ಯಶಸ್ವಿ, ಗಿಲ್ ಅಮೋಘ ಜೊತೆಯಾಟ: 4ನೇ ಪಂದ್ಯವನ್ನು 9 ವಿಕೆಟ್‌ಗಳ ಅಂತರದಿಂದ ಗೆದ್ದ ಬಾರತ
ಭಾರತ ಹಾಗೂ ವೆಸ್ಟ್ ಇಂಡಿಸ್ ತಂಡಗಳ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ. ಯುವ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ ಹಾಗೂ ಶುಬ್ಮನ್ ಗಿಲ್ ಅಮೋಘ ಜೊತೆಯಾಟ ನೀಡಿದ್ದು ವೆಸ್ಟ್ ಇಂಡೀಸ್ ತಂಡಕ್ಕೆ ಗೆಲ್ಲಲು ಯಾವುದೇ ಅವಕಾಶವಿಲ್ಲದಂತೆ ಮಾಡಿದರು.

ಶುಬ್ಮನ್ ಗಿಲ್ ಹಾಗೂ ಯಶಸ್ವಿ ಜೈಸ್ವಾಲ್ ಜೋಡಿ ಭಾರತದ ಪರವಾಗಿ ದಾಖಲೆಯ ಜೊತೆಯಾಟ ನೀಡಿ ಬೇರ್ಪಟ್ಟಿದ್ದಾರೆ. ಆರಂಭಿಕ ವಿಕೆಟ್‌ಗೆ ಈ ಜೋಡಿ ಭರ್ಜರಿ 165 ರನ್‌ಗಳ ಜೊತೆಯಾಟ ನೀಡುವ ಮೂಲಕ ಭಾರತದ ಪರವಾಗಿ ಅತಿ ಹೆಚ್ಚು ರನ್‌ಗಳ ಜೊತೆಯಾಟ ನೀಡಿದ ದಾಖಲೆಯನ್ನು ಸರಿಗಟ್ಟಿದ್ದಾರೆ. ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಕೂಡ ಇಷ್ಟೇ ರನ್‌ಗಳ ಜೊತೆಯಾಟ ನೀಡಿದ್ದು ಆ ದಾಖಲೆಯನ್ನು ಈಗ ಗಿಲ್ ಯಶಸ್ವಿ ಜೋಡಿ ಸರಿಗಟ್ಟಿದೆ.
ಈ ಪಂದ್ಯದಲ್ಲಿ ಶುಬ್ಮನ್ ಗಿಲ್ 47 ಎಸೆತಗಳಲ್ಲಿ 3 ಬೌಂಡರಿ 5 ಸಿಕ್ಸರ್ ನೆರವಿನಿಂದ 77 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡರು. ಇನ್ನು ಎರಡನೇ ಪಂದ್ಯವನ್ನಾಡುತ್ತಿರುವ ಯಶಸ್ವಿ ಜೈಸ್ವಾಲ್ 84 ರನ್‌ಗಳನ್ನು ಗಳಿಸಿ ಅಜೇಯವಾಗುಳಿದಿದ್ದಾರೆ. ತಿಲಕ್ ವರ್ಮಾ 7 ರನ್‌ಗಳಿಸಿ ಅಜೇಯವಾಗುಳಿದರು.
ಇನ್ನು ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದ ವೆಸ್ಟ್ ಇಂಡೀಸ್ ತಂಡದ ಪರವಾಗಿ ಶಾಯ್ ಹೋಪ್ ಹಾಗೂ ಹೇಟ್ಮೇಯರ್ ಅದ್ಭುತ ಪ್ರದರ್ಶನ ನೀಡಿದರು. ಶಾಯ್ ಹೋಪ್ 45 ರನ್‌ಗಳನ್ನು ಗಳಿಸಿದ್ದರೆ ಹೇಟ್ಮೇಯರ್ 61 ರನ್‌ಗಳ ಕೊಡುಗೆ ನೀಡಿದರು. ಹೀಗಾಗಿ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 178 ರನ್‌ಗಳ ಸವಾಲಿನ ಗುರಿ ನೀಡಲು ಯಶಸ್ವಿಯಾಗಿತ್ತು.
ಈ ಗೆಲುವಿನ ಮೂಲಕ ಟೀಮ್ ಇಂಡಿಯಾ ಸರಣಿಯಲ್ಲಿ ಅದ್ಭುತ ಕಮ್‌ಬ್ಯಾಕ್ ಮಾಡಿದ್ದು ಸರಣಿಯನ್ನು 2-2 ಅಂತರದಿಂದ ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ. ಭಾನುವಾರ ಕೊನೆಯ ಪಂದ್ಯ ನಡೆಯಲಿದ್ದು ಈ ಪಂದ್ಯದಲ್ಲಿ ಗೆದ್ದ ತಂಡ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಳ್ಳಲಿದೆ.
ವೆಸ್ಟ್ ಇಂಡೀಸ್ ಆಡುವ ಬಳಗ: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರೊಮಾರಿಯೋ ಶೆಫರ್ಡ್, ಜೇಸನ್ ಹೋಲ್ಡರ್, ಅಕೇಲ್ ಹೋಸೇನ್, ಓಡಿಯನ್ ಸ್ಮಿತ್, ಓಬೆಡ್ ಮೆಕಾಯ್
ಬೆಂಚ್: ಒಶಾನೆ ಥಾಮಸ್, ಜಾನ್ಸನ್ ಚಾರ್ಲ್ಸ್, ಅಲ್ಜಾರಿ ಜೋಸೆಫ್, ರೋಸ್ಟನ್ ಚೇಸ್
ಟೀಮ್ ಇಂಡಿಯಾ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ಕುಲದೀಪ್ ಯಾದವ್
ಬೆಂಚ್: ಉಮ್ರಾನ್ ಮಲಿಕ್, ಅವೇಶ್ ಖಾನ್, ರವಿ ಬಿಷ್ಣೋಯ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications