Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs WI 3rd T20: ಐತಿಹಾಸಿಕ ಗೆಲುವಿನ ಮೇಲೆ ವಿಂಡೀಸ್ ಕಣ್ಣು: ಟಾಸ್ ವರದಿ, ಆಡುವ 11ರ ಬಳಗ

ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯ ಆರಂಭವಾಗಿದೆ. ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪ್ರವಾಸಿ ಟೀಮ್ ಇಂಡಿಯಾ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.

ಇನ್ನು ಈ ಪಂದ್ಯದಲ್ಲಿ ಆತಿಥೆಯ ವೆಸ್ಟ್ ಇಂಡೀಸ್ ತಂಡ ಒಂದು ಬದಲಾವಣೆ ಮಾಡಿಕೊಂಡಿದೆ. ಜೇಸನ್ ಹೋಲ್ಡರ್ ಗಾಯದಿಂದಾಗಿ ಹೊರಗುಳಿದಿದ್ದು ರೋಸ್ಟನ್ ಚೇಸ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇತ್ತ ಟೀಮ್ ಇಂಡಿಯಾದಲ್ಲಿ ಎರಡು ಬದಲಾವಣೆ ಮಾಡಿಕೊಂಡು ಈ ಪಂದ್ಯದಲ್ಲಿ ಕಣಕ್ಕಿಳಿದಿದೆ. ಯಶಸ್ವಿ ಜೈಸ್ವಾಲ್ ಮೊದಲ ಬಾರಿಗೆ ಟಿ20 ತಂಡಕ್ಕೆ ಪದಾರ್ಪಣೆ ಮಾಡಿದ್ದು ಕುಲ್‌ದೀಪ್ ಯಾದವ್ ಕೂಡ ಮತ್ತೆ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ರವಿ ಬಿಷ್ಣೋಯ್ ಹಾಗೂ ಇಶಾನ್ ಕಿಶನ್ ಆಡುವ ಬಳಗದಿಂದ ಹೊರಬಿದ್ದಿದ್ದಾರೆ

India vs West Indies 3rd t20I Match, Toss Report, Playing 11 and Live Score

Live ಸ್ಕೋರ್ ಹೀಗಿದೆ

1
57624

ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನ ಮೊದಲಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 146 ರನ್. ಇದೇ ಮೈದಾನದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಭಾರತ 152 ರನ್‌ಗಳನ್ನು ಮಾತ್ರವೇ ಗಳಿಸಲು ಶಕ್ತವಾಗಿತ್ತು. ಹಾಗಾಗಿ ಮೂರನೇ ಪಂದ್ಯದಲ್ಲಿಯೂ ಇಲ್ಲಿ ಹೈಸ್ಕೋರಿಂಗ್ ಪಂದ್ಯ ನಡೆಯುವ ಸಾಧ್ಯತೆ ಬಹಳ ಕಡಿಮೆಯಿದೆ. ಇಲ್ಲಿ ಆಡಿರುವ ಸರಣಿಯ ಎರಡನೇ ಪಂದ್ಯವೂ ಸೇರಿದಂತೆ ಇಲ್ಲಿ ಆಡಿರುವ 9 ಪಂದ್ಯಗಳ ಪೈಕಿ ಆರು ಪಂದ್ಯಗಳಲ್ಲಿ ರನ್ ಬೆನ್ನಟ್ಟಿರುವ ತಂಡ ಗೆಲುವು ಸಾಧಿಸಿದೆ.

ಇನ್ನು ಸರಣಿಯ ಮೂರನೇ ಪಂದ್ಯ ಕೂಡ ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ಆಯೋಜನೆಯಾಗಲಿದೆ. ಎರಡನೇ ಪಂದ್ಯ ಕುಡ ಇದೇ ಕ್ರೀಡಾಂಗಣದಲ್ಲಿ ಆಯೋಜನೆಯಾಗಿತ್ತು. ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದ್ದು 7:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಡಿಡಿ ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸುವ ಅವಕಾಶವಿದೆ. ಅಲ್ಲದೆ ಫ್ಯಾನ್ ಕೋಡ್ ಹಾಗೂ ಜಿಯೋ ಜಿನಿಮಾದಲ್ಲಿಯೂ ಈ ಪಂದ್ಯದ ಲೈವ್‌ಸ್ಟ್ರೀಮಿಂಗ್ ವೀಕ್ಷಿಸಬಹುದು.

ವೆಸ್ಟ್ ಇಂಡೀಸ್ ಆಡುವ ಬಳಗ: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರೊಮಾರಿಯೋ ಶೆಫರ್ಡ್, ರೋಸ್ಟನ್ ಚೇಸ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್

ಬೆಂಚ್: ಶಾಯ್ ಹೋಪ್, ಒಶಾನೆ ಥಾಮಸ್,ಜೇಸನ್ ಹೋಲ್ಡರ್, ಓಡಿಯನ್ ಸ್ಮಿತ್

ಟೀಮ್ ಇಂಡಿಯಾ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ಕುಲದೀಪ್ ಯಾದವ್
ಬೆಂಚ್: ಉಮ್ರಾನ್ ಮಲಿಕ್, ಅವೇಶ್ ಖಾನ್, ರವಿ ಬಿಷ್ಣೋಯ್

Story first published: Tuesday, August 8, 2023, 19:31 [IST]
Other articles published on Aug 8, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+