IND vs WI 1st T20: ರೋಹಿತ್, ಡಿಕೆ ಸ್ಫೋಟಕ ಬ್ಯಾಟಿಂಗ್: ವೆಸ್ಟ್ ಇಂಡೀಸ್‌ಗೆ 191 ರನ್ ಗುರಿ

ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾ ಶಿಖರ್ ಧವನ್ ನಾಯಕತ್ವದಲ್ಲಿ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದ ನಂತರ, ರೋಹಿತ್ ಶರ್ಮಾ ನಾಯಕತ್ವದಲ್ಲಿ ಇಂದಿನಿಂದ(ಶುಕ್ರವಾರ, ಜುಲೈ 29) ಕೆರಿಬಿಯನ್ನರ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆರಂಭಿಸಿದೆ.
ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ಐದು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಉತ್ತಮ ಮೊತ್ತ ಕಲೆಹಾಕಿದೆ. ಟಾಸ್ ಸೋತು ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಆತಿಥೇಯ ತಂಡಕ್ಕೆ 191 ಬೃಹತ್ ರನ್ ಗುರಿ ನೀಡಿದೆ.
ನಾಯಕ ರೋಹಿತ್ ಶರ್ಮಾ ಅವರ ಮಿಂಚಿನ ಅರ್ಧಶತಕ ಹಾಗೂ ಕೊನೆಯಲ್ಲಿ ಆರ್.ಅಶ್ವಿನ್ ಮತ್ತು ದಿನೇಶ್ ಕಾರ್ತಿಕ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿದ್ದು, ಎದುರಾಳಿ ತಂಡಕ್ಕೆ 191 ರನ್‌ಗಳ ಬೃಹತ್ ಗುರಿ ನೀಡಿದೆ.

ಅಗ್ರ ಕ್ರಮಾಂಕದಲ್ಲಿ ನಾಯಕ ರೋಹಿತ್ ಶರ್ಮಾ (44 ಎಸೆತಗಳಲ್ಲಿ 64 ರನ್), ಸೂರ್ಯಕುಮಾರ್ ಯಾದವ್ (16 ಎಸೆತಗಳಲ್ಲಿ 24 ರನ್) ಮತ್ತು ಶ್ರೇಯಸ್ ಅಯ್ಯರ್ (0) ಹಾಗೂ ಮಧ್ಯಮ ಕ್ರಮಾಂಕದಲ್ಲಿ ರಿಷಭ್ ಪಂತ್ (14), ಹಾರ್ದಿಕ್ ಪಾಂಡ್ಯ (1), ರವೀಂದ್ರ ಜಡೇಜಾ (16), ದಿನೇಶ್ ಕಾರ್ತಿಕ್ (19 ಎಸೆತಗಳಲ್ಲಿ 41 ರನ್), ಆರ್. ಅಶ್ವಿನ್ (13) ಮಿಶ್ರ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಭಾರತ ಸವಾಲಿನ ಮೊತ್ತ ಪೇರಿಸಿತು.
ಇನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿದ ಶ್ರೇಯಸ್ ಅಯ್ಯರ್ ಮತ್ತು ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯದಲ್ಲಿ ಕೆರಿಬಿಯನ್ನರ ಬೌಲಿಂಗ್ ದಾಳಿಗೆ ಪ್ರತಿರೋಧ ಒಡ್ಡಲು ವಿಫಲರಾದರು. ಈ ಇಬ್ಬರು ಬ್ಯಾಟ್ಸ್‌ಮನ್‌ಗಳು ಕ್ರಮವಾಗಿ 0 ಮತ್ತು 1 ರನ್ ಗಳಿಸಿ ಔಟಾದರು.
ನಾಯಕ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಮೊದಲ ವಿಕೆಟ್‌ಗೆ 4.4 ಓವರ್‌ಗಳಲ್ಲಿ 44 ರನ್ ಜೊತೆಯಾಟ ನೀಡಿ ಭಾರತಕ್ಕೆ ಉತ್ತಮ ಆರಂಭ ಒದಗಿಸಿದರು. ಆದರೆ ಮಧ್ಯದಲ್ಲಿ ಒಂದರ ಹಿಂದೆ ಒಂದು ವಿಕೆಟ್ ಉರುಳುತ್ತಿದ್ದಂತೆ ಭಾರತದ ರನ್ ವೇಗಕ್ಕೆ ಕಡಿವಾಣ ಬಿತ್ತು.

ರೋಹಿತ್ ಶರ್ಮಾ ತನ್ನ 27ನೇ ಟಿ20 ಅರ್ಧಶತಕವನ್ನು ಗಳಿಸಿದರು ಮತ್ತು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬ್ಯಾಟ್ಸ್‌ಮನ್‌ಗಳ ಗರಿಷ್ಠ 50 ಪ್ಲಸ್ ಸ್ಕೋರ್‌ಗಳ ಪಟ್ಟಿಯಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.
ಇನ್ನು ಬೌಲಿಂಗ್‌ನಲ್ಲಿ ವೆಸ್ಟ್ ಇಂಡೀಸ್ ಪರ ಅಲ್ಜಾರಿ ಜೋಸೆಫ್ 4 ಓವರ್‌ಗಳಲ್ಲಿ 46 ರನ್ ನೀಡಿ 2 ವಿಕೆಟ್ ಪಡೆದರು. ಅದೇ ರೀತಿ ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಓಡಿಯನ್ ಸ್ಮಿತ್, ಓಬೆಡ್ ಮೆಕಾಯ್, ಕೀಮೋ ಪಾಲ್ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ಭಾರತ ಮತ್ತು ವೆಸ್ಟ್ ಇಂಡೀಸ್ ಆಡುವ 11ರ ಬಳಗ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ರವಿ ಬಿಷ್ಣೋಯಿ, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್.
ವೆಸ್ಟ್ ಇಂಡೀಸ್ ತಂಡ: ಶಮರ್ಹ್ ಬ್ರೂಕ್ಸ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ನಿಕೋಲಸ್ ಪೂರನ್ (ನಾಯಕ/ವಿಕೆಟ್ ಕೀಪರ್), ಕೈಲ್ ಮೇಯರ್ಸ್, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಓಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್, ಕೀಮೋ ಪಾಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications