
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಸೀಮಿತ ಓವರ್‌ಗಳ ಸರಣಿಯ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮೊದಲಿಗೆ ಮೂರು ಒಂದದ್ಯಗಳ ಏಕದಿನ ಸರಣಿ ಆಯೋಜನೆಯಾಗಲಿದ್ದು ಅದಾದ ಬಳಿಕ ಟಿ20 ಸರಣಿ ನಡೆಯಲಿದೆ. ಭಾರತ ಏಕದಿನ ಹಾಗೂ ಟಿ20 ಸರಣಿಗೆ ಈಗಾಗಲೇ ತನ್ನ ತಂಡವನ್ನು ಪ್ರಕಟಿಸಿದ್ದು ವೆಸ್ಟ್ ಇಂಡೀಸ್ ಕೂಡ ಮೊದಲೇ ಏಕದಿನ ತಂಡವನ್ನು ಪ್ರಕಟಿಸಿತ್ತು. ಇದೀಗ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾಗಿಯಾಗಲಿರುವ ತಂಡವನ್ನು ಕೂಡ ಕ್ರಿಕೆಟ್ ವೆಸ್ಟ್ ಇಂಡೀಸ್ ಘೋಷಿಸಿದೆ.
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಫೆಬ್ರವರಿ 16ರಿಂದ ಕೊಲ್ಕತ್ತಾದಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ಭಾಗಿಯಾಗಲಿರುವ ವೆಸ್ಟ್ ಇಂಡೀಸ್ ತಂಡವನ್ನು ಕಿರಾನ್ ಪೊಲಾರ್ಡ್ ಮುನ್ನಡೆಸಲಿದ್ದು ಸದ್ಯ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾಗಿಯಾಗಿರುವ ತಂಡದಲ್ಲಿ ಯಾವುದೇ ಬದಲಾವಣೆ ಮಾಡದೆ ಈ ಸರಣಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಈ ಟಿ20 ಸರಣಿಗೂ ಮುನ್ನ ನಡೆಯುವ ಏಕದಿನ ಸರಣಿಯ ಎಲ್ಲಾ ಪಂದ್ಯಗಳು ಅಹಮದಾಬಾದ್‌ನಲ್ಲಿ ನಡೆಯಲಿದ್ದು ಫೆಬ್ರವರಿ 6ರಿಂದ ಈ ಪಂದ್ಯಗಳು ನಡೆಯಲಿದೆ.
ಈ ಸರಣಿಯಿಂದಲೂ ಅನುಭವಿ ಕ್ರಿಸ್ ಗೇಲ್ ಹೊರಬಿದ್ದಿದ್ದಾರೆ. ಕಿರಾನ್ ಪೊಲಾರ್ಡ್‌ಗೆ ನಾಯಕತ್ವ ವಹಿಸಲಾಗಿದ್ದು ನಿಕೋಲಸ್ ಪೂರನ್ ತಂಡದ ಉಪನಾಯಕನಾಗಿದ್ದಾರೆ. ಯುವ ಹಾಗೂ ಅನುಭವಿಗಳ ಉತ್ತಮ ಮಿಶ್ರಣದೊಂದಿಗೆ ವೆಸ್ಟ್ ಇಂಡೀಸ್ ಪಡೆ ಭಾರತ ಪ್ರವಾಸ ಕೈಗೊಳ್ಳಲಿದೆ.
ಇನ್ನು ಅನುಭವಿ ಕಿರಾನ್ ಪೊಲಾರ್ಡ್ ವೆಸ್ಟ್ ಇಂಡೀಸ್ ತಂಡದ ನಾಯಕನಾಗಿ ಈ ಪ್ರವಾಸದಲ್ಲಿ ಮುನ್ನಡೆಸಲಿದ್ದು ನಿಕೋಲಸ್ ಪೂರನ್ ಉಪನಾಯಕನಾಗಿದ್ದಾರೆ. ವೆಸ್ಟ್ ಇಂಡೀಸ್ ತಂಡದ ಬಹುತೇಕ ಅನುಭವಿ ಆಟಗಾರರು ಭಾರತದಲ್ಲಿ ಐಪಿಎಲ್ ಟೂರ್ನಿ ಆಡಿದ ಅಪಾರ ಅನುಭವ ಹೊಂದಿದ್ದಾರೆ. ಹೀಗಾಗಿ ಭಾರತದ ಪರಿಚಿತ ವಾತಾವರಣದಲ್ಲಿ ವಿಂಡೀಸ್ ತಂಡದ ಪ್ರದರ್ಶನ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ.
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾನನ್ನ ಬೆಂಬಲಿಸಿದ ಕೊಹ್ಲಿ ಬಾಲ್ಯದ ಕೋಚ್
ವೆಸ್ಟ್ ಇಂಡೀಸ್: ಕೀರಾನ್ ಪೊಲಾರ್ಡ್ (ನಾಯಕ), ನಿಕೋಲಸ್ ಪೂರನ್ (ಉಪನಾಯಕ), ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ರೋಸ್ಟನ್ ಚೇಸ್, ಶೆಲ್ಡನ್ ಕಾಟ್ರೆಲ್, ಡೊಮಿನಿಕ್ ಡ್ರೇಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೆಲ್ ಹೊಸೈನ್, ಬ್ರಾಂಡನ್ ಕಿಂಗ್, ರೋವ್‌ಮನ್ ಪೊವೆಲ್, ಓಡಿಯನ್ ಸ್ಮಿತ್, ರೊಮಾರಿಯೋ ಶೆಫರ್ಡ್, ಕೈಲ್ ಮೇಯರ್ಸ್, ಹೇಡನ್ ವಾಲ್ಷ್ ಜೂನಿಯರ್