ಭಾರತ vs ವೆಸ್ಟ್ ಇಂಡೀಸ್: ಮೊದಲ ಟಿ20 ಪಂದ್ಯಕ್ಕೆ ಕ್ಷಣಗಣನೆ: ಭಾರತದ ಸಂಭಾವ್ಯ ಆಡುವ ಬಳಗ ಹೀಗಿದೆ!

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಗೆ ವೇದಿಕೆ ಸಜ್ಜಾಗಿದ್ದು ಎರಡು ತಂಡಗಳು ಕೂಡ ಈ ಪಂದ್ಯದಲ್ಲಿ ಕಣಕ್ಕಿಳಿಯಲೂ ಸಂಪೂರ್ಣ ಸಿದ್ಧತೆ ನಡೆಸಿದೆ. ಬುಧವಾರ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ನಡೆಯಲಿದ್ದು ಎರಡು ತಂಡಗಳ ನಡುವಿನ ಕಾದಾಟ ಕುತೂಹಲ ಮೂಡಿಸಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಡುವ ಬಳಗ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಹಾಗಾಗಿ ಬುಧವಾರ ನಡೆಯಲಿರುವ ಪಂದ್ಯದಲ್ಲಿ ಭಾರತದ ಸಂಭಾವ್ಯ ಆಡುವ ಬಳಗ ಹೇಗಿದೆ ಎಂಬುದನ್ನು ನೋಡೋಣ ಬನ್ನಿ.
ಆರಂಭಿಕರಾಗಿ ಇಶಾನ್ ಕಿಶನ್, ರೋಹಿತ್ ಶರ್ಮಾ: ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಕೆಎಲ್ ರಾಹುಲ್ ಅಲಭ್ಯವಾಗಿದ್ದಾರೆ. ಗಾಯದ ಕಾರಣದಿಂದಾಗಿ ರಾಹುಲ್ ಸರಣಿಯಿಂದ ಸಂಪೊಊರ್ಣವಾಗಿ ಹೊರಗುಳಿದಿದ್ದಾರೆ. ಹೀಗಾಗಿ ಆರಂಭಿಕನಾಗಿ ರೋಹಿತ್ ಶರ್ಮಾಗೆ ಇಶಾನ್ ಕಿಶನ್ ಸಾಥ್ ನೀಡುವ ಸಾಧ್ಯತೆ ಹೆಚ್ಚಿದೆ. ಯುವ ಆಟಗಾರ ಋತುರಾಜ್ ಗಾಯಕ್ವಾಡ್ ಕೂಡ ಭಾರತ ಸ್ಕ್ವಾಡ್‌ನಲ್ಲಿದ್ದು ಇದು ಕೂಡ ಉತ್ತಮ ಆಯ್ಕೆಯಾಗಿರಲಿದೆ.
ಮಧ್ಯಮ ಕ್ರಮಾಂಕ: ವಿರಾಟ್ ಕೊಹ್ಲಿ, ರಿಷಭ್ ಪಂತ್, ಶ್ರೇಯಸ್ ಐಯ್ಯರ್/ಸೂರ್ಯಕುಮಾರ್ ಯಾದವ್: ಮಾಜಿ ನಾಯಕ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಇಳಿಯುವುದರಲ್ಲಿ ಅನುಮಾನವಿಲ್ಲ. ವಿರಾಟ್ ಕೊಹ್ಲಿ ವಿಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿರುವ ಕಾರಣ ಅವರ ಮೇಲೆ ಸಾಕಷ್ಟು ಒತ್ತಡವೂ ಇದೆ. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಐಯ್ಯರ್ ಅಥವಾ ಸೂರ್ಯಮುಕಾರ್ ಯಾದವ್ ಇಬ್ಬರಲ್ಲಿ ಒಬ್ಬರಿಗೆ ಅವಕಾಶ ದೊರೆಯುವ ಸಾಧ್ಯತೆಯಿದೆ. ಮಂಗಳವಾರ ನೆಟ್ಸ್‌ನಲ್ಲಿ ಸೂರ್ಯಕುಮಾರ್ ಯಾದವ್ ಹೆಚ್ಚಾಗಿ ಕಾಣಿಸಿಕೊಳ್ಳದ ಕಾರಣ ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್‌ಗೆ ವಿಶ್ರಾಂತಿ ನೀಡಿದರೂ ಅಚ್ಚರಿಯಿಲ್ಲ. ಆದರೆ ಶ್ರೇಯಸ್ ಐಯ್ಯರ್‌ಗೆ ಹೋಲಿಸಿದರೆ ಸದ್ಯದ ಫಾರ್ಮನ್‌ನ್ಲಲಿ ಸೂರ್ಯಕುಮಾರ್ ಯಾದವ್ ಅತ್ಯುತ್ತಮ ಆಯ್ಕೆ. ಇನ್ನು ಐದನೇ ಕ್ರಮಾಂಕದಲ್ಲಿ ರಿಷಭ್ ಪಂತ್ ಕಣಕ್ಕಿಳಿಯಲಿದ್ದಾರೆ.
ಆಲ್‌ರೌಂಡರ್‌ಗಳು: ವೆಂಕಟೇಶ್ ಐಯ್ಯರ್, ದೀಪಕ್ ಚಾಹರ್: ಇನ್ನು ಈ ವೆಂಕಟೇಶ್ ಅಯ್ಯರ್ ಆಲ್‌ರೌಂಡರ್ ಆಗಿ ಈ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. ದಕ್ಷಿಣ ಆಪ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಫಲವಾಗಿದ್ದ ವೆಂಕಟೇಶ್ ಐಯ್ಯರ್ ಚುಟುಕು ಸರಣಿಯಲ್ಲಿ ಸಿಕ್ಕ ಅವಕಾಶವನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕಿದೆ. ಇನ್ನು ವೈಟ್‌ಬಾಲ್ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಸಾಮರ್ಥ್ಯ ಹೊಂದಿರುವ ದೀಪಕ್ ಚಾಹರ್ ಕೂಡ ಬೌಲರ್ ಆಗಿ ಮಾತ್ರವಲ್ಲದೆ ಬ್ಯಾಟರ್ ಆಗಿಯೂ ನಿರ್ಣಾಯಕ ಪಾತ್ರವಹಿಸುವ ಸಾಮರ್ಥ್ಯ ಹೊಂದಿದ್ದಾರೆ.
ಬೌಲರ್‌ಗಳು: ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಆವೇಶ ಖಾನ್, ಯುಜುವೇಂದ್ರ ಚಾಹಲ್: ಈ ಸರಣಿಯಲ್ಲಿ ಟೀಮ್ ಇಂಡಿಯಾದಲ್ಲಿ ಮತ್ತೊಮ್ಮೆ ಅವಕಾಶ ಪಡೆದುಕೊಂಡಿರುವ ಐಪಿಎಲ್ ಸ್ಟಾರ್ ಹರ್ಷಲ್ ಪಟೇಲ್ ಮತ್ತೊಮ್ಮೆ ಮಿಂಚುವ ವಿಶ್ವಾಸದಲ್ಲಿದ್ದಾರೆ, ಇನ್ನು ಮೊಹಮ್ಮದ್ ಸಿರಾಜ್ ಕೂಡ ಪ್ರಮುಖ ವೇಗಿಯಾಗಿ ತಂಡದಲ್ಲಿದ್ದರೆ ಯುವ ಆಟಗಾರ ಆವೇಶ್ ಖಾನ್ ಕೂಡ ಪ್ರಮುಖ ಆಟಗಾರರ ಅಲಭ್ಯತೆಯಲ್ಲಿ ಅವಕಾಶ ಗಿಟ್ಟಿಸಿಕೊಳ್ಳುವ ಸಾಧ್ಯತೆಯಿದೆ. ಇನ್ನು ಸ್ಪಿನ್ನರ್ ಯುಜುವೇಂದ್ರ ಚಾಹಲ್ ಪ್ರಮುಖ ಸ್ಪಿನ್ನರ್ ಆಗಿ ಕಣಕ್ಕಿಳಿಯಬಹುದು.
ಭಾರತ ಟಿ20 ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್ (ಉಪನಾಯಕ/ ವಿಕೆಟ್ ಕೀಪರ್), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷಲ್ ಪಟೇಲ್, ಋತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ಕುಲದೀಪ್ ಯಾದವ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications