Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs WI: 4ನೇ ಟಿ20 ಪಂದ್ಯದಲ್ಲಿ ಭಾರತ, ವಿಂಡೀಸ್ ಮುಖಾಮುಖಿ: ಪಿಚ್ ರಿಪೋರ್ಟ್, ಸಂಭಾವ್ಯ ಆಡುವ ಬಳಗ

ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ಶನಿವಾರ ನಡೆಯಲಿದೆ. ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಮೊದಲ ಮೂರು ಪಂದ್ಯಗಳ ಬಳಿಕ 1-2 ಅಂತರದಿಂದ ಹಿನ್ನಡೆಯಲ್ಲಿದೆ. ಹೀಗಾಗಿ ಐದು ಪಂದ್ಯಗಳ ಈ ಸರಣಿಯಲ್ಲಿ ಭಾರತ ಟ್ರೋಫಿ ತನ್ನದಾಗಿಸಿಕೊಳ್ಳಬೇಕಿದ್ದರೆ ಉಳಿದ ಎರಡು ಪಂದ್ಯಗಳಲ್ಲಿಯೂ ಗೆಲ್ಲುವುದು ಅನಿವಾರ್ಯವಾಗಿದೆ.

ಇನ್ನು ನಾಲ್ಕನೇ ಹಾಗೂ ಐದನೇ ಟಿ20 ಪಂದ್ಯಗಳು ಅಮೆರಿಕಾದ ಫ್ಲೋರಿಡಾದ ಮಿಯಾಮಿ ನಗರದಲ್ಲಿ ನಡೆಯಲಿದ್ದು ಪಂದ್ಯ ಕುತೂಹಲ ಮೂಡಿಸಿದೆ. ಹಾರ್ದಿಕ್ ಪಾಂಡ್ಯ ಪಡೆ ಸರಣಿಯ ಹಿನ್ನಡೆಯಿಂದ ಹೇಗೆ ಕಮ್‌ಬ್ಯಾಕ್ ಮಾಡಲಿದೆ ಎಂಬುದು ಕುತೂಹಲ ಮೂಡಿಸಿದ್ದು ಸಂಘಟಿತ ಪ್ರದರ್ಶನವನ್ನು ಟೀಮ್ ಇಂಡಿಯಾ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

India vs West Indies 4th t20I: Pitch reports, probable XI and Live details

ಪಂದ್ಯದ ಸಮಯ ಹಾಗೂ ನೇರಪ್ರಸಾರದ ಮಾಹಿತಿ

ಈ ಸರಣಿಯ ನಾಲ್ಕನೇ ಪಂದ್ಯ ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ರೀಜಿನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದ್ದು 7:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಡಿಡಿ ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸುವ ಅವಕಾಶವಿದೆ. ಅಲ್ಲದೆ ಫ್ಯಾನ್ ಕೋಡ್ ಹಾಗೂ ಜಿಯೋ ಜಿನಿಮಾದಲ್ಲಿಯೂ ಈ ಪಂದ್ಯದ ಲೈವ್‌ಸ್ಟ್ರೀಮಿಂಗ್ ವೀಕ್ಷಿಸಬಹುದು.
ಪಿಚ್ ರಿಪೋರ್ಟ್
ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ರೀಜಿನಲ್ ಪಾರ್ಕ್ ಸ್ಟೇಡಿಯಂ ಆರಂಭದಲ್ಲಿ ಬ್ಯಾಟರ್‌ಗಳಿಗೆ ಅದ್ಭುತವಾಗಿ ನೆರವು ನೋಡುವ ಗುಣವನ್ನು ಹೊಂದಿದ್ದು ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿಯೂ ಇದು ಮುಂದುವರಿಯುವ ಸಾಧ್ಯತೆಯಿದೆ. ಮೊದಲು ಬ್ಯಾಟಿಂಗ್‌ಗೆ ಉತ್ತಮವಾಗಿ ನೆರವು ನೀಡಿದ ಬಳಿಕ ಬೌಲರ್‌ಗಳು ಇಲ್ಲಿ ಮೇಲುಗೈ ಸಾಧಿಸುವ ಅವಕಾಶವಿದೆ. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ತಂಡ 200 ರನ್‌ಗಳನ್ನು ಗಳಿಸುವ ಸಾಧ್ಯತೆಯೂ ಹೆಚ್ಚಾಗಿದೆ. ಹಾಗಾಗಿ ಟಾಸ್ ಇಲ್ಲಿ ಮಹತ್ವ ಪಡೆಯಲಿದೆ

ವೆಸ್ಟ್ ಇಂಡೀಸ್ ಸಂಭಾವ್ಯ ಆಡುವ ಬಳಗ: ಬ್ರೆಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್, ಕೈಲ್ ಮೇಯರ್ಸ್, ಶಿಮ್ರಾನ್ ಹೆಟ್ಮೆಯರ್, ನಿಕೋಲಸ್ ಪೂರನ್ (ವಿಕೆಟ್), ರೋವ್ಮನ್ ಪೊವೆಲ್ (ನಾಯಕ), ಓಡಿಯನ್ ಸ್ಮಿತ್, ರೊಮಾರಿಯೋ ಶೆಫರ್ಡ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್
ಟೀಮ್ ಇಂಡಿಯಾ: ಶುಬ್ಮನ್ ಗಿಲ್, ಯಶಸ್ವಿ ಜೈಸ್ವಾಲ್ , ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ತಿಲಕ್ ವರ್ಮಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್

Story first published: Friday, August 11, 2023, 15:17 [IST]
Other articles published on Aug 11, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+