Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟೀಂ ಇಂಡಿಯಾ ಏಕದಿನ ಸ್ಕ್ವಾಡ್‌ನಲ್ಲಿ ಬದಲಾವಣೆ: ಇಬ್ಬರು ಆಟಗಾರರು ತಂಡಕ್ಕೆ ಸೇರ್ಪಡೆ

Team india

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗಾಗಿ ಸಿದ್ಧಗೊಂಡಿದ್ದ ಟೀಂ ಇಂಡಿಯಾಗೆ ಕೋವಿಡ್-19 ಕಾಟದ ಹಿನ್ನಲೆ ಪ್ರಮುಖ ಆಟಗಾರರನ್ನ ಕಳೆದುಕೊಂಡಿತು. ಹೀಗಾಗಿ ಫೆಬ್ರವರಿ 6ರಂದು ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೂ ಮೊದಲು ತಂಡದಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ.

ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್ ಜೊತೆಗೆ ಇತರೆ ಸಹಾಯಕ ಸಿಬ್ಬಂದಿ ಸೋಂಕಿಗೆ ಒಳಗಾಗಿದ್ದಾರೆ. ಇದಲ್ಲದೆ ಈಗಾಗಲೇ ಮೊದಲ ಪಂದ್ಯದಿಂದ ಓಪನರ್ ಕೆ.ಎಲ್ ರಾಹುಲ್ ಹೊರಗುಳಿದಿದ್ರು. ಎರಡನೇ ಏಕದಿನ ಪಂದ್ಯದಲ್ಲಿ ರಾಹುಲ್ ಟೀಂ ಇಂಡಿಯಾವನ್ನ ಸೇರಿಕೊಳ್ಳಲಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಪರಿಷ್ಕೃತ ತಂಡವನ್ನ ಪ್ರಕಟಿಸಲಾಗಿದೆ.

ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ತಂಡದಲ್ಲಿ ಸ್ಥಾನ ಒದಗಿಸಿದ್ದು, ಯುವ ಸ್ಫೋಟಕ ಬ್ಯಾಟ್ಸ್‌ಮನ್ ಶಾರೂಖ್ ಖಾನ್ ಸ್ಕ್ವಾಡ್‌ ಸೇರಿದ್ದಾರೆ. ಹೀಗಾಗಿ ಬಿಸಿಸಿಐ ಪರಿಷ್ಕೃತ ತಂಡವನ್ನ ಪ್ರಕಟಿಸಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೂ ಮೊದಲು ಪ್ರಕಟಿಗೊಂಡಿರುವ ಪರಿಷ್ಕೃತ ಏಕದಿನ ತಂಡ ಇಲ್ಲಿದೆ.

ಟೀಂ ಇಂಡಿಯಾ ಏಕದಿನ ಫಾರ್ಮೆಟ್‌ನ ಸ್ಕ್ವಾಡ್‌
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಇಶಾನ್ ಕಿಶನ್, ಶಾರೂಖ್ ಖಾನ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಯುಜವೇಂದ್ರ ಚಾಹಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್ , ರವಿ ಬಿಷ್ಣೋಯಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್

ಭಾರತ-ವೆಸ್ಟ ಇಂಡೀಸ್ ಏಕದಿನ ಸರಣಿ ವೇಳಾಪಟ್ಟಿ
ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿಯ ವೇಳಾಪಟ್ಟಿ:
1ನೇ ODI, ಫೆಬ್ರವರಿ 6, ಭಾನುವಾರ, ಅಹಮದಾಬಾದ್ (1PM)
2ನೇ ODI, ಫೆಬ್ರವರಿ 9, ಬುಧವಾರ, ಅಹಮದಾಬಾದ್ (1PM)
3ನೇ ODI, ಫೆಬ್ರವರಿ 11, ಶುಕ್ರವಾರ, ಅಹಮದಾಬಾದ್ (1PM)

Story first published: Saturday, February 5, 2022, 22:25 [IST]
Other articles published on Feb 5, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+