IND vs WI 4th T20I: ಸರಣಿ ಸಮಬಲದ ಮೇಲೆ ಭಾರತದ ಚಿತ್ತ: ಟಾಸ್ ವರದಿ, ಆಡುವ 11ರ ಬಳಗ
ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ನಾಲ್ಕನೇ ಪಂದ್ಯ ಆರಂಭವಾಗಿದೆ. ಅಮೆರಿಕಾದ ಫ್ಲೋರಿಡಾದಲ್ಲಿ ಈ ಪಂದ್ಯ ನಡೆಯುತ್ತಿದ್ದು ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪ್ರವಾಸಿ ಟೀಮ್ ಇಂಡಿಯಾ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿದೆ. ಮೂರನೇ ಪಂದ್ಯದಲ್ಲಿ ಗೆದ್ದ ತಂಡದೊಂದಿಗೆ ಕಣಕ್ಕಿಳಿಯುತ್ತಿದೆ. ಮತ್ತೊಂದೆಡೆ ವೆಸ್ಟ್ ಇಂಡೀಸ್ ತಂಡದಲ್ಲಿ ಮೂರು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಕಳೆದ ಪಂದ್ಯದಲ್ಲಿ ಗಾಯದಿಂದಾಗಿ ಹೊರಗುಳಿದಿದ್ದ ಜೇಸನ್ ಹೋಲ್ಡರ್ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಇನ್ನು ಜಾನ್ಸನ್ ಚಾರ್ಸ್ ಬದಲಿಗೆ ಶಾಯ್ ಹೋಪ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಓಡಿಯನ್ ಸ್ಮಿತ್ ಕೂಡ ಆಡುವ ಬಳಗದಲ್ಲಿ ಅವಕಾಶ ಗಿಟ್ಟಿಕೊಂಡಿದ್ದಾರೆ.

Live ಸ್ಕೋರ್ ಹೀಗಿದೆ
ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ರೀಜಿನಲ್ ಪಾರ್ಕ್ ಸ್ಟೇಡಿಯಂ ಆರಂಭದಲ್ಲಿ ಬ್ಯಾಟರ್‌ಗಳಿಗೆ ಅದ್ಭುತವಾಗಿ ನೆರವು ನೋಡುವ ಗುಣವನ್ನು ಹೊಂದಿದ್ದು ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿಯೂ ಇದು ಮುಂದುವರಿಯುವ ಸಾಧ್ಯತೆಯಿದೆ. ಮೊದಲು ಬ್ಯಾಟಿಂಗ್‌ಗೆ ಉತ್ತಮವಾಗಿ ನೆರವು ನೀಡಿದ ಬಳಿಕ ಬೌಲರ್‌ಗಳು ಇಲ್ಲಿ ಮೇಲುಗೈ ಸಾಧಿಸುವ ಅವಕಾಶವಿದೆ. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ತಂಡ 200 ರನ್‌ಗಳನ್ನು ಗಳಿಸುವ ಸಾಧ್ಯತೆಯೂ ಹೆಚ್ಚಾಗಿದೆ.
ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಮೊದಲ ಮೂರು ಪಂದ್ಯಗಳ ಬಳಿಕ 1-2 ಅಂತರದಿಂದ ಹಿನ್ನಡೆಯಲ್ಲಿದೆ. ಹೀಗಾಗಿ ಐದು ಪಂದ್ಯಗಳ ಈ ಸರಣಿಯಲ್ಲಿ ಭಾರತ ಟ್ರೋಫಿ ತನ್ನದಾಗಿಸಿಕೊಳ್ಳಬೇಕಿದ್ದರೆ ಉಳಿದ ಎರಡು ಪಂದ್ಯಗಳಲ್ಲಿಯೂ ಗೆಲ್ಲುವುದು ಅನಿವಾರ್ಯವಾಗಿದೆ.
ವೆಸ್ಟ್ ಇಂಡೀಸ್ ಆಡುವ ಬಳಗ: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರೊಮಾರಿಯೋ ಶೆಫರ್ಡ್, ಜೇಸನ್ ಹೋಲ್ಡರ್, ರೋಸ್ಟನ್ ಚೇಸ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್
ಬೆಂಚ್: ಒಶಾನೆ ಥಾಮಸ್, ಜಾನ್ಸನ್ ಚಾರ್ಲ್ಸ್, ಓಡಿಯನ್ ಸ್ಮಿತ್
ಟೀಮ್ ಇಂಡಿಯಾ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ಕುಲದೀಪ್ ಯಾದವ್
ಬೆಂಚ್: ಉಮ್ರಾನ್ ಮಲಿಕ್, ಅವೇಶ್ ಖಾನ್, ರವಿ ಬಿಷ್ಣೋಯ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications