For Quick Alerts
ALLOW NOTIFICATIONS  
For Daily Alerts
 

ವೆಸ್ಟ್ ಇಂಡೀಸ್ vs ಭಾರತ ಸರಣಿಯಲ್ಲಿ ಪ್ರಮುಖ ಬದಲಾವಣೆ: ಅಧಿಕೃತವಾಗಿ ಘೋಷಿಸಿದ ಬಿಸಿಸಿಐ

India vs West Indies ODIs and T20Is series venue reduces t0 2 due to Covid-19 BCCI announced officially

ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಸೀಮಿತ ಓವರ್‌ಗಳ ಸರಣಿಯಲ್ಲಿನ ಪ್ರಮುಖ ಬದಲಾವಣೆಯನ್ನು ಬಿಸಿಸಿಐ ಅಧಿಕೃತವಾಗಿ ಘೋಷಣೆ ಮಾಡಿದೆ. ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳ ಸರಣಿ ಭಾರತ ಹಾಗೂ ವೆಸ್ಟ್ ಇಂಡೀಸ್ ಮಧ್ಯೆ ನಡೆಯಲಿದೆ. ಕೊರೊನಾವೈರಸ್ ಕಾರಣದಿಂದಾಗಿ ಈ ಸರಣಿಗೆ ಸಂಬಂಧಿಸಿದಂತೆ ಮಹತ್ವದ ಬದಲಾವಣೆಯನ್ನು ಬಿಸಿಸಿಐ ಮಾಡಿದೆ. ಆರು ತಾಣಗಳನ್ನು ಈಫ ಸರಣಿಯ ಪಂದ್ಯಗಳನ್ನು ನಡೆಸಲು ನಿರ್ಧರಿಸಲಾಗಿತ್ತು. ಆದರೆ ಈಗ ಅದು ಕೇವಲ ಎರಡು ತಾಣಗಳಲ್ಲಿ ನಡೆಸಲು ಬಿಸಿಸಿಐ ನಿರ್ಧರಿಸಿದ್ದು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ.

ಕೊರೊನಾವೈರಸ್‌ನ ಆತಂಕದ ಕಾರಣದಿಂದಾಗ ಆರು ತಾಣಗಳಲ್ಲಿ ಸರಣಿಯನ್ನು ನಡೆಸುವುದು ಸೂಕ್ತವಲ್ಲ ಎಂದು ಬಿಸಿಸಿಐ ನಿರ್ಧರಿಸಿತ್ತು. ಹೀಗಾಗಿ ಬಿಸಿಸಿಐ ಈ ಬದಲಾವನೆಯನ್ನು ಮಾಡಿಕೊಂಡಿದೆ. ಹೀಗಾಗಿ ಕೊಲ್ಕತ್ತಾ ಹಾಗೂ ಅಹ್ಮದಾಬಾದ್‌ನಲ್ಲಿ ಏಕದಿನ ಹಾಗೂ ಟಿ20 ಸರಣಿಯ ಎಲ್ಲಾ ಪಂದ್ಯಗಳನ್ನು ಆಯೋಜಿಸಲಾಗುತ್ತದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವೆ ಮೊದಲಿಗೆ ಏಕದಿನ ಸರಣಿ ಆಯೋಜನೆಯಾಗಲಿದೆ. ಈ ಸರಣಿಯ ಮೂರು ಪಂದ್ಯಗಳನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಅದಾದ ಬಳಿಕ ಮೂರು ಪಂದ್ಯಗಳ ಟೆ20 ಸರಣಿಯ 3 ಪಂದ್ಯಗಳು ಕೂಡ ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಆಯೋಜನೆಯಾಗಲಿದೆ.

ಬಿಸಿಸಿಐನ ಪ್ರವಾಸ, ವೇಳಾಪಟ್ಟಿ ಹಾಗೂ ತಾಂತ್ರಿಕ ಸಮಿತಿ ಕಳೆದ ಈ ವಿಚಾರವಾಗಿ ಮಂಗಳವಾರ ಸಭೆ ನಡೆಸಿದ್ದು ದೇಶದಲ್ಲಿನ ಕೊರೊನಾವೈರಸ್ ಪರಿಸ್ಥಿತಿಯನ್ನು ಅವಲೋಕಿಸಿತ್ತು. ಈ ಸಂದರ್ಭದಲ್ಲಿ ಏಕದಿನ ಸರಣಿ ಹಾಗೂ ಟಿ20 ಸರಣಿಯನ್ನು ಎರಡು ತಾಣಗಳಲ್ಲಿ ನಡೆಸಲು ನಿರ್ಧರಿಸಲಾಗಿದ್ದು ಕೊಲ್ಕತ್ತಾ ಹಾಗೂ ಅಹ್ಮದಾಬಾದ್‌ನಲ್ಲಿ ನಡೆಸುವುದು ಸೂಕ್ತ ಎಂದು ಪರಿಗಣಿಸಿ ಬಿಸಿಸಿಐಗೆ ಈ ಬಗ್ಗೆ ಪ್ರಸ್ತಾವನೆ ಕಳುಹಿಸಿತ್ತು. ಈಗ ಬಿಸಿಸಿಐ ಈ ಬಗ್ಗೆ ತನ್ನ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದೆ.

ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಇವರೇ, ಇದಕ್ಕೆಲ್ಲಾ ವಿರಾಟ್ ಭಯ ಪಡಬಾರದು: ಮಾಜಿ ಕ್ರಿಕೆಟಿಗ!
ಈ ಮೊದಲು ವೇಳಾಪಟ್ಟಿಯ ಪ್ರಕಾರ ಫೆಬ್ರವರಿ 6 ರಿಂದ ಆರಂಭವಾಗಲಿರುವ ಏಕದಿನ ಸರಣಿಯ ಮೊದಲ ಪಂದ್ಯ ಅಹಮದಾಬಾದ್‌ನಲ್ಲಿ ನಡೆಸಲು ನಿರ್ಧರಿಸಲಾಗಿದ್ದರೆ, ಎರಡನೇ ಏಕದಿನ ಪಂದ್ಯ ಫೆಬ್ರವರಿ 9 ರಂದು ಜೈಪುರದಲ್ಲಿ ಮತ್ತು ಮೂರನೇ ಏಕದಿನ ಪಂದ್ಯ ಫೆಬ್ರವರಿ 12 ರಂದು ಕೋಲ್ಕತ್ತಾದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಅಲ್ಲದೆ, ಟಿ20 ಸರಣಿಯ ಪಂದ್ಯಗಳು ಕ್ರಮವಾಗಿ ಕಟಕ್, ವಿಶಾಖಪಟ್ಟಣಂ ಮತ್ತು ತಿರುವನಂತಪುರಂನಲ್ಲಿ ನಡೆಸಲು ನಿರ್ಧಾರವನ್ನು ಮಾಡಲಾಗಿತ್ತು. ಈಗ ಈ ತಾಣಗಳು ಕೇವಲ ಅಹಮದಾಬಾದ್ ಹಾಗೂ ಕೊಲ್ಕತ್ತಾಗೆ ಸೀಮಿತವಾಗಿದೆ.

ಇನ್ನು ಫಿಟ್‌ನೆಸ್ ಕಾರಣದಿಂದಾಗಿ ದಕ್ಷಿಣ ಆಪ್ರಿಕಾ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಯಿಂದ ಹೊರಗುಳಿದಿರುವ ಭಾರತದ ಸೀಮಿತ ಓವರ್‌ಗಳ ತಂಡದ ನಾಯಕ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ವೇಳೆಗೆ ಆಡಲು ಸಂಪೂರ್ಣವಾಗಿ ಸಮರ್ಥರಾಗಲಿದ್ದಾರೆ. ಈ ಸರಣಿಯಲ್ಲಿ ರೋಹಿತ್ ಶರ್ಮಾ ಪುನರಾಗಮನದ ನಿರೀಕ್ಷೆಯಿದೆ. ಈ ಬಗ್ಗೆ ಬಿಸಿಸಿಐ ಮೂಲಗಳು ಮಾಹಿತಿ ನೀಡಿದ್ದು ರೋಹಿತ್ ಶರ್ಮಾ ಬೆಂಗಳೂರಿನ ಎನ್‌ಸಿಎನಲ್ಲಿ ಅದ್ಭುತವಾಗಿ ಚೇತರಿಕೆ ಕಾಣುತ್ತಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಅವರು ಲಭ್ಯವಾಗುವ ಸಾಧ್ಯತೆಯಿದೆ. ಈ ಸರಣಿಗೆ ಕನಿಷ್ಠ ಮೂರು ವಾರಗಳ ಅಂತರವಿರುವುದರಿಂದ ಆ ವೇಳೆಗೆ ರೋಹಿತ್ ಸಂಪೂರ್ಣವಾಗಿ ಫಿಟ್ ಆಗಿರಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿದೆ.

Story first published: Monday, January 24, 2022, 10:26 [IST]
Other articles published on Jan 24, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+