ಭಾರತ vs ವೆಸ್ಟ್ ಇಂಡೀಸ್: ಮೊದಲ ಏಕದಿನ ಪಂದ್ಯದಲ್ಲಿ ಇತ್ತಂಡಗಳ ಮುಖಾಮುಖಿ, ಟಾಸ್ ರಿಪೋರ್ಟ್, Live ಸ್ಕೋರ್
ಭಾರತ ಹಾಗೂ ವೆಸ್ಟ್ ಇಂಡಿಸ್ ತಂಡಗಳ ನಡುವಿನ ಮೂರು ಪಂದ್ಯಗಳೇಕದಿನ ಸರಣಿ ಆರಂಭವಾಗಿದೆ. ಮೊದಲ ಪಂದ್ಯ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದಿದ್ದು ಆರಂಭದಲ್ಲಿ ಬೌಲಿಂಗ್ ನಡೆಸುವ ತೀರ್ಮಾನ ತೆಗೆದುಕೊಂಡಿದೆ. ಹೀಗಾಗಿ ಆತಿಥೆಯ ವೆಸ್ಟ್ ಇಂಡೀಸ್ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ವೇಗದ ಬೌಲಿಂಗ್ ವಿಭಾಗ ಸಂಪೂರ್ಣ ಹೊಸತನದೊಂದಿಗೆ ಕಂಡುಬಂದಿದೆ. ಮೊಹಮ್ಮದ್ ಸಿರಾಜ್ ಕೊನೆಯ ಕ್ಷಣದಲ್ಲಿ ಏಕದಿನ ತಂಡದಿಂದ ಹೊರಬಿದ್ದು ತವರಿಗೆ ವಾಪಾಸಾಗಿದ್ದು ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್ ಹಾಗೂ ಚೊಚ್ಚಲ ಪಂದ್ಯವನ್ನಾಡುತ್ತಿರುವ ಮುಕೇಶ್ ಕುಮಾರ್ ವೇಗದ ಬೌಲಿಂಗ್ ವಿಭಾಗದ ಜವಾಬ್ಧಾರಿ ವಹಿಸಿಕೊಂಡಿದ್ದಾರೆ. ಇನ್ನು ಹಾರ್ದಿಕ್ ಪಾಂಡ್ಯ ಕೂಡ ಇವರಿಗೆ ಸಾಥ್ ನೀಡಲಿದ್ದಾರೆ. ರವೀಂದ್ರ ಜಡೇಜಾ ಹಾಗೂ ಕುಲ್‌ದೀಪ್ ಯಾದವ್ ಸ್ಪಿನ್ ಬೌಲಿಂಗ್ ಜವಾಬ್ಧಾರಿ ವಹಿಸಿಕೊಂಡಿದ್ದಾರೆ.

ವೆಸ್ಟ್ ಇಂಡೀಸ್ ಆಡುವ ಬಳಗ: ಶಾಯ್ ಹೋಪ್ (ನಾಯಕ & ವಿಕೆಟ್ ಕೀಪರ್), ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಅಲಿಕ್ ಅಥಾನಾಜೆ, ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್, ರೊಮಾರಿಯೊ ಶೆಫರ್ಡ್, ಯಾನಿಕ್ ಕ್ಯಾರಿಯಾ, ಡೊಮಿನಿಕ್ ಡ್ರೇಕ್ಸ್, ಜೇಡನ್ ಸೀಲ್ಸ್, ಗುಡಾಕೇಶ್ ಮೋಟಿ
ಬೆಂಚ್: ಕೀಸಿ ಕಾರ್ಟಿ, ಅಲ್ಜಾರಿ ಜೋಸೆಫ್, ಒಶಾನೆ ಥಾಮಸ್, ಕೆವಿನ್ ಸಿಂಕ್ಲೇರ್
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್
ಬೆಂಚ್: ಸಂಜು ಸ್ಯಾಮ್ಸನ್, ಯುಜ್ವೇಂದ್ರ ಚಹಾಲ್, ಜಯದೇವ್ ಉನದ್ಕತ್, ಅಕ್ಷರ್ ಪಟೇಲ್, ಋತುರಾಜ್ ಗಾಯಕ್ವಾಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications