
ಪಿಚ್ ವರದಿ
ಗುಜರಾತ್‌ನ ಅಹ್ಮದಾಬಾದ್ ನಗರದ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಪಿಚ್ ಸ್ಪಿನ್ ಬೌಲರ್‌ಗಳಿಗೆ ಹೆಚ್ಚು ಅನುಕೂಲಕರ ಎಂದೇ ಹೇಳಬಹುದು. ಕಳೆದ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಎಚ್ಚರದಿಂದ ಆಡಿದರೆ ಬ್ಯಾಟ್ಸ್‌ಮನ್‌ಗಳು ಹೆಚ್ಚು ಸಮಯ ಕಣದಲ್ಲಿ ಉಳಿಯಬಹುದು ಎಂಬುದನ್ನು ತೋರಿಸಿಕೊಟ್ಟರು. ಹಾಗೂ ಈ ಪಿಚ್‌ನಲ್ಲಿ ನಡೆದಿರುವ ಕಳೆದ 5 ಪಂದ್ಯಗಳ ಪೈಕಿ 4 ಪಂದ್ಯಗಳಲ್ಲಿ ದ್ವಿತೀಯ ಬ್ಯಾಟಿಂಗ್ ಮಾಡಿದ ತಂಡವೇ ಗೆಲುವು ಸಾಧಿಸಿದ್ದು, ಟಾಸ್ ಗೆಲ್ಲುವ ನಾಯಕರು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಳ್ಳುವುದು ಉತ್ತಮ.

ಸಂಭಾವ್ಯ ಆಡುವ ಬಳಗಗಳು
ಭಾರತ ಸಂಭಾವ್ಯ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ
ವೆಸ್ಟ್ ಇಂಡೀಸ್ ಸಂಭಾವ್ಯ ಆಡುವ ಬಳಗ: ಬ್ರಾಂಡನ್ ಕಿಂಗ್, ಶಾಯ್ ಹೋಪ್ (ವಿಕೆಟ್ ಕೀಪರ್), ಡ್ಯಾರೆನ್ ಬ್ರಾವೋ, ಶಮರ್ ಬ್ರೂಕ್ಸ್, ನಿಕೋಲಸ್ ಪೂರನ್, ಕೀರಾನ್ ಪೊಲಾರ್ಡ್ (ನಾಯಕ), ಜೇಸನ್ ಹೋಲ್ಡರ್, ಫ್ಯಾಬಿಯನ್ ಅಲೆನ್, ಅಲ್ಜಾರಿ ಜೋಸೆಫ್, ಅಕೇಲ್ ಹೋಸೇನ್, ಕೆಮರ್ ರೋಚ್

ನೇರಪ್ರಸಾರದ ಮಾಹಿತಿ
ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ದ್ವಿತೀಯ ಏಕದಿನ ಪಂದ್ಯ ಫೆಬ್ರವರಿ 9ರ ಬುಧವಾರದಂದು ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಈ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ನಲ್ಲಿ ನೇರ ಪ್ರಸಾರವಾಗಲಿದೆ ಹಾಗೂ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲೂ ಪ್ರಸಾರವಾಗಲಿದೆ.


Click it and Unblock the Notifications
