ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಬುಮ್ರಾಗೆ ವಿಶ್ರಾಂತಿ ಸಾಧ್ಯತೆ, ಶಮಿಗೆ ಅವಕಾಶ?

Jasprit bumrah

ಟೀಂ ಇಂಡಿಯಾದ ಸೂಪರ್ ವೇಗಿ ಜಸ್ಪ್ರೀತ್ ಬುಮ್ರಾಗೆ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ನಿಗದಿತ ಓವರ್‌ಗಳ ಕ್ರಿಕೆಟ್‌ನಿಂದ ವಿಶ್ರಾಂತಿ ನೀಡುವ ಸಾಧ್ಯತೆ ಹೆಚ್ಚಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ವೇಳೆ ಮೊಹಮ್ಮದ್ ಶಮಿ ವಿಶ್ರಾಂತಿ ಪಡೆದಿದ್ದರು. ಜಸ್​ಪ್ರೀತ್ ಬುಮ್ರಾ ದಕ್ಷಿಣ ಆಫ್ರಿಕಾದಲ್ಲಿ ಹೆಚ್ಚು ಓವರ್​ಗಳನ್ನು ಬೌಲ್ ಮಾಡಿದ್ದಾರೆ. ಹೀಗಾಗಿ ಬುಮ್ರಾಗೆ ವಿಶ್ರಾಂತಿ ನೀಡಲು ಆಯ್ಕೆ ಸಮಿತಿ ಯೋಜಿಸಿದೆ.

ಆಸ್ಟ್ರೇಲಿಯಾದಲ್ಲಿ ಇದೇ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ಅಗತ್ಯವಿದೆ. ಇದರ ಜೊತೆಗೆ ಏಪ್ರಿಲ್ ತಿಂಗಳಿನಲ್ಲಿ ಐಪಿಎಲ್ 15ನೇ ಸೀಸನ್ ಕೂಡ ನಡೆಯಲಿದೆ ಹೀಗಾಗಿ ಬುಮ್ರಾ ಅವರಿಗೆ ವಿಶ್ರಾಂತಿ ನೀಡಿ ಅನುಭವಿ ವೇಗಿ ಶಮಿಯನ್ನು ತಂಡಕ್ಕೆ ಸೇರಿಸಿಕೊಳ್ಳಲು ಆಯ್ಕೆ ಸಮಿತಿ ಮುಂದಾಗಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ.

ಭಾರತ ಪರ ಮತ್ತೆ ಆಲ್‌ರೌಂಡರ್ ಆಗಿ ಆಡಲು ತಯಾರಿ ನಡೆಸುತ್ತಿರುವ ಹಾರ್ದಿಕ್ ಪಾಂಡ್ಯ ಭಾರತ ಪರ ಮತ್ತೆ ಆಲ್‌ರೌಂಡರ್ ಆಗಿ ಆಡಲು ತಯಾರಿ ನಡೆಸುತ್ತಿರುವ ಹಾರ್ದಿಕ್ ಪಾಂಡ್ಯ

ಇನ್ನು ಕೊರೋನಾ ಕಾರಣದಿಂದಾಗಿ ದಕ್ಷಿಣ ಆಫ್ರಿಕಾದ ಏಕದಿನ ಸರಣಿಯಿಂದ ಹೊರಗುಳಿದಿದ್ದ ವಾಷಿಂಗ್ಟನ್ ಸುಂದರ್ ಕೂಡ ಟೀಮ್ ಇಂಡಿಯಾಕ್ಕೆ ಮರಳಲಿದ್ದಾರೆ. ಅಲ್ಲದೆ ಅಕ್ಷರ್ ಪಟೇಲ್ ಈಗ ಫಿಟ್ ಆಗಿದ್ದು, ಅವರಿಗೂ ತಂಡದಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ. ರವೀಂದ್ರ ಜಡೇಜಾ ಕೂಡ ಮೊದಲಿಗಿಂತ ಫಿಟ್ ಆದಂತೆ ಕಾಣಿಸುತ್ತಿದ್ದಾರೆ. ಆದ್ರೆ ಜಯಂತ್ ಯಾದವ್ ಸ್ಥಾನ ಕಳೆದುಕೊಳ್ಳಬಹುದು.

ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿಯ ವೇಳಾಪಟ್ಟಿ:
1ನೇ ODI, ಫೆಬ್ರವರಿ 6, ಭಾನುವಾರ, ಅಹಮದಾಬಾದ್ (1PM)
2ನೇ ODI, ಫೆಬ್ರವರಿ 9, ಬುಧವಾರ, ಅಹಮದಾಬಾದ್ (1PM)
3ನೇ ODI, ಫೆಬ್ರವರಿ 11, ಶುಕ್ರವಾರ, ಅಹಮದಾಬಾದ್ (1PM)

Virat Kohli ಈಗಲೂ ಎಷ್ಟು ವರ್ಷ ಕ್ರಿಕೆಟ್ ಆಡಬಹುದು | Oneindia Kannada

ಟಿ20 ಸರಣಿಯ ವೇಳಾಪಟ್ಟಿ:
1 ನೇ T20, ಫೆಬ್ರವರಿ 16 , ಬುಧವಾರ, ಕೋಲ್ಕತ್ತಾ (7PM)
2 ನೇ T20, ಫೆಬ್ರವರಿ 18 , ಶುಕ್ರವಾರ, ಕೋಲ್ಕತ್ತಾ (7PM)
3ನೇ T20, ಫೆಬ್ರವರಿ 20 , ಭಾನುವಾರ, ಕೋಲ್ಕತ್ತಾ (7PM)

Story first published: Tuesday, January 25, 2022, 23:18 [IST]
Other articles published on Jan 25, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X