IND vs WI T20: ಏಕದಿನ ಆಯ್ತು ಇನ್ನು ಟಿ20 ಸರಣಿ: ಪಂದ್ಯದ ದಿನ, ಸಮಯ, ನೇರಪ್ರಸಾರದ ಮಾಹಿತಿ
ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿರುವ ಟೀಮ್ ಇಂಡಿಯಾ ಟೆಸ್ಟ್ ಹಾಗೂ ಏಕದಿನ ಸರಣಿಯನ್ನು ಯಶಸ್ವಿಯಾಗಿ ಮುಗಿಸಿದೆ. ಎರಡು ಸರಣಿ ಕುಡ ಭಾರತದ ಕೈವಶವಾಗಿದ್ದು ಎರಡು ಪಂದ್ಯಗಳ ಟೆಸ್ಟ್ ಸರಣಿ 1-0 ಅಂತರದಿಂದ ಭಾರತದ ವಶವಾಗಿದ್ದರೆ ಏಕದಿನ ಸರಣಿಯಲ್ಲಿ ಭಾರತ 2-1 ಅಂತರದಿಂದ ಗೆಲುವು ಸಾಧಿಸಿದೆ. ಇದೀಗ ಈ ಎರಡು ತಂಡಗಳು ಐದು ಪಂದ್ಯಗಳ ಟಿ20 ಸರಣಿಯನ್ನಾಡಲು ಸಿದ್ಧವಾಗಿ ವೇದಿಕೆ ಸಜ್ಜಾಗಿದೆ.
ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಅನುಭವಿ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇಲ್ಲದೆ ಕಣಕ್ಕಿಳಿಯುತ್ತಿದ್ದು ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಆಡಲಿದೆ. ಯುವ ಆಟಗಾರರನ್ನು ಒಳಗೊಂಡಿರುವ ಭಾರತ ತಂಡ ಟಿ20 ಮಾದರಿಯಲ್ಲಿ ಬಲಿಷ್ಠ ತಂಡವಾಗಿರುವ ವೆಸ್ಟ್ ಇಂಡೀಸ್ ತಂಡವನ್ನು ಅದರದ್ದೇ ತವರಿನಲ್ಲಿ ಹೇಗೆ ಎದುರಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಗುರುವಾರದಿಂದಲೇ ಸರಣಿ ಆರಂಭ
ಐದು ಪಂದ್ಯಗಳ ಟಿ20 ಸರಣಿ ನಾಳೆ(ಆಗಸ್ಟ್ 3 ಗುರುವಾರ)ಯಿಂದಲೇ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯ ಟ್ರಿನಿಡಾಸ್‌ನ ಬರಿಯಾನ್ ಲಾರಾ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದೆ. ಎರಡನೇ ಹಾಗೂ ಮೂರನೇ ಪಂದ್ಯ ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯಲಿದ್ದು ಆಗಸ್ಟ್ 6 ಹಾಗೂ 8ರಂದು ಈ ಪಂದ್ಯಗಳು ಆಯೋಜನೆಯಾಗಲಿದೆ. ಇನ್ನು ಸರಣಿಯ ಕೊನೆಯ ಎರಡು ಪಂದ್ಯಗಳು ಯುಎಸ್‌ಎನಲ್ಲಿ ನಡೆಯಲಿದ್ದು ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ರೀಜಿನಲ್ ಪಾರ್ಕ್ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದೆ. ಆಗಸ್ಟ್ 12 ಮತ್ತು 13ರಂದು ಈ ಪಂದ್ಯಗಳು ನಡೆಯಲಿದೆ.
ಭಾರತದಲ್ಲಿ ಪಂದ್ಯದ ಆರಂಭದ ಸಮಯ ಹಾಗೂ ವೀಕ್ಷಣೆ ಹೇಗೆ?
ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಟಿ20 ಸರಣಿಯ ಪಂದ್ಯಗಳು ಭಾರತೀಯ ಕಾಲಮಾನ ಸಂಜೆ ೮ ಗಂಟೆಯಿಂದ ಆರಂಭವಾಗಲಿದ್ದು 6:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಭಾರತದಲ್ಲಿ ಈ ಪಂದ್ಯವನ್ನು ಟಿವಿಯಲ್ಲಿ ಡಿಡಿ ಸ್ಪೋರ್ಟ್ಸ್ ನೇರಪ್ರಸಾರ ಮಾಡಲಿದೆ. ಹಿಂದಿ ಹಾಗೂ ಇಂಗ್ಲಿಶ್‌ನಲ್ಲಿ ವೀಕ್ಷಕ ವಿವರಣೆಯಿರಲಿದೆ. ಇನ್ನು ಲೈವ್‌ಸ್ಟ್ರೀಮಿಂಗ್ ಕೂಡ ಲಭ್ಯವಿದ್ದು ಫ್ಯಾನ್ ಕೋಡ್ ಚಂದಾದಾರರು ಹಾಗೂ ಜಿಯೋ ಸಿನಿಮಾದಲ್ಲಿ ಪಂದ್ಯವನ್ನು ವೀಕ್ಷಿಸುವ ಅವಕಾಶವಿದೆ.
ಇತ್ತಂಡಗಳ ಆಡುವ ಬಳಗ
ವೆಸ್ಟ್ ಇಂಡೀಸ್ ಟಿ20 ತಂಡ: ರೋವ್ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಒಬೆಡ್ ಮೆಕಾಯ್, ನಿಕೋಲಸ್ ಪೂರನ್, ರೊಮಾರಿಯೊ ಶೆಫರ್ಡ್, ಓಡಿಯನ್ ಸ್ಮಿತ್, ಓಶೇನ್ ಥಾಮಸ್
ಭಾರತ ಟಿ20 ತಂಡ: ಇಶಾನ್ ಕಿಶನ್, ಶುಬ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್‌ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಆವೇಶ್ ಖಾನ್, ಮುಖೇಶ್ ಕುಮಾರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications