ಭಾರತ vs ವೆಸ್ಟ್ ಇಂಡೀಸ್: ಮೊದಲ ಏಕದಿನ ಪಂದ್ಯ: Live ಸ್ಕೋರ್, ಪ್ಲೇಯಿಂಗ್ XI

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಆರಂಭವಾಗಿದೆ. ಮೂರು ಪಂದ್ಯಗಳ ಏಕದಿನ ಸರಣಿ ಇದಾಗಿದ್ದು ಏಕದಿನ ಸರಣಿಯ ಎಲ್ಲಾ ಪಂದ್ಯಗಳು ಕೂಡ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಭಾರತ ಟಾಸ್ ಗೆದ್ದಿದ್ದು ಎದುರಾಳಿ ವೆಸ್ಟ್ ಇಂಡೀಸ್ ತಂಡವನ್ನು ಮೊದಲಿಗೆ ಬ್ಯಾಟಿಂಗ್‌ಗೆ ಇಳಿಸಿದೆ. ಭಾರತರತ್ನ ಲತಾ ಮಂಗೇಶ್ಕರ್ ಅಗಲಿದ ಹಿನ್ನೆಲೆಯಲ್ಲಿ ಗೌರವಾರ್ಥವಾಗಿ ಟೀಮ್ ಇಂಡಿಯಾ ಆಟಗಾರರು ಈ ಪಂದ್ಯದಲ್ಲಿ ಕಪ್ಪು ಪಟ್ಟಿ ಧರಿಸಿ ಅಂಗಳಕ್ಕಿಳಿದಿದ್ದಾರೆ.
ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ಈ ಏಕದಿನ ಪಂದ್ಯದ ಮೂಲಕ ದೀಪಕ್ ಹೂಡ ಭಾರತ ಏಕದಿನ ಕ್ರಿಕೆಟ್ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಇನ್ನು ತಂಡದ ಉಪ ನಾಯಕ ಮೊದಲ ಏಕದಿನ ಪಂದ್ಯಕ್ಕೆ ಅಲಭ್ತವಾಗಿರುವ ಕಾರಣ ಆರಂಭಿಕನಾಗಿ ರೋಹಿತ್ ಶರ್ಮಾಗೆ ಇಶಾನ್ ಕಿಶನ್ ಸಾಥ್ ನೀಡಿದ್ದಾರೆ. ವಾಶಿಂಗ್ಟನ್ ಸುಂದರ್ ಈ ಪಂದ್ಯದಲ್ಲಿ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ. ಇನ್ನು ಅನುಭವಿ ವೇಗಿ ಜಸ್ಪ್ರೀತ್ ಬೂಮ್ರಾ ಈ ಸರಣಿಯಿಂದ ವಿಶ್ರಾಂತಿ ಪಡೆದುಕೊಂಡಿದ್ದು ಬೌಲಿಂಗ್ ವಿಭಾಗದಲ್ಲಿ ವೇಗಿಗಳಾಗಿ ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಹಾಗೂ ಶಾರ್ದೂಲ್ ಠಾಕೂರ್ ಇದ್ದಾರೆ.
ಇನ್ನು ವೆಸ್ಟ್ ಇಂಡೀಸ್ ತಂಡದಲ್ಲಿ ಮೂರು ಬದಲಾವಣೆ ಮಾಡಿಕೊಳ್ಳಲಾಗಿದ್ದು ಕೇಮರ್ ರೋಚ್ ಹಾಗೂ ಫ್ಯಾಬಿಯನ್ ಅಲೆನ್ ಪಂದ್ಯದ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಡ್ಯಾರೆನ್ ಬ್ರಾವೋ ಕುಡ ಸುದೀರ್ಘ ಸಮಯದ ಬಳಕ ಆಡಲು ಇಳಿಯುತ್ತಿದ್ದಾರೆ.
Live ಸ್ಕೋರ್‌ಕಾರ್ಡ್ ಹೀಗಿದೆ
ಭಾರತ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಾಲ್, ಪ್ರಸಿದ್ಧ್ ಕೃಷ್ಣ
ಬೆಂಚ್: ರವಿ ಬಿಷ್ಣೋಯ್, ಅವೇಶ್ ಖಾನ್, ಶಾರುಖ್ ಖಾನ್, ದೀಪಕ್ ಚಾಹರ್, ಕುಲದೀಪ್ ಯಾದವ್
ವೆಸ್ಟ್ ಇಂಡೀಸ್: ಬ್ರ್ಯಾಂಡನ್ ಕಿಂಗ್, ಶಾಯ್ ಹೋಪ್ (ವಿಕೆಟ್ ಕೀಪರ್), ಡ್ಯಾರೆನ್ ಬ್ರಾವೋ, ಶಮರ್ ಬ್ರೂಕ್ಸ್, ನಿಕೋಲಸ್ ಪೂರನ್, ಕೀರಾನ್ ಪೊಲಾರ್ಡ್ (ನಾಯಕ), ಜೇಸನ್ ಹೋಲ್ಡರ್, ಫ್ಯಾಬಿಯನ್ ಅಲೆನ್, ಅಲ್ಜಾರಿ ಜೋಸೆಫ್, ಅಕೇಲ್ ಹೋಸೇನ್, ಕೆಮರ್ ರೋಚ್
ಬೆಂಚ್: ರೊಮಾರಿಯೊ ಶೆಫರ್ಡ್, ಓಡಿಯನ್ ಸ್ಮಿತ್, ಹೇಡನ್ ವಾಲ್ಷ್, ಎನ್ಕ್ರುಮಾ ಬೋನರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications