ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ವೆಸ್ಟ್ ಇಂಡೀಸ್: ಟಿ20 ಸರಣಿ ಇಂದಿನಿಂದ ಆರಂಭ; ಸಮಯ, ಸ್ಕ್ವಾಡ್, ಪ್ರಿವ್ಯೂ

India vs West Indies: T20 series, 1st match, Preview, match time and squad, Kolkata

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಇಂದು ಆರಂಭವಾಗಲಿದೆ. ಈ ಮೂಲಕ ಮೂರು ಪಂದ್ಯಗಳ ಚುಟುಕು ಮಾದರಿಯ ಸರಣಿಗೆ ಚಾಲನೆ ದೊರೆಯಲಿದೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಏಕದಿನ ಮಾದರಿಯ ಸರಣಿಯಲ್ಲಿ ಪ್ರವಾಸಿ ವಿಂಡೀಸ್ ಪಡೆಯನ್ನು ವೈಟ್‌ವಾಶ್ ಮಾಡಿದ್ದು ಟಿ20 ಮಾದರಿಯಲ್ಲಿಯೂ ಅಂಥಾದ್ದೇ ಸಾಧನೆಯ ಆತ್ಮವಿಶ್ವಾಸದಲ್ಲಿದೆ. ಆದರೆ ವಿಂಡೀಸ್ ಪಡೆಯಲ್ಲಿ ಚುಟುಕು ಮಾದರಿಯ ಕ್ರಿಕೆಟ್‌ಗೆ ಪೂರಕವಾದ ಆಟಗಾರರ ದಂಡೇ ಇದ್ದು ಸರಣಿ ಮತ್ತಷ್ಟು ಕುತೂಹಲ ಹೆಚ್ಚಿಸಿದೆ. ಟಿ20 ಸರಣಿಯ ಎಲ್ಲಾ ಪಂದ್ಯಗಳು ಕೂಡ ಕೊಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಲಿದೆ.

ಇನ್ನು ಈ ಟಿ20 ಸರಣಿಗೆ ಉಪ ನಾಯಕ ಕೆಎಲ್ ರಾಹುಲ್ ಹಾಗೂ ವಾಶಿಂಗ್ಟನ್ ಸುಂದರ್ ಅಲಭ್ಯವಾಗಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಈ ಆಟಗಾರರು ತಂಡದಿಂದ ಹೊರಗುಳಿದಿದ್ದಾರೆ. ವಾಶಿಂಗ್ಟನ್ ಸುಂದರ್ ಬದಲಿಗೆ ಕುಲ್ದೀಪ್ ಯಾದವ್ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಇನ್ನು ತಂಡದ ಉಪಿ ನಾಯಕನ ಜವಾಬ್ಧಾರಿಯನ್ನು ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಹೆಗಲೇರಿದೆ.

ಪಂದ್ಯದ ಆರಂಭ: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ಪಂದ್ಯ ಕೊಲ್ಕತ್ತಾದಲ್ಲಿ ನಡೆಯಲಿದೆ. ಸಂಜೆ 7 ಗಂಟೆಯ ವೇಳೆಗೆ ಪಂದ್ಯ ಆರಂಭವಾಗಲಿದ್ದು 6:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್, ಕುಲ್ದೀಪ್ ಯಾದವ್ , ದೀಪಕ್ ಹೂಡಾ, ಅವೇಶ್ ಖಾನ್, ರುತುರಾಜ್ ಗಾಯಕ್ವಾಡ್, ರವಿ ಬಿಷ್ಣೋಯ್

KL Rahul ಗೆ ಬ್ಯಾಡ್ ನ್ಯೂಸ್ ಕೊಟ್ಟ BCCI | Oneindia Kannada

ವೆಸ್ಟ್ ಇಂಡೀಸ್ ತಂಡ: ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಕೀರಾನ್ ಪೊಲಾರ್ಡ್ (ನಾಯಕ), ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ರೋವ್‌ಮನ್ ಪೊವೆಲ್, ಜೇಸನ್ ಹೋಲ್ಡರ್, ಫ್ಯಾಬಿಯನ್ ಅಲೆನ್, ರೊಮಾರಿಯೋ ಶೆಫರ್ಡ್, ಓಡಿಯನ್ ಸ್ಮಿತ್, ಅಕೆಲ್ ಹೋಸೇನ್, ಶೆಲ್ಡನ್ ಕಾಟ್ರೆಲ್, ಡೊಮಿನಿಕ್ ಡ್ರೇಕ್ಸ್, ಡ್ಯಾರೆನ್ ಬ್ರಾವೋ ಹೋಪ್, ರೋಸ್ಟನ್ ಚೇಸ್, ಹೇಡನ್ ವಾಲ್ಷ್

Story first published: Wednesday, February 16, 2022, 10:09 [IST]
Other articles published on Feb 16, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X