ಟೀಂ ಇಂಡಿಯಾಗೆ ಗುಡ್ ನ್ಯೂಸ್; ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿ ಆಡಲಿದ್ದಾರೆ ಕೆಎಲ್ ರಾಹುಲ್!

ಈ ವರ್ಷದ ಕೊನೆಯಲ್ಲಿ ಅಕ್ಟೋಬರ್-ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ನ ತಯಾರಿಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲು ಭಾರತೀಯ ಕ್ರಿಕೆಟ್ ತಂಡವು ಸಿದ್ಧವಾಗಿದೆ.
ಭಾರತ ತಂಡದ ಪ್ರಮುಖ ಆಟಗಾರರಾದ ಜಸ್ಪ್ರೀತ್ ಬುಮ್ರಾ ಮತ್ತು ವಿರಾಟ್ ಕೊಹ್ಲಿಯಂತಹ ಪ್ರಮುಖ ಆಟಗಾರರಿಗೆ ಈ ಸರಣಿಯಲ್ಲಿ ವಿಶ್ರಾಂತಿ ನೀಡಲಾಗಿದೆ. ಏಕೆಂದರೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಟಿ20 ವಿಶ್ವಕಪ್ ತಂಡವನ್ನು ಅಂತಿಮಗೊಳಿಸಲು ಯುವ ಆಟಗಾರರಿಗೆ ಅವಕಾಶಗಳನ್ನು ನೀಡುತ್ತದೆ. ಭಾರತದ ಇಬ್ಬರು ಪ್ರೀಮಿಯರ್ ಟಿ20 ಆಟಗಾರರಾದ ಕನ್ನಡಿಗ ಕೆಎಲ್ ರಾಹುಲ್ ಮತ್ತು ಕುಲ್‌ದೀಪ್ ಯಾದವ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ.
ಉಪನಾಯಕ ಕೆಎಲ್ ರಾಹುಲ್ ಮತ್ತು ಕುಲದೀಪ್ ಯಾದವ್ ಅವರು ಫಿಟ್ ಆಗಬಹುದು ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಮೊದಲು ಭಾರತ ತಂಡವನ್ನು ಸೇರಿಕೊಳ್ಳಬಹುದು ಎಂದು ಬಿಸಿಸಿಐನ ಆಯ್ಕೆ ಸಮಿತಿ ಸದಸ್ಯರು ಇನ್‌ಸೈಡ್ ಸ್ಪೋರ್ಟ್ಸ್‌ಗೆ ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದ ರಾಹುಲ್
ಇತ್ತೀಚೆಗೆ ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಕೆಎಲ್ ರಾಹುಲ್ ಅವರು ತೊಡೆಸಂದು ಗಾಯದ ಕಾರಣದಿಂದ ಹೊರಗುಳಿದಿದ್ದರು. ಇನ್ನು ಇದೇ ವೇಳೆ ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್ ಅವರು ನೆಟ್ಸ್‌ನಲ್ಲಿ ಕೈಗೆ ಪೆಟ್ಟು ಮಾಡಿಕೊಂಡಿದ್ದರು.
"ಕೆಎಲ್ ರಾಹುಲ್ ಮತ್ತು ಕುಲದೀಪ್ ಯಾದವ್ ಇಬ್ಬರೂ ಈ ವಾರ ಫಿಟ್‌ನೆಸ್ ಪರೀಕ್ಷೆ ನಡೆಸಲಿದ್ದಾರೆ. ಅವರ ಚೇತರಿಕೆ ನಿಜವಾಗಿಯೂ ಚೆನ್ನಾಗಿ ನಡೆಯುತ್ತಿದೆ ಮತ್ತು ಅವರು ತಂಡಕ್ಕೆ ಮರಳುತ್ತಾರೆ ಎಂದು ನಾವು ಭಾವಿಸುತ್ತೇವೆ. ಕುಲದೀಪ್ ಈಗಾಗಲೇ ಶೇ.80ರಷ್ಟು ಮ್ಯಾಚ್ ಫಿಟ್ ಆಗಿದ್ದಾರೆ. ಕೆಎಲ್ ರಾಹುಲ್‌ಗೆ ಇತ್ತೀಚೆಗಷ್ಟೇ ಶಸ್ತ್ರ ಚಿಕಿತ್ಸೆ ಆಗಿದ್ದರಿಂದ ಕೆಲಸ ಪ್ರಗತಿಯಲ್ಲಿದೆ. ಅವರು ಅಭ್ಯಾಸವನ್ನು ಪ್ರಾರಂಭಿಸಿದ್ದಾರೆ ಮತ್ತು ಫಿಟ್‌ನೆಸ್ ಮಟ್ಟವನ್ನು ಅವಲಂಬಿಸಿ, ನಾವು ಕರೆಯನ್ನು ತೆಗೆದುಕೊಳ್ಳುತ್ತೇವೆ," ಎಂದು ಆಯ್ಕೆ ಸಮಿತಿಯ ಸದಸ್ಯರೊಬ್ಬರು ಇನ್‌ಸೈಡ್‌ಸ್ಪೋರ್ಟ್‌ಗೆ ಮಾಹಿತಿ ನೀಡಿದ್ದಾರೆ.
ಭಾರತ vs ಜಿಂಬಾಬ್ವೆ: ಮೂರು ಪಂದ್ಯಗಳ ಏಕದಿನ ಸರಣಿ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಮಾಹಿತಿ

ಇಂಡಿಯಾ ಪರ ಬ್ಯಾಟಿಂಗ್ ತೆರೆಯುವುದು ಬಹುತೇಕ ಖಚಿತ
ಕೆಎಲ್ ರಾಹುಲ್ ಐಪಿಎಲ್ ಸೀಸನ್‌ನಂತೆ ತಮ್ಮ ಅಸಾಧಾರಣ ಅಂಕಿಅಂಶಗಳನ್ನು ನೀಡಿದರೆ ಟೀಮ್ ಇಂಡಿಯಾ ಪರ ಬ್ಯಾಟಿಂಗ್ ತೆರೆಯುವುದು ಬಹುತೇಕ ಖಚಿತವಾಗಿದೆ. ಆದರೆ ಕುಲ್‌ದೀಪ್ ಯಾದವ್ ಅವರು ರವಿ ಬಿಷ್ಣೋಯ್ ಮತ್ತು ಆರ್. ಅಶ್ವಿನ್ ಅವರಂತವರ ಜೊತೆ ತಂಡದಲ್ಲಿ ತಮ್ಮ ಸ್ಥಾನಕ್ಕಾಗಿ ಹೋರಾಡಬೇಕಾಗುತ್ತದೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಇವರಿಬ್ಬರು ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧ 5 ಟಿ20 ಪಂದ್ಯಗಳಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕೆಎಲ್ ರಾಹುಲ್*, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಆರ್. ಅಶ್ವಿನ್, ರವಿ ಬಿಷ್ಣೋಯ್, ಕುಲದೀಪ್ ಯಾದವ್*, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಭಾರತ vs ವೆಸ್ಟ್ ಇಂಡೀಸ್ ಟಿ20 ವೇಳಾಪಟ್ಟಿ
* ಜುಲೈ 29, 2022 - ವೆಸ್ಟ್ ಇಂಡೀಸ್ vs ಭಾರತ 1ನೇ ಟಿ20- ಬ್ರಿಯಾನ್ ಲಾರಾ ಸ್ಟೇಡಿಯಂ, ತರೌಬಾ, ಟ್ರಿನಿಡಾಡ್- 8 PM
* ಆಗಸ್ಟ್ 1, 2022- ವೆಸ್ಟ್ ಇಂಡೀಸ್ ವಿರುದ್ಧ ಭಾರತ 2ನೇ ಟಿ20- ವಾರ್ನರ್ ಪಾರ್ಕ್, ಬಾಸ್ಸೆಟೆರೆ, ಸೇಂಟ್ ಕಿಟ್ಸ್- 8 PM
* ಆಗಸ್ಟ್ 2, 2022- ವೆಸ್ಟ್ ಇಂಡೀಸ್ ವಿರುದ್ಧ ಭಾರತ 3ನೇ ಟಿ20- ವಾರ್ನರ್ ಪಾರ್ಕ್, ಬಾಸ್ಸೆಟೆರೆ, ಸೇಂಟ್ ಕಿಟ್ಸ್- 8 PM
* ಆಗಸ್ಟ್ 6, 2022- ವೆಸ್ಟ್ ಇಂಡೀಸ್ vs ಭಾರತ 4ನೇ ಟಿ20- ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್, ಲಾಡರ್‌ಹಿಲ್, ಫ್ಲೋರಿಡಾ- 8 PM
* ಆಗಸ್ಟ್ 7, 2022- ವೆಸ್ಟ್ ಇಂಡೀಸ್ vs ಭಾರತ 5ನೇ ಟಿ20- ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್, ಲಾಡರ್‌ಹಿಲ್, ಫ್ಲೋರಿಡಾ- 8 PM
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications