IND vs WI: ಮೊದಲ ಪಂದ್ಯದಲ್ಲಿ ಮಿಂಚಿದ ಧವನ್, ಗಿಲ್, ಅಯ್ಯರ್: ವಿಂಡೀಸ್‌ಗೆ 309 ರನ್‌ಗಳ ಗುರಿ

ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾ ಇಂದಿನಿಂದ(ಶುಕ್ರವಾರ, ಜುಲೈ 22) ಕೆರಿಬಿಯನ್ನರ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ20 ಸರಣಿ ಆರಂಭಿಸಿದೆ.
ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಶಿಖರ್ ಧವನ್ ನಾಯಕತ್ವದ ಭಾರತ ತಂಡ ಆತಿಥೇಯ ತಂಡದ ವಿರುದ್ಧ ಉತ್ತಮ ಮೊತ್ತ ಕಲೆಹಾಕಿದೆ.
ನಾಯಕ ಶಿಖರ್ ಧವನ್, ಶುಭ್‌ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಅವರ ಅರ್ಧ ಶತಕದ ನೆರವಿನಿಂದ ಭಾರತ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 308 ರನ್ ಗಳಿಸಿದ್ದು, ಎದುರಾಳಿ ತಂಡಕ್ಕೆ 309 ರನ್‌ಗಳ ಬೃಹತ್ ಗುರಿ ನೀಡಿದೆ.

3 ರನ್‌ಗಳಿಂದ ಶತಕ ವಂಚಿತರಾದ ನಾಯಕ ಶಿಖರ್ ಧವನ್
ಅಗ್ರ ಕ್ರಮಾಂಕದಲ್ಲಿ ನಾಯಕ ಶಿಖರ್ ಧವನ್ (97), ಶುಭ್‌ಮನ್ ಗಿಲ್ (64) ಮತ್ತು ಶ್ರೇಯಸ್ ಅಯ್ಯರ್ (54) ಹಾಗೂ ಮಧ್ಯಮ ಕ್ರಮಾಂಕದಲ್ಲಿ ದೀಪಕ್ ಹೂಡಾ (27), ಅಕ್ಷರ್ ಪಟೇಲ್ (21) ಉತ್ತಮ ಬ್ಯಾಟಿಂಗ್ ಪ್ರದರ್ಶನದ ಕಾರಣದಿಂದಾಗಿ ಭಾರತ ತಂಡ ಉತ್ತಮ ಮೊತ್ತ ಗಳಿಸಲು ಸಾಧ್ಯವಾಯಿತು.
ಇನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿದ ಸೂರ್ಯಕುಮಾರ್ ಯಾದವ್ ಮತ್ತು ಸಂಜು ಸ್ಯಾಮ್ಸನ್ ಮೊದಲ ಪಂದ್ಯದಲ್ಲಿ ಕೆರಿಬಿಯನ್ನರ ಬೌಲಿಂಗ್ ದಾಳಿಗೆ ಪ್ರತಿರೋಧ ಒಡ್ಡಲು ವಿಫಲರಾದರು. ಈ ಇಬ್ಬರು ಬ್ಯಾಟ್ಸ್‌ಮನ್‌ಗಳು ಕ್ರಮವಾಗಿ 13 ಮತ್ತು 12 ರನ್ ಗಳಿಸಿ ಔಟಾದರು.

ಮೊದಲ ವಿಕೆಟ್‌ಗೆ 17.4 ಓವರ್‌ಗಳಲ್ಲಿ 119 ರನ್ ಜೊತೆಯಾಟ
ನಾಯಕ ಶಿಖರ್ ಧವನ್ ಮತ್ತು ಶುಭ್‌ಮನ್ ಗಿಲ್ ಮೊದಲ ವಿಕೆಟ್‌ಗೆ 17.4 ಓವರ್‌ಗಳಲ್ಲಿ 119 ರನ್ ಜೊತೆಯಾಟ ನೀಡಿ ಭಾರತಕ್ಕೆ ಉತ್ತಮ ಆರಂಭ ಒದಗಿಸಿದರು. ಆದರೆ ಮಧ್ಯದಲ್ಲಿ ಒಂದರ ಹಿಂದೆ ಒಂದು ವಿಕೆಟ್ ಉರುಳುತ್ತಿದ್ದಂತೆ ಭಾರತದ ರನ್ ವೇಗಕ್ಕೆ ಕಡಿವಾಣ ಬಿತ್ತು.
ಒಂದು ಹಂತದಲ್ಲಿ ಭಾರತ 119/1 ಮೂಲಕ ದೊಡ್ಡ ಮೊತ್ತದ ಮುನ್ಸೂಚನೆ ನೀಡಿತ್ತು. ಆದಾಗ್ಯೂ, ವೆಸ್ಟ್ ಇಂಡೀಸ್ ನಿಯಮಿತ ಮಧ್ಯಂತರದಲ್ಲಿ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರಿಂದ ದೊಡ್ಡ ಮೊತ್ತ ಬಾರಿಸಲು ಅವಕಾಶ ನೀಡಲಿಲ್ಲ.

ಗುಡಕೇಶ್ ಮೋಟಿ 10 ಓವರ್‌ಗಳಲ್ಲಿ 54 ರನ್ ನೀಡಿ 2 ವಿಕೆಟ್
ಇನ್ನು ಬೌಲಿಂಗ್‌ನಲ್ಲಿ ವೆಸ್ಟ್ ಇಂಡೀಸ್ ಪರ ಅಲ್ಜಾರಿ ಜೋಸೆಫ್ 10 ಓವರ್‌ಗಳಲ್ಲಿ 61 ರನ್ ನೀಡಿ 2 ವಿಕೆಟ್ ಪಡೆದರು. ಅದೇ ರೀತಿ ಗುಡಕೇಶ್ ಮೋಟಿ 10 ಓವರ್‌ಗಳಲ್ಲಿ 54 ರನ್ ನೀಡಿ 2 ವಿಕೆಟ್ ಪಡೆದರು. ಇನ್ನು ಅಕೆಲ್ ಹೊಸೈನ್, ರೊಮಾರಿಯೋ ಶೆಫರ್ಡ್ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಭಾರತ vs ವೆಸ್ಟ್ ಇಂಡೀಸ್ ಆಡುವ 11ರ ಬಳಗ
ವೆಸ್ಟ್ ಇಂಡೀಸ್: ಶಾಯ್ ಹೋಪ್ (ವಿಕೆಟ್ ಕೀಪರ್), ಬ್ರಾಂಡನ್ ಕಿಂಗ್, ಶಮರ್ ಬ್ರೂಕ್ಸ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್ (ನಾಯಕ), ರೋವ್ಮನ್ ಪೊವೆಲ್, ಅಕೆಲ್ ಹೊಸೈನ್, ರೊಮಾರಿಯೋ ಶೆಫರ್ಡ್, ಅಲ್ಜಾರಿ ಜೋಸೆಫ್, ಗುಡಕೇಶ್ ಮೋಟಿ, ಜೇಡನ್ ಸೀಲ್ಸ್
ಭಾರತ: ಶಿಖರ್ ಧವನ್ (ನಾಯಕ), ಶುಭ್‌ಮನ್ ಗಿಲ್, ಶ್ರೇಯಸ್ ಅಯ್ಯರ್ (ಉಪನಾಯಕ), ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ದೀಪಕ್ ಹೂಡಾ, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications