For Quick Alerts
ALLOW NOTIFICATIONS  
For Daily Alerts
 

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾ ಸೇರಿದ ಹೊಸ ಆಟಗಾರ

India vs West Indies: Ishan Kishan likely to join India ODI squad

ಇತ್ತೀಚೆಗಷ್ಟೇ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಹೀನಾಯವಾಗಿ ಸೋಲನ್ನು ಕಂಡ ಟೀಮ್ ಇಂಡಿಯಾ ಇದೀಗ ಭಾರತದಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಹಾಗೂ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಕಣಕ್ಕಿಳಿಯುತ್ತಿದೆ. ಇನ್ನು ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವೆ ಮೊದಲಿಗೆ ಏಕದಿನ ಸರಣಿ ನಡೆಯಲಿದ್ದು, ಇತ್ತಂಡಗಳು ಕೂಡ ತಂಡಗಳನ್ನು ಪ್ರಕಟಿಸಿವೆ. ಈ ಮೂಲಕ ರೋಹಿತ್ ಶರ್ಮಾ ಭಾರತ ಏಕದಿನ ತಂಡದ ಪೂರ್ಣಾವಧಿ ನಾಯಕನಾಗಿ ಅಧಿಕಾರ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿದ್ದು, ಇದೇ ಫೆಬ್ರವರಿ 6ರ ಭಾನುವಾರದಂದು ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪ್ರಥಮ ಏಕದಿನ ಪಂದ್ಯದಲ್ಲಿ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ.

ಹೀಗೆ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಏಕದಿನ ಸರಣಿಯ ಚೊಚ್ಚಲ ಪಂದ್ಯ ಇದೇ ಭಾನುವಾರದಂದು ಅಹ್ಮದಾಬಾದ್ ನಗರದ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಪಂದ್ಯ ಆರಂಭವಾಗುವುದಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಹಿನ್ನಡೆಯುಂಟಾಗುವಂತೆ ಘಟನೆಗಳು ನಡೆದಿವೆ. ಹೌದು, ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾದ 4 ಕ್ರಿಕೆಟಿಗರು ಸೇರಿದಂತೆ ಒಟ್ಟು 8 ಮಂದಿಗೆ ಕೊರೊನಾವೈರಸ್ ದೃಢಪಟ್ಟಿದೆ ಎಂದು ವರದಿಯಾಯಿತು. ಕೊರೊನಾವೈರಸ್ ದೃಢಪಟ್ಟ ಆಟಗಾರರ ಪೈಕಿ ಅನುಭವಿ ಆಟಗಾರ ಶಿಖರ್ ಧವನ್, ಯುವ ಕ್ರಿಕೆಟಿಗ ಋತುರಾಜ್ ಗಾಯಕ್ವಾಡ್, ನವದೀಪ್ ಸೈನಿ ಹಾಗೂ ಶ್ರೇಯಸ್ ಐಯ್ಯರ್ ಕೂಡ ಸೇರಿದ್ದಾರೆ ಎನ್ನಲಾಗಿತ್ತು. ಹೀಗೆ ಇಷ್ಟು ಆಟಗಾರರಿಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂಬುದನ್ನು ಕಳೆದ ಬುಧವಾರದಂದು ಸ್ಪಷ್ಟಪಡಿಸಲಾಗಿತ್ತು.

ಇದಾದ ಬೆನ್ನಲ್ಲೇ ಟೀಮ್ ಇಂಡಿಯಾದ ಮತ್ತೋರ್ವ ಆಟಗಾರನಾದ ಅಕ್ಷರ್ ಪಟೇಲ್ ಅವರಿಗೂ ಕೊರೊನಾ ವೈರಸ್ ತಗುಲಿದೆ. ಹೀಗೆ ಸಾಲು ಸಾಲು ಆಟಗಾರರಿಗೆ ಕೊರೊನಾ ಸೋಂಕು ತಗುಲಿರುವುದು ಸದ್ಯ ಟೀಮ್ ಇಂಡಿಯಾಗೆ ಹಿನ್ನಡೆ ಉಂಟುಮಾಡಿದ್ದು, ವೆಸ್ಟ್ ಇಂಡೀಸ್ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಕಣಕ್ಕೆ ಇಳಿಸಲು ಬೇಕಾದ ಅನುಭವಿ ಆಟಗಾರರ ಕೊರತೆಯುಂಟಾಗುವ ಸಾಧ್ಯತೆಗಳಿವೆ. ಹೀಗಾಗಿ ಟೀಮ್ ಇಂಡಿಯಾದ ಆಯ್ಕೆಗಾರರು ಈಗಾಗಲೇ ಅನುಭವಿ ಆಟಗಾರ ಮಯಂಕ್ ಅಗರ್ವಾಲ್ ಅವರನ್ನು ಭಾರತ ಏಕದಿನ ತಂಡಕ್ಕೆ ಆಯ್ಕೆ ಮಾಡಿದ್ದು, ಇದೀಗ ಮತ್ತೋರ್ವ ಆಟಗಾರನನ್ನು ಆಯ್ಕೆ ಮಾಡಿದೆ ಎಂದು ವರದಿಯೊಂದು ತಿಳಿಸಿದೆ.

ಹೌದು, ಕಳೆದ ವರ್ಷದಲ್ಲಿ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‍ಗೆ ಪದಾರ್ಪಣೆ ಮಾಡಿದ್ದ ಇಶಾನ್ ಕಿಶನ್ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಕಳೆದ ವರ್ಷ ತಾನು ಆಡಿದ ಚೊಚ್ಚಲ ಅಂತರರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ವೇಗದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಇಶಾನ್ ಕಿಶನ್ ತಾವು ಎದುರಿಸಿದ ಮೊದಲನೇ ಚೆಂಡಿಗೇ ಭರ್ಜರಿ ಸಿಕ್ಸರ್ ಬಾರಿಸುವ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದರು. ಇನ್ನು ಭಾನುವಾರ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಪ್ರಥಮ ಏಕದಿನ ಪಂದ್ಯಕ್ಕೆ ಕೆಎಲ್ ರಾಹುಲ್ ಅವರು ಕೂಡ ಅಲಭ್ಯರಾಗಿರುವ ಕಾರಣ ಇಶಾನ್ ಕಿಶನ್ ಸೇರ್ಪಡೆಯಾಗುವುದರಿಂದ ಆರಂಭಿಕ ಆಟಗಾರನಾಗಿ ಕಣಕ್ಕಿಳಿಸಲು ಅನುಕೂಲವಾಗಲಿದೆ.

ಏಕದಿನ ತಂಡಕ್ಕೆ ಪ್ರಕಟವಾಗಿರುವ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ಸಿ), ಕೆಎಲ್ ರಾಹುಲ್ (ವಿಸಿ), ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಬ್ ಪಂತ್ (ವಿಕೆಟ್-ಕೀಪರ್), ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್

ವೆಸ್ಟ್ ಇಂಡೀಸ್ ತಂಡ: ಕೀರಾನ್ ಪೊಲಾರ್ಡ್ (ಸಿ), ಫ್ಯಾಬಿಯನ್ ಅಲೆನ್, ಎನ್ಕ್ರುಮಾ ಬೋನರ್, ಡ್ಯಾರೆನ್, ಬ್ರಾವೋ, ಶಮರ್ಹ್ ಬ್ರೂಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ನಿಕೋಲಸ್ ಪೂರನ್, ಕೆಮರ್ ರೋಚ್, ರೊಮಾರಿಯೋ ಶೆಫರ್ಡ್, ಓಡಿಯನ್ ಸ್ಮಿತ್ ಜೆಆರ್, ಹೇಡನ್ ವಾಲ್ಶ್.

Story first published: Friday, February 4, 2022, 6:26 [IST]
Other articles published on Feb 4, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+