್, ರೊಮರಿ ಶೆಫರ್ಡ್, ಡೊಮಿನಿಕ್ ಡ್ರೇಕ್ಸ್, ವೈ ಕ್ಯಾರಿಯಾ, ಮೋಟಿ, ಜೇಡನ್ ಸೀಲ್ಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications