IND vs WI: ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾ 3 ಪಂದ್ಯಗಳ ಏಕದಿನ ಸರಣಿ ಜಯದ ನಂತರ, 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು, ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.
ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ಐದು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಭಾರತವು ವೆಸ್ಟ್ ಇಂಡೀಸ್ ವಿರುದ್ಧ 68 ರನ್‌ಗಳ ಅಂತರದ ಸುಲಭ ಜಯ ಸಾಧಿಸುವುದರ ಮೂಲಕ ಭಾರತ ತಂಡ ಶುಭಾರಂಭ ಮಾಡಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಆತಿಥೇಯ ತಂಡದ ವಿರುದ್ಧ ಉತ್ತಮ ಮೊತ್ತ ಕಲೆಹಾಕಿತ್ತು. ನಾಯಕ ರೋಹಿತ್ ಶರ್ಮಾ, ದಿನೇಶ್ ಕಾರ್ತಿಕ್ ಮತ್ತು ಸೂರ್ಯಕುಮಾರ್ ಯಾದವ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಭಾರತ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿ, ಎದುರಾಳಿ ತಂಡಕ್ಕೆ 191 ರನ್‌ಗಳ ಬೃಹತ್ ಗುರಿ ನೀಡಿತ್ತು.

ವೆಸ್ಟ್ ಇಂಡೀಸ್ ನಿಗದಿತ 20 ಓವರ್‌ಗಳಲ್ಲಿ 122 ರನ್
ಭಾರತ ನೀಡಿದ್ದ 191 ರನ್‌ಗಳ ಗುರಿ ಬೆನ್ನತ್ತಿದ ಆತಿಥೇಯ ವೆಸ್ಟ್ ಇಂಡೀಸ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 122 ರನ್ ಗಳಿಸಿ ಸೋಲೊಪ್ಪಿಕೊಂಡಿತು.
ವೆಸ್ಟ್ ಇಂಡೀಸ್ ಪರ ಯಾವೊಬ್ಬ ಬ್ಯಾಟ್ಸ್‌ಮನ್‌ಗಳು ಸಹ ಭಾರತದ ಬೌಲಿಂಗ್‌ಗೆ ಪ್ರತಿರೋಧ ತೋರದೆ ತರಗಲೆಗಳಂತೆ ವಿಕೆಟ್ ಕಳೆದುಕೊಂಡಿತು. ಕೈಲ್ ಮೇಯರ್ಸ್(15), ಶಮರ್ಹ್ ಬ್ರೂಕ್ಸ್ (20), ಜೇಸನ್ ಹೋಲ್ಡರ್ (0), ನಾಯಕ ನಿಕೋಲಸ್ ಪೂರನ್ (18), ರೋವ್ಮನ್ ಪೊವೆಲ್ (14), ಶಿಮ್ರಾನ್ ಹೆಟ್ಮೆಯರ್ (14), ಅಕೇಲ್ ಹೊಸೈನ್ (11), ಕೆಮೊ ಪೌಲ್ (19) ರನ್ ಗಳಿಸಿದರು. ಯಾವುದೇ ಹಂತದಲ್ಲೂ ಉತ್ತಮ ಜೊತೆಯಾಟ ನೀಡಲಿಲ್ಲ.
ಈತ ಅಪಾಯಕಾರಿ ಆಟಗಾರ, ಅನಿರೀಕ್ಷಿತ ಫಲಿತಾಂಶ ನೀಡಬಲ್ಲ: ಆಡಮ್ ಗಿಲ್‌ಕ್ರಿಸ್ಟ್

ರವಿ ಬಿಷ್ಣೋಯ್ 26 ರನ್ ನೀಡಿ 2 ವಿಕೆಟ್
ಭಾರತ ಪರ ಬೌಲಿಂಗ್‌ನಲ್ಲಿ ಅರ್ಷದೀಪ್ ಸಿಂಗ್ 4 ಓವರ್ ಬೌಲಿಂಗ್ ಮಾಡಿ 24 ರನ್ ನೀಡಿ ಪ್ರಮುಖ 2 ವಿಕೆಟ್ ಪಡೆದರು. ರವಿಚಂದ್ರನ್ ಅಶ್ವಿನ್ 4 ಓವರ್ ಬೌಲಿಂಗ್ ಮಾಡಿ 22 ರನ್ ನೀಡಿ 2 ವಿಕೆಟ್ ಪಡೆದರೆ, ರವಿ ಬಿಷ್ಣೋಯ್ 4 ಓವರ್ ಬೌಲಿಂಗ್ ಮಾಡಿ 26 ರನ್ ನೀಡಿ 2 ವಿಕೆಟ್ ಪಡೆದರು. ಇನ್ನು ಭುವನೇಶ್ವರ್ ಕುಮಾರ್ ಮತ್ತು ರವೀಂದ್ರ ಜಡೇಜಾ ತಲಾ ಒಂದೊಂದು ವಿಕೆಟ್ ಪಡೆದು ಗೆಲುವಿನ ಕಾಣಿಕೆ ನೀಡಿದರು.

ನಾಯಕ ರೋಹಿತ್ ಶರ್ಮಾ ಅರ್ಧ ಶತಕ
ನಾಯಕ ರೋಹಿತ್ ಶರ್ಮಾ ಅವರ ಮಿಂಚಿನ ಅರ್ಧಶತಕ ಹಾಗೂ ಕೊನೆಯಲ್ಲಿ ಆರ್.ಅಶ್ವಿನ್ ಮತ್ತು ದಿನೇಶ್ ಕಾರ್ತಿಕ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿದ್ದು, ಎದುರಾಳಿ ತಂಡಕ್ಕೆ 191 ರನ್‌ಗಳ ಬೃಹತ್ ಗುರಿ ನೀಡಿದೆ.
ಅಗ್ರ ಕ್ರಮಾಂಕದಲ್ಲಿ ನಾಯಕ ರೋಹಿತ್ ಶರ್ಮಾ (44 ಎಸೆತಗಳಲ್ಲಿ 64 ರನ್), ಸೂರ್ಯಕುಮಾರ್ ಯಾದವ್ (16 ಎಸೆತಗಳಲ್ಲಿ 24 ರನ್) ಮತ್ತು ಶ್ರೇಯಸ್ ಅಯ್ಯರ್ (0) ಹಾಗೂ ಮಧ್ಯಮ ಕ್ರಮಾಂಕದಲ್ಲಿ ರಿಷಭ್ ಪಂತ್ (14), ಹಾರ್ದಿಕ್ ಪಾಂಡ್ಯ (1), ರವೀಂದ್ರ ಜಡೇಜಾ (16), ದಿನೇಶ್ ಕಾರ್ತಿಕ್ (19 ಎಸೆತಗಳಲ್ಲಿ 41 ರನ್), ಆರ್. ಅಶ್ವಿನ್ (13) ಮಿಶ್ರ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಭಾರತ ಸವಾಲಿನ ಮೊತ್ತ ಪೇರಿಸಿತು.
ಇನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿದ ಶ್ರೇಯಸ್ ಅಯ್ಯರ್ ಮತ್ತು ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯದಲ್ಲಿ ಕೆರಿಬಿಯನ್ನರ ಬೌಲಿಂಗ್ ದಾಳಿಗೆ ಪ್ರತಿರೋಧ ಒಡ್ಡಲು ವಿಫಲರಾದರು. ಈ ಇಬ್ಬರು ಬ್ಯಾಟ್ಸ್‌ಮನ್‌ಗಳು ಕ್ರಮವಾಗಿ 0 ಮತ್ತು 1 ರನ್ ಗಳಿಸಿ ಔಟಾದರು.

ಅಲ್ಜಾರಿ ಜೋಸೆಫ್ 46 ರನ್ ನೀಡಿ 2 ವಿಕೆಟ್
ನಾಯಕ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಮೊದಲ ವಿಕೆಟ್‌ಗೆ 4.4 ಓವರ್‌ಗಳಲ್ಲಿ 44 ರನ್ ಜೊತೆಯಾಟ ನೀಡಿ ಭಾರತಕ್ಕೆ ಉತ್ತಮ ಆರಂಭ ಒದಗಿಸಿದರು. ಆದರೆ ಮಧ್ಯದಲ್ಲಿ ಒಂದರ ಹಿಂದೆ ಒಂದು ವಿಕೆಟ್ ಉರುಳುತ್ತಿದ್ದಂತೆ ಮಧ್ಯದಲ್ಲಿ ಭಾರತದ ರನ್ ವೇಗಕ್ಕೆ ಕಡಿವಾಣ ಬಿತ್ತು.
ರೋಹಿತ್ ಶರ್ಮಾ ತನ್ನ 27ನೇ ಟಿ20 ಅರ್ಧಶತಕವನ್ನು ಗಳಿಸಿದರು ಮತ್ತು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬ್ಯಾಟ್ಸ್‌ಮನ್‌ಗಳ ಗರಿಷ್ಠ 50 ಪ್ಲಸ್ ಸ್ಕೋರ್‌ಗಳ ಪಟ್ಟಿಯಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.
ಇನ್ನು ಬೌಲಿಂಗ್‌ನಲ್ಲಿ ವೆಸ್ಟ್ ಇಂಡೀಸ್ ಪರ ಅಲ್ಜಾರಿ ಜೋಸೆಫ್ 4 ಓವರ್‌ಗಳಲ್ಲಿ 46 ರನ್ ನೀಡಿ 2 ವಿಕೆಟ್ ಪಡೆದರು. ಅದೇ ರೀತಿ ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಓಡಿಯನ್ ಸ್ಮಿತ್, ಓಬೆಡ್ ಮೆಕಾಯ್, ಕೀಮೋ ಪಾಲ್ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications