ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ವೆಸ್ಟ್ ಇಂಡೀಸ್ ಏಕದಿನ: ತಂಡದಿಂದ ಹೊರಬಿದ್ದ ಕೆಎಲ್ ರಾಹುಲ್; ಕಾರಣವೇನು?

India vs West Indies: KL Rahul will be unavailable for the first ODI due to personal reasons
KL Rahul ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಆಡುತ್ತಿಲ್ಲ | Oneindia Kannada

ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮುಗಿಸಿರುವ ಟೀಮ್ ಇಂಡಿಯಾ ಹರಿಣಗಳ ನೆಲದಲ್ಲಿ ನಡೆದ ಟೆಸ್ಟ್ ಹಾಗೂ ಏಕದಿನ ಎರಡೂ ಸರಣಿಗಳಲ್ಲಿಯೂ ಕೂಡ ಹೀನಾಯವಾಗಿ ಸೋಲುವುದರ ಮೂಲಕ ಮುಖಭಂಗಕ್ಕೊಳಗಾಗಿದೆ. ಮೊದಲಿಗೆ ಟೆಸ್ಟ್ ಸರಣಿಯಲ್ಲಿ 1-2 ಅಂತರದಲ್ಲಿ ಸೋತಿದ್ದ ಟೀಂ ಇಂಡಿಯಾ ನಂತರ ನಡೆದ ಏಕದಿನ ಸರಣಿಯಲ್ಲಿ ಎಲ್ಲ 3 ಪಂದ್ಯಗಳನ್ನು ಕೂಡ ಸೋಲುವುದರ ಮೂಲಕ ವೈಟ್ ವಾಷ್ ಮುಖಭಂಗಕ್ಕೆ ಒಳಗಾಯಿತು.

ವೆಸ್ಟ್‌ ಇಂಡೀಸ್ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ: ಬುಮ್ರಾ, ಶಮಿಗೆ ವಿಶ್ರಾಂತಿವೆಸ್ಟ್‌ ಇಂಡೀಸ್ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ: ಬುಮ್ರಾ, ಶಮಿಗೆ ವಿಶ್ರಾಂತಿ

ಹೀಗೆ ಹರಿಣಗಳ ನೆಲದಲ್ಲಿ ಹೀನಾಯ ಸರಣಿ ಸೋಲನ್ನು ಕಂಡಿರುವ ಟೀಮ್ ಇಂಡಿಯಾ ತನ್ನ ಮುಂದಿನ ಸರಣಿಗಳಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ. ಹೌದು, ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಏಕದಿನ ಹಾಗೂ 3 ಪಂದ್ಯಗಳ ಟ್ವೆಂಟಿ ಸರಣಿಗಳನ್ನಾಡಲು ವೆಸ್ಟ್ ಇಂಡೀಸ್ ಭಾರತ ಪ್ರವಾಸವನ್ನು ಕೈಗೊಳ್ಳಲಿದ್ದು, ಇತ್ತಂಡಗಳ ನಡುವೆ ಮೊದಲಿಗೆ ಏಕದಿನ ಸರಣಿ ನಡೆಯಲಿದೆ ಹಾಗೂ ಏಕದಿನ ಸರಣಿ ಮುಕ್ತಾಯಗೊಂಡ ನಂತರ ಟಿ ಟ್ವೆಂಟಿ ಸರಣಿ ಆರಂಭವಾಗಲಿದೆ. ಇತ್ತಂಡಗಳ ನಡುವಿನ ಸೆಣಸಾಟ ಫೆಬ್ರವರಿ 6ರಂದು ನಡೆಯಲಿರುವ ಚೊಚ್ಚಲ ಏಕದಿನ ಪಂದ್ಯದ ಮೂಲಕ ಆರಂಭವಾಗಲಿದ್ದು, ಫೆಬ್ರವರಿ 20ರಂದು ನಡೆಯಲಿರುವ ಅಂತಿಮ ಟಿ ಟ್ವೆಂಟಿ ಪಂದ್ಯದ ಮೂಲಕ ಮುಕ್ತಾಯವಾಗಲಿದೆ.

ಕುಲ್‌ದೀಪ್ ಯಾದವ್‌ಗೆ ಟೀಂ ಇಂಡಿಯಾ ಬುಲಾವ್‌, ರವಿ ಬಿಷ್ನೋಯಿಗೆ ಅವಕಾಶ!ಕುಲ್‌ದೀಪ್ ಯಾದವ್‌ಗೆ ಟೀಂ ಇಂಡಿಯಾ ಬುಲಾವ್‌, ರವಿ ಬಿಷ್ನೋಯಿಗೆ ಅವಕಾಶ!

ಇನ್ನು ಗಾಯದ ಸಮಸ್ಯೆಯಿಂದಾಗಿ ದಕ್ಷಿಣ ಆಫ್ರಿಕಾ ಸರಣಿಗೆ ಅಲಭ್ಯರಾಗಿದ್ದ ರೋಹಿತ್ ಶರ್ಮಾ ಇದೀಗ ಚೇತರಿಸಿಕೊಂಡಿದ್ದು ಮೈದಾನಕ್ಕಿಳಿಯಲು ಫಿಟ್ ಆಗಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದ ಕೆಎಲ್ ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಳಲ್ಲಿ ಉಪ ನಾಯಕನಾಗಿ ಮುಂದುವರಿಯಲಿದ್ದಾರೆ. ಇನ್ನು ಬಿಸಿಸಿಐ ಜನವರಿ 26ರಂದು ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಹಾಗೂ ಟಿ ಟ್ವೆಂಟಿ ಎರಡೂ ಸರಣಿಗಳಿಗೂ ಕೂಡ ಭಾರತ ತಂಡಗಳನ್ನು ಪ್ರಕಟಿಸಿದೆ. ಹೀಗೆ ತಂಡ ಪ್ರಕಟಿಸುವ ಮೂಲಕ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಅಥವಾ ಕೆಎಲ್ ರಾಹುಲ್ ಈ ಇಬ್ಬರಲ್ಲಿ ಯಾರು ಮುನ್ನಡೆಸಲಿದ್ದಾರೆ ಎಂಬ ಅನುಮಾನಕ್ಕೆ ಬ್ರೇಕ್ ಹಾಕಿರುವ ಬಿಸಿಸಿಐ ರೋಹಿತ್ ಶರ್ಮಾ ಅವರೇ ಎರಡೂ ಸರಣಿಗಳಲ್ಲಿಯೂ ನಾಯಕನಾಗಲಿದ್ದಾರೆ ಎಂದು ಸ್ಪಷ್ಟನೆ ನೀಡಿದೆ. ಇನ್ನು ಸರಣಿಗಳಲ್ಲಿ ಉಪನಾಯಕನಾಗಿ ಕಣಕ್ಕಿಳಿಯಲಿರುವ ಕೆಎಲ್ ರಾಹುಲ್ ಏಕದಿನ ಸರಣಿಯ ಪಂದ್ಯದಿಂದ ಹಿಂದೆ ಸರಿಯಲಿದ್ದಾರೆ. ಹೀಗೆ ಕೆಎಲ್ ರಾಹುಲ್ ಯಾವ ಪಂದ್ಯದಿಂದ ಹಿಂದೆ ಸರಿಯಲಿದ್ದಾರೆ ಮತ್ತು ಹಿಂದೆ ಸರಿಯಲು ಕಾರಣವೇನು ಎಂಬ ಮಾಹಿತಿ ಈ ಕೆಳಕಂಡಂತಿದೆ ನೋಡಿ..

ಈ ಪಂದ್ಯದಿಂದ ಕೆಎಲ್ ರಾಹುಲ್ ಔಟ್

ಈ ಪಂದ್ಯದಿಂದ ಕೆಎಲ್ ರಾಹುಲ್ ಔಟ್

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಳಿಗೆ ಪ್ರಕಟವಾಗಿರುವ ಭಾರತ ಏಕದಿನ ಹಾಗೂ ಟಿ ಟ್ವೆಂಟಿ ಎರಡೂ ತಂಡಗಳಲ್ಲಿಯೂ ಸ್ಥಾನ ಪಡೆದುಕೊಂಡಿರುವ ಕೆಎಲ್ ರಾಹುಲ್ ಫೆಬ್ರವರಿ 6ರಂದು ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಪ್ರಥಮ ಏಕದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆ. ವೈಯಕ್ತಿಕ ಕಾರಣಗಳಿಂದ ಕೆಎಲ್ ರಾಹುಲ್ ಈ ಪಂದ್ಯದಿಂದ ಹೊರ ಉಳಿಯಲಿದ್ದು, ನಂತರ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದ ಮೂಲಕ ಮತ್ತೆ ತಂಡ ಸೇರಿಕೊಳ್ಳಲಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಪ್ರಕಟವಾದ ಭಾರತ ತಂಡ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಪ್ರಕಟವಾದ ಭಾರತ ತಂಡ

ಫೆಬ್ರವರಿ 6ರಂದು ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಬಿಸಿಸಿಐ ಪ್ರಕಟಿಸಿರುವ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಬ್ ಪಂತ್ (ವಿಕೆಟ್-ಕೀಪರ್), ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್. ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್

ವೆಸ್ಟ್ ಇಂಡೀಸ್ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಪ್ರಕಟವಾದ ಟೀಮ್ ಇಂಡಿಯಾ

ವೆಸ್ಟ್ ಇಂಡೀಸ್ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಪ್ರಕಟವಾದ ಟೀಮ್ ಇಂಡಿಯಾ

ಏಕದಿನ ಸರಣಿ ಮುಗಿದ ನಂತರ ವೆಸ್ಟ್ ಇಂಡೀಸ್ ವಿರುದ್ಧ ಫೆಬ್ರವರಿ 16ರಂದು ಆರಂಭವಾಗಲಿರುವ 3 ಪಂದ್ಯಗಳ ಟಿ ಟ್ವೆಂಟಿ ಸರಣಿಗೆ ಪ್ರಕಟಿಸಲಾಗಿರುವ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್. ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್.

Story first published: Thursday, January 27, 2022, 8:44 [IST]
Other articles published on Jan 27, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X