ವಿಂಡೀಸ್ ವಿರುದ್ಧದ 2 ಏಕದಿನ ಪಂದ್ಯಕ್ಕೆ ಕೊಹ್ಲಿ ನಾಯಕ, ಪಂತ್ ಇನ್

ನವದೆಹಲಿ, ಅಕ್ಟೋಬರ್ 11: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲೆರಡು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಿಗೆ 14 ಮಂದಿ ಸದಸ್ಯರ ತಂಡವನ್ನು ಇಂದು ಪ್ರಕಟಿಸಲಾಗಿದೆ. ವಿರಾಟ್ ಕೊಹ್ಲಿ ನಾಯಕರಾಗಿದ್ದರೆ, ರಿಷಪ್ ಪಂತ್ ಅವರು ಚೊಚ್ಚಲ ಪಂದ್ಯವಾಡುವ ಅವಕಾಶ ಪಡೆದುಕೊಂಡಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಆಯ್ಕೆ ಸಮಿತಿಯು ಇಂದು(ಅಕ್ಟೋಬರ್ 11) ಸಭೆ ಸೇರಿ ತಂಡವನ್ನು ಪ್ರಕಟಿಸಿದೆ. ಯುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಅವರನ್ನು ಎಂಎಸ್ ಧೋನಿಗೆ ಸಾಥ್ ನೀಡಲು ತಂಡಕ್ಕೆ ಸೇರಿಸಿಕೊಳ್ಳಲಾಗಿದ್ದು, ದಿನೇಶ್ ಕಾರ್ತಿಕ್ ಅವರನ್ನು ಕೈಬಿಡಲಾಗಿದೆ.
ಕೊಹ್ಲಿ ನಾಯಕರಾಗಿ ಮರಳಿದ್ದರೆ, ರೋಹಿತ್ ಶರ್ಮ ಅವರು ಉಪ ನಾಯಕರಾಗಿದ್ದಾರೆ. ಏಷ್ಯಾ ಕಪ್ ಆಡಿದ ಬಹುತೇಕ ಆಟಗಾರರು ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಏಷ್ಯಾ ಕಪ್ ನಲ್ಲಿ ಉತ್ತಮವಾಗಿ ಆಡದ ಕಾರ್ತಿಕ್ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ
ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮ (ಉಪ ನಾಯಕ), ಶಿಖರ್ ಧವನ್, ಅಂಬಟಿ ರಾಯುಡು, ಮನೀಶ್ ಪಾಂಡೆ, ಎಂ ಎಸ್ ಧೋನಿ(ವಿಕೆಟ್ ಕೀಪರ್), ರಿಷಬ್ ಪಂತ್, ರವೀಂದ್ರ ಜಡೇಜ, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಖಲೀಲ್ ಅಹ್ಮದ್, ಶಾರ್ದೂಲ್ ಠಾಕೂರ್, ಕೆಎಲ್ ರಾಹುಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications