ವಿಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೆ ಧವನ್ ಸಿದ್ಧ: ಸ್ಥಾನ ಕಳೆದುಕೊಳ್ಳಲಿದ್ದಾರೆ ಈ ಇಬ್ಬರಲ್ಲೊಬ್ಬರು

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಟೆಸ್ಟ್ ಹಾಗೂ ಏಕದಿನ ಎರಡೂ ಸರಣಿಗಳಲ್ಲಿಯೂ ಹೀನಾಯವಾಗಿ ಸೋಲುವುದರ ಮೂಲಕ ಮುಖಭಂಗಕ್ಕೊಳಗಾಗಿದ್ದ ಟೀಮ್ ಇಂಡಿಯಾ ಇದೀಗ ತವರಿನಲ್ಲಿ ಕೆರಿಬಿಯನ್ನರ ವಿರುದ್ಧ ಸೀಮಿತ ಓವರ್ ಸರಣಿಗಳಲ್ಲಿ ಸೆಣಸಾಟ ನಡೆಸುತ್ತಿದೆ.
ಹೌದು, ವೆಸ್ಟ್ ಇಂಡೀಸ್ ಭಾರತ ಪ್ರವಾಸವನ್ನು ಕೈಗೊಂಡಿದ್ದು ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ ಟ್ವೆಂಟಿ ಸರಣಿಗಳಲ್ಲಿ ಸೆಣಸಾಟವನ್ನು ನಡೆಸುತ್ತಿದೆ. ಇತ್ತಂಡಗಳ ನಡುವೆ ಮೊದಲಿಗೆ ಏಕದಿನ ಸರಣಿ ಆರಂಭವಾಗಿದ್ದು, ಈಗಾಗಲೇ ಈ ಸರಣಿಯ ಮೊದಲೆರಡು ಪಂದ್ಯಗಳು ಮುಗಿದಿವೆ. ಕಳೆದ ಭಾನುವಾರದಂದು ನಡೆದ ಪ್ರಥಮ ಏಕದಿನ ಪಂದ್ಯದಲ್ಲಿ 6 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಬುಧವಾರದಂದು ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ 44 ರನ್‌ಗಳ ಜಯ ಸಾಧಿಸುವುದರ ಮೂಲಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ 2-0 ಅಂತರದ ಮುನ್ನಡೆಯನ್ನು ಕಾಯ್ದುಕೊಳ್ಳುವುದರ ಜೊತೆಗೆ ಸರಣಿಯನ್ನು ವಶಪಡಿಸಿಕೊಂಡಿದೆ.
ಇನ್ನು ವೆಸ್ಟ್ ಇಂಡೀಸ್ ವಿರುದ್ಧ ನಡೆದ ಈ 2 ಏಕದಿನ ಪಂದ್ಯಗಳಲ್ಲಿ ಸರಣಿಗೆ ಆಯ್ಕೆಯಾಗಿದ್ದ ಕೆಲ ಆಟಗಾರರು ಭಾಗವಹಿಸಿರಲಿಲ್ಲ. ಹೌದು, ಸರಣಿಗಳು ಆರಂಭವಾಗುವುದಕ್ಕೂ ಮುನ್ನ ಕೊರೋನಾ ಸೋಂಕಿಗೆ ಒಳಗಾಗಿದ್ದ ತಂಡದ ಪ್ರಮುಖ ಆಟಗಾರರಾದ ಶಿಖರ್ ಧವನ್, ಶ್ರೇಯಸ್ ಅಯ್ಯರ್ ಹಾಗೂ ನವದೀಪ್ ಸೈನಿ ಮೈದಾನಕ್ಕಿಳಿಯುವ ಅವಕಾಶ ಸಿಗದೇ ಐಸೋಲೇಷನ್ ನಿಯಮಕ್ಕೆ ಒಳಗಾಗಿದ್ದರು. ಹೀಗಾಗಿ ಮೊದಲೆರಡು ಪಂದ್ಯಗಳಲ್ಲಿ ಆಡುವ ಅವಕಾಶ ಸಿಗದೇ ಇದ್ದ ಶಿಖರ್ ಧವನ್ ಇದೀಗ ಕೊರೋನಾ ನೆಗೆಟಿವ್ ವರದಿ ಪಡೆದುಕೊಂಡಿರುವ ಕಾರಣ ವೆಸ್ಟ್ ಇಂಡೀಸ್ ವಿರುದ್ಧ ಫೆಬ್ರವರಿ 11ರಂದು ನಡೆಯಲಿರುವ ತೃತೀಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಶಿಖರ್ ಧವನ್ ತಂಡ ಸೇರುವುದರ ಜತೆಗೆ ತಂಡದಲ್ಲಿ ಕೆಲ ಬದಲಾವಣೆಗಳಾಗಲಿದ್ದು, ಅವುಗಳ ಕುರಿತಾದ ವಿವರ ಈ ಕೆಳಕಂಡಂತಿದೆ.

ಶಿಖರ್ ಧವನ್ ಆರಂಭಿಕ ಆಟಗಾರ
ಶಿಖರ್ ಧವನ್ ಕೊರೊನಾ ಸೋಂಕಿಗೆ ಒಳಗಾಗಿದ್ದ ಕಾರಣ ಪ್ರಥಮ ಏಕದಿನ ಪಂದ್ಯದಲ್ಲಿ ಆರಂಭಿಕ ಆಟಗಾರರಿಲ್ಲದೇ ಇಶಾನ್ ಕಿಶನ್ ಅವರನ್ನು ಕಣಕ್ಕಿಳಿಸಲಾಗಿತ್ತು. ಹಾಗೂ ದ್ವಿತೀಯ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕಿದ್ದ ರಿಷಭ್ ಪಂತ್ ಅವರನ್ನು ಆರಂಭಿಕ ಆಟಗಾರನನ್ನಾಗಿ ಕಣಕ್ಕಿಳಿಸಲಾಗಿತ್ತು. ಆದರೆ ಇದೀಗ ತೃತೀಯ ಏಕದಿನ ಪಂದ್ಯಕ್ಕೆ ಶಿಖರ್ ಧವನ್ ಕಣಕ್ಕಿಳಿಯಲು ಸಿದ್ಧರಾಗಿರುವುದರಿಂದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಲಿದ್ದಾರೆ. ಈ ಕುರಿತಾಗಿ ದ್ವಿತೀಯ ಏಕದಿನ ಪಂದ್ಯ ಮುಗಿದ ನಂತರ ಮಾತನಾಡಿದ ರೋಹಿತ್ ಶರ್ಮಾ ಶಿಖರ್ ಧವನ್ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿದ್ದರು. ಶಿಖರ್ ಧವನ್ ರೋಹಿತ್ ಶರ್ಮಾ ಜತೆ ಆರಂಭವನ್ನು ಮಾಡಿದರೆ ಕಳೆದ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಇಳಿದು ಮಿಂಚಿದ್ದ ಕೆಎಲ್ ರಾಹುಲ್ ನಾಲ್ಕನೇ ಕ್ರಮಾಂಕದಲ್ಲಿಯೇ ಕಣಕ್ಕಿಳಿಯುವ ಸಾಧ್ಯತೆಗಳಿವೆ.

ಯುಜುವೇಂದ್ರ ಚಾಹಲ್ ಅಥವಾ ವಾಷಿಂಗ್ಟನ್ ಸುಂದರ್ ತಂಡದಿಂದ ಹೊರಕ್ಕೆ
ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ತೃತೀಯ ಏಕದಿನ ಪಂದ್ಯದಲ್ಲಿ ಕುಲ್ ದೀಪ್ ಯಾದವ್ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಿದೆ. ಈಗಾಗಲೇ ಮೈದಾನಕ್ಕಿಳಿದು ತೃತೀಯ ಏಕದಿನ ಪಂದ್ಯಕ್ಕಾಗಿ ಕುಲ್ದೀಪ್ ಯಾದವ್ ಅಭ್ಯಾಸ ನಡೆಸುತ್ತಿದ್ದು, ಯುಜುವೇಂದ್ರ ಚಾಹಲ್ ಅಥವಾ ವಾಷಿಂಗ್ಟನ್ ಸುಂದರ್ ಈ ಇಬ್ಬರಲ್ಲೊಬ್ಬರು ತೃತೀಯ ಏಕದಿನ ಪಂದ್ಯದಿಂದ ಹೊರ ಬೀಳಲಿದ್ದಾರೆ.

ಆವೇಶ್ ಖಾನ್ ಮತ್ತು ದೀಪಕ್ ಚಹರ್ ಕಣಕ್ಕಿಳಿಯುವ ಸಾಧ್ಯತೆ
ಇನ್ನು ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ತೃತೀಯ ಏಕದಿನ ಪಂದ್ಯದ ಮೂಲಕ ಆವೇಶ್ ಖಾನ್ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‍ಗೆ ಪದಾರ್ಪಣೆ ಮಾಡುವ ಸಾಧ್ಯತೆಗಳಿವೆ. ಹಾಗೂ ದೀಪಕ್ ಚಹರ್ ಕೂಡ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳಿದ್ದು, ಶಾರ್ದೂಲ್ ಠಾಕೂರ್ ಸ್ಥಾನ ಕಳೆದುಕೊಳ್ಳಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications