Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ವೆಸ್ಟ್ ಇಂಡೀಸ್: ನಾಯಕತ್ವದ ಹೊರೆ ಇಲ್ಲದೇ ಹುಮ್ಮಸ್ಸಿನಿಂದ ಅಭ್ಯಾಸ ನಡೆಸಿದ ಕೊಹ್ಲಿ

India vs West Indies: Virat Kohli loving practice without captaincy burden

ಕಳೆದ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ನಂತರ ವಿರಾಟ್ ಕೊಹ್ಲಿ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದಿಂದ ಕೆಳಗಿಳಿದರು. ಹೀಗೆ ವಿರಾಟ್ ಕೊಹ್ಲಿ ನಂತರ ರೋಹಿತ್ ಶರ್ಮಾ ಭಾರತ ಟಿ ಟ್ವೆಂಟಿ ತಂಡದ ನೂತನ ನಾಯಕರಾಗಿ ಆಯ್ಕೆಗೊಂಡರು. ಹಾಗೂ ತಾವು ಭಾರತ ಟಿ ಟ್ವೆಂಟಿ ತಂಡದ ಪೂರ್ಣಾವಧಿ ನಾಯಕನಾಗಿ ಕಣಕ್ಕಿಳಿದ ಮೊದಲ ಸರಣಿಯಲ್ಲಿಯೇ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ 3 - 0 ಅಂತರದಲ್ಲಿ ಟಿ ಟ್ವೆಂಟಿ ಸರಣಿಯಲ್ಲಿ ವೈಟ್ ವಾಷ್ ಸಾಧನೆ ಮಾಡಿತು. ಹೀಗೆ ಟಿ ಟ್ವೆಂಟಿ ನಾಯಕನಾಗಿ ಶುಭಾರಂಭವನ್ನು ಮಾಡಿದ ರೋಹಿತ್ ಶರ್ಮಾ ನಂತರದ ದಿನಗಳಲ್ಲಿ ಭಾರತ ಏಕದಿನ ತಂಡದ ಪೂರ್ಣಾವಧಿ ನಾಯಕನಾಗಿಯೂ ಕೂಡ ಆಯ್ಕೆಗೊಂಡರು. ಹೌದು, ವೈಟ್ ಬಾಲ್ ತಂಡಗಳಿಗೆ ಒಬ್ಬನೇ ನಾಯಕನಿರಬೇಕು ಎಂಬ ನಿರ್ಧಾರದಿಂದ ವಿರಾಟ್ ಕೊಹ್ಲಿಯನ್ನು ಭಾರತ ಏಕದಿನ ತಂಡದ ನಾಯಕತ್ವದಿಂದ ಕೆಳಗಿಳಿಸಿದ ಬಿಸಿಸಿಐ ರೋಹಿತ್ ಶರ್ಮಾ ಹೆಗಲಿಗೆ ಜವಬ್ದಾರಿಯನ್ನು ಹಾಕಿತು.

ಹೀಗೆ ಭಾರತ ಏಕದಿನ ತಂಡದ ನಾಯಕನಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿಯೇ ಕಣಕ್ಕಿಳಿಯಬೇಕಿದ್ದ ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದರು. ಸದ್ಯ ಗಾಯದ ಸಮಸ್ಯೆಗಳಿಂದ ಚೇತರಿಸಿಕೊಂಡಿರುವ ರೋಹಿತ್ ಶರ್ಮಾ ಇದೀಗ ವೆಸ್ಟ್ಇಂಡೀಸ್ ವಿರುದ್ಧದ ಏಕದಿನ ಸರಣಿಯ ಮೂಲಕ ಭಾರತ ಏಕದಿನ ತಂಡದ ಪೂರ್ಣಾವಧಿ ನಾಯಕನಾಗಿ ಕಣಕ್ಕಿಳಿಯುತ್ತಿದ್ದಾರೆ. ಹಾಗೂ ಅಹಮದಾಬಾದ್ ನಗರದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಅಭ್ಯಾಸವನ್ನು ಆರಂಭಿಸಿದೆ.

ಅತ್ತ ನಾಯಕತ್ವದ ಜವಾಬ್ದಾರಿಯನ್ನು ಕಳೆದುಕೊಂಡಿರುವ ವಿರಾಟ್ ಕೊಹ್ಲಿ ಸದ್ಯ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ನಡೆಸುತ್ತಿರುವ ಅಭ್ಯಾಸದಲ್ಲಿ ಯಾವುದೇ ಹೊರೆಯಿಲ್ಲದೆ ಹುಮ್ಮಸ್ಸಿನಿಂದ ತೊಡಗಿಕೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಎಲ್ಲಾ ಮಾದರಿಯ ತಂಡಗಳ ನಾಯಕತ್ವದ ಜವಾಬ್ದಾರಿಯನ್ನು ತ್ಯಜಿಸಿರುವ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಈ ಸರಣಿಯ ಮೂಲಕ ತಮ್ಮ 71ನೇ ಶತಕವನ್ನು ಪೂರೈಸಲಿದ್ದಾರೆ ಎಂಬ ಅಭಿಪ್ರಾಯಗಳು ಕೂಡ ಇದೇ ಸಮಯದಲ್ಲಿ ವ್ಯಕ್ತವಾಗುತ್ತಿವೆ.

ವಿರಾಟ್ ಮಾತಿಗೆ ರೋಹಿತ್ ಏನಂದ್ರು: ಸ್ಟಂಪ್ ಮೈಕ್ನಲ್ಲಿ ರೆಕಾರ್ಡ್ ಆದ ಮಾತು ಫುಲ್ ವೈರಲ್ | Oneindia Kannada

Story first published: Saturday, February 5, 2022, 23:53 [IST]
Other articles published on Feb 5, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+